ಮತ್ತಾಯ 20:23 - ಕನ್ನಡ ಸತ್ಯವೇದವು C.L. Bible (BSI)23 ಆಗ ಯೇಸು, “ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು," ಎಂದು ನುಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಗ ಆತನು ಅವರಿಗೆ, “ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಗ ಆತನು ಅವರಿಗೆ - ನನ್ನ ಪಾತ್ರೆಯಲ್ಲಿ ನೀವು ಕುಡಿಯುವಿರಿ ಸರಿ; ಆದರೆ ನನ್ನ ಎಡಬಲಗಡೆಗಳಲ್ಲಿ ಕೂತುಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೇಸು ಅವರಿಗೆ, “ನಾನು ಅನುಭವಿಸಲಿರುವ ಸಂಕಟಗಳನ್ನು ನೀವು ನಿಜವಾಗಿಯೂ ಅನುಭವಿಸುವಿರಿ. ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವವನನ್ನು ಆಯ್ಕೆಮಾಡುವವನು ನಾನಲ್ಲ. ನನ್ನ ತಂದೆಯು ಆ ಸ್ಥಳಗಳನ್ನು ಯಾರಿಗಾಗಿ ಕಾಯ್ದಿರಿಸಿದ್ದಾನೋ ಅವರಿಗೇ ಆ ಅವಕಾಶವನ್ನು ಕೊಡುತ್ತಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅದಕ್ಕೆ ಯೇಸು, “ನನ್ನ ಪಾತ್ರೆಯಿಂದ ನೀವು ಕುಡಿಯುವಿರಿ, ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವಂತೆ ಅನುಗ್ರಹಿಸುವುದು ನನ್ನದಲ್ಲ, ನನ್ನ ತಂದೆಯಿಂದ ಅದು ಯಾರಿಗೋಸ್ಕರ ಸಿದ್ಧವಾಗಿದೆಯೋ ಅವರಿಗೇ ಕೊಡಲಾಗುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತನ್ನಾ ಜೆಜುನ್ ತೆಂಕಾ,“ ತುಮಿ ಮಿಯಾ ಫಿತಲ್ಯಾ ಕಸ್ಟಾಚ್ಯಾ ಆಯ್ದಾನಾತ್ಲೆ ತುಮಿ ಫಿತ್ಯಾಶಿ ತೆ ಖರೆ ಹಾಯ್. ಖರೆ ಕೊನ್ ಮಾಜ್ಯಾ ಉಜ್ವ್ಯಾಬಾಜುಕ್ ಅನಿ ರೊಡ್ಡ್ಯಾ ಬಾಜುಕ್ ಬಸ್ತಲೆ ಮನುನ್ ಎಚುನ್ ಕಾಡ್ತಲೊ ಅದಿಕಾರ್ ಮಾಕಾ ನಾ. ಜೆ ಕೊನಾಕ್ ತೊ ಜಾಗೊ ಮಾಜ್ಯಾ ಬಾಬಾನ್ ತಯಾರ್ ಕರುನ್ ಥವ್ಲ್ಯಾನಾಯ್ ತೆಂಕಾ ತೊ ಗಾವ್ತಾ.” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |