Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:24 - ಕನ್ನಡ ಸತ್ಯವೇದವು C.L. Bible (BSI)

24 ಉಳಿದ ಹತ್ತುಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಅಣ್ಣತಮ್ಮಂದಿರ ಮೇಲೆ ಸಿಟ್ಟುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಶಿಷ್ಯರ ಮೇಲೆ ಕೋಪಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಬೇರೆ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ, ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಹುರಲ್ಲ್ಯಾ ಧಾ ಶಿಸಾನಿ ಹೆ ಆಯಿಕ್ಲ್ಯಾನಿ. ತನ್ನಾ ತೆಕಾ ಹ್ಯಾ ದೊನ್ ಭಾವಾಂಚ್ಯಾ ವರ್‍ತಿ ರಾಗ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:24
13 ತಿಳಿವುಗಳ ಹೋಲಿಕೆ  

ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ನಿಮ್ಮ ಹೃದಯದಲ್ಲಿ ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ತುಂಬಿರುವಾಗ ಜ್ಞಾನಿಗಳೆಂದು ಕೊಚ್ಚಿಕೊಳ್ಳಬೇಡಿ; ಸತ್ಯಕ್ಕೆ ವಿರುದ್ಧವಾಗಿ ಸುಳ್ಳಾಡಬೇಡಿ.


ಸ್ವಾರ್ಥಸಾಧನೆಗಾಗಲಿ, ಡಂಭಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ.


ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ.


ಉಳಿದ ಹತ್ತುಮಂದಿ ಶಿಷ್ಯರು ಇದನ್ನು ಕೇಳಿದಾಗ ಯಕೋಬ ಯೊವಾನ್ನರ ಮೇಲೆ ಸಿಟ್ಟುಗೊಂಡರು.


ಗರ್ವದಿಂದ ಹುಟ್ಟುವುದು ಕಲಹಕದನ; ಆಲೋಚನೆಯನ್ನು ಕೇಳುವುದು ಸುಜ್ಞಾನ.


ಆಗ ಯೇಸು, “ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು," ಎಂದು ನುಡಿದರು.


ಯೇಸುವಾದರೋ, ಶಿಷ್ಯರೆಲ್ಲರನ್ನೂ ತಮ್ಮ ಬಳಿಗೆ ಕರೆದು, “ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿಂದ ದೊರೆತನಮಾಡುತ್ತಾರೆ; ಜನನಾಯಕರು ಎನ್ನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನಮಾಡುತ್ತಾರೆ.


ಇದನ್ನು ಕಂಡ ಯೇಸು ಸಿಟ್ಟುಗೊಂಡು ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ. ಅವರನ್ನು ತಡೆಯಬೇಡಿ; ದೇವರ ಸಾಮ್ರಾಜ್ಯ ಇಂಥವರದೇ.


ಯೇಸು ಸಬ್ಬತ್‍ದಿನದಲ್ಲಿ ಗುಣಮಾಡಿದ್ದನ್ನು ಕಂಡು, ಪ್ರಾರ್ಥನಾಮಂದಿರದ ಅಧಿಕಾರಿ ಕುಪಿತನಾದನು. ಕೂಡಿದ್ದ ಜನರನ್ನು ಉದ್ದೇಶಿಸಿ, “ಕೆಲಸ ಮಾಡಲು ಆರು ದಿನಗಳಿವೆ, ಆ ದಿನಗಳಲ್ಲಿ ಬಂದು ಗುಣಮಾಡಿಸಿಕೊಳ್ಳಿರಿ; ಸಬ್ಬತ್‍ದಿನದಲ್ಲಿ ಮಾತ್ರ ಕೂಡದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು