Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:27 - ಕನ್ನಡ ಸತ್ಯವೇದವು C.L. Bible (BSI)

27 ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮಗೆ ಸೇವಕನಾಗಿರಲಿ. ಪ್ರಥಮನಾಗಿರಲು ಆಶಿಸುವವನು ನಿಮ್ಮ ದಾಸನಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಿಮ್ಮಲ್ಲಿ ಪ್ರಮುಖನಾಗಿರಲು ಬಯಸುವವನು ನಿಮ್ಮ ದಾಸನಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಿಮ್ಮಲ್ಲಿ ಮೊದಲನೆಯವನಾಗಬೇಕೆಂದಿರುವವನು ನಿಮ್ಮ ಆಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಿಮ್ಮಲ್ಲಿ ಮೊದಲನೆಯವನಾಗಲು ಇಚ್ಛಿಸುವವನು ಗುಲಾಮನಂತೆ ಸೇವೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆಂದಿದ್ದರೆ, ಅವನು ನಿಮ್ಮ ಆಳಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅನಿ ತುಮ್ಚ್ಯಾತ್ಲೊ ಜೊ ಕೊನ್ ಪಯ್ಲೆ ಹೊವ್ಚೆ ಮನುನ್ ಯವಜ್ತಾ ತೊ ದುಸ್ರ್ಯಾಂಚೊ ಗುಲಾಮ್ ಹೊವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:27
12 ತಿಳಿವುಗಳ ಹೋಲಿಕೆ  

ಆದರೆ ನೀವು ಹಾಗಾಗಬಾರದು; ನಿಮ್ಮಲ್ಲಿ ಅತಿ ದೊಡ್ಡವನು ಅತಿ ಚಿಕ್ಕವನಂತಾಗಬೇಕು.


ನಾವು ನಮ್ಮನ್ನೇ ಕುರಿತು ಪ್ರಚಾರಮಾಡುತ್ತಿಲ್ಲ. ಆದರೆ ಕ್ರಿಸ್ತಯೇಸುವೇ ಪ್ರಭುವೆಂದೂ ಅವರಿಗೋಸ್ಕರ ನಾವು ನಿಮ್ಮ ದಾಸರೆಂದೂ ಪ್ರಚುರಪಡಿಸುತ್ತಿದ್ದೇವೆ.


ಈ ಮಗುವಿನಂತೆ ನಮ್ರಭಾವವುಳ್ಳವನೇ ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತ ದೊಡ್ಡವನು.


ಜನರು ನಾಗರೀಕರೇ ಆಗಿರಲಿ, ಅನಾಗರಿಕರೇ ಆಗಿರಲಿ, ವಿದ್ಯಾವಂತರೇ ಆಗಿರಲಿ, ಅವಿದ್ಯಾವಂತರೇ ಆಗಿರಲಿ, ಅವರೆಲ್ಲರಿಗೂ ನಾನು ಕರ್ತವ್ಯಬದ್ಧನಾಗಿದ್ದೇನೆ.


ಅಂತೆಯೇ ನಿಮ್ಮ ಆತ್ಮಕ್ಷೇಮಕ್ಕಾಗಿ ನನಗಿರುವುದೆಲ್ಲವನ್ನೂ ಸಂತೋಷದಿಂದ ವ್ಯಯಮಾಡುತ್ತೇನೆ. ನನ್ನನ್ನೇ ಸವೆಸಲು ಸಿದ್ಧನಾಗಿದ್ದೇನೆ. ಇಷ್ಟರಮಟ್ಟಿಗೆ ನಿಮ್ಮನ್ನು ನಾನು ಪ್ರೀತಿಸುವಾಗ ನಿಮ್ಮ ಪ್ರೀತಿ ಕಡಿಮೆಯಾಗುವುದು ಸರಿಯೇ?


“ಮಹಾ ಪ್ರೇಷಿತರು” ಎನಿಸಿಕೊಳ್ಳುವ ಆ ಜನರಿಗಿಂತ ನಾನು ಯಾವುದರಲ್ಲೂ ಕಡಿಮೆಯಿಲ್ಲ.


ಇದು ನಿಮಗೆ ಗೊತ್ತು. ನೀವು ಹಾಗಿರಬಾರದು.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು