ಮತ್ತಾಯ 21:12 - ಕನ್ನಡ ಸತ್ಯವೇದವು C.L. Bible (BSI)12 ಯೇಸುಸ್ವಾಮಿ ಮಹಾದೇವಾಲಯಕ್ಕೆ ಹೋದರು. ಅಲ್ಲಿ ಮಾರುತ್ತಿದ್ದವರನ್ನೂ ಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ನಾಣ್ಯ ವಿನಿಮಯ ಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿದರು. ಪಾರಿವಾಳಗಳನ್ನು ಮಾರುತ್ತಿದ್ದವರ ಮಣೆಗಳನ್ನು ಉರುಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಬಳಿಕ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಚಿನಿವಾರರ ಮೇಜುಗಳನ್ನೂ ಪಾರಿವಾಳಮಾರುವವರ ಕಾಲ್ಮಣೆಗಳನ್ನೂ ಕೆಡವಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೇಸು ದೇವಾಲಯದ ಒಳಕ್ಕೆ ಹೋದನು. ಅಲ್ಲಿ ಮಾರುತ್ತಿದ್ದ ಮತ್ತು ಕೊಂಡುಕೊಳ್ಳುತ್ತಿದ್ದ ಜನರನ್ನೆಲ್ಲಾ ಆತನು ಹೊರಗೆ ಓಡಿಸಿಬಿಟ್ಟನು; ನಾಣ್ಯ ವಿನಿಮಯ ಮಾಡುತ್ತಿದ್ದವರ ಮತ್ತು ಪಾರಿವಾಳಗಳನ್ನು ಮಾರುತ್ತಿದ್ದವರ ಮೇಜುಗಳನ್ನು ಕೆಡವಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೇಸು ದೇವಾಲಯದ ಅಂಗಳದೊಳಗೆ ಹೋಗಿ ಮಾರುತ್ತಿದ್ದವರನ್ನೂ ಕೊಂಡುಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ಹಣ ವಿನಿಮಯ ಮಾಡುತ್ತಿದ್ದವರ ಮೇಜುಗಳನ್ನೂ ಪಾರಿವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಜೆಜು ದೆವಾಚ್ಯಾ ಗುಡಿಚ್ಯಾ ದಾರಾತ್ ಗೆಲೊ ಅನಿ ಇಕ್ತಲೆ, ಇಕಾತ್ ಘೆತಲೆ ಕರ್‍ತಲ್ಯಾಕ್ನಿ ಭಾಯ್ರ್ ಘಾಟ್ಲ್ಯಾನ್. ಪೈಸ್ಯಾಂಚೊ ಯಾವಾರ್ ಕರ್‍ತಲ್ಯಾಂಚಿ ಮೆಜಾ ತೆನಿ ಪಾಡ್ವುನ್ ಘಾಟ್ಲ್ಯಾನ್ ಅನಿ ಪಾರಿವಾಳಾ ಇಕ್ತಲ್ಯಾಂಚ್ಯಾ ಕುರ್‍ಚಿಯಾಬಿ ಪಾಡ್ವುನ್ ಘಾಟ್ಲ್ಯಾನ್. ಅಧ್ಯಾಯವನ್ನು ನೋಡಿ |