Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:13 - ಕನ್ನಡ ಸತ್ಯವೇದವು C.L. Bible (BSI)

13 ಅವರನ್ನು ಉದ್ದೇಶಿಸಿ, “ ‘ಪ್ರಾರ್ಥನಾಲಯವೀ ನನ್ನ ಆಲಯ’ ಎಂದು ಪವಿತ್ರ ಗ್ರಂಥದಲ್ಲೇ ಲಿಖಿತವಾಗಿದೆ. ನೀವಾದರೋ ಇದನ್ನು ಕಳ್ಳಕಾಕರ ಗುಹೆಯನ್ನಾಗಿಸುತ್ತಿದ್ದೀರಿ,” ಎಂದು ಎಚ್ಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ಅವರಿಗೆ, “‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರಿಗೆ - ನನ್ನ ಆಲಯವು ಪ್ರಾರ್ಥನಾಲಯವೆನಿಸಿಕೊಳ್ಳುವದು ಎಂದು ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡುತ್ತೀರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೇಸು ಅಲ್ಲಿದ್ದ ಜನರಿಗೆಲ್ಲ, “‘ನನ್ನ ಆಲಯವು ಪ್ರಾರ್ಥನಾಲಯ ಎನಿಸಿಕೊಳ್ಳುವುದು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರ ಗವಿ’ಯನ್ನಾಗಿ ಮಾಡುತ್ತಿದ್ದೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೇಸು ಅವರಿಗೆ, “ ‘ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ,’ ಎಂದು ಬರೆದದೆ. ಆದರೆ ನೀವಾದರೋ ಅದನ್ನು, ‘ಕಳ್ಳರ ಗವಿಯನ್ನಾಗಿ’ ಮಾಡಿದ್ದೀರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅನಿ ತೆಂಕಾ,“ಪವಿತ್ರ್ ಪುಸ್ತಕಾತ್ ದೆವ್‍ ಮನ್ತಾ, ಮಾಜಿ ಗುಡಿ ಮಾಗ್ನಿ ಕರ್‍ತಲೆ ಘರ್ ಮನ್ತ್ಯಾತ್. ಮನುನ್ ಲಿವಲ್ಲೆ ಹಾಯ್. ಖರೆ ತುಮಿ ತೆ ಚೊರಾನಿ ನಿಪುನ್ ರ್‍ಹಾತಲೊ ಜಾಗೊ ಕರುನ್ ಟಾಕ್ಲ್ಯಾಶಿ!” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:13
8 ತಿಳಿವುಗಳ ಹೋಲಿಕೆ  

ನನ್ನ ಹೆಸರಿನಲ್ಲಿ ಕಟ್ಟಿರುವ ದೇವಾಲಯ ನಿಮ್ಮ ದೃಷ್ಟಿಗೆ ಕಳ್ಳರ ಗುಹೆ ಆಗಿದೆಯೋ? ಹೌದು, ಇದನ್ನೆಲ್ಲ ನಾನೆ ಖುದ್ದಾಗಿ ನೋಡಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”


“ ‘ಪ್ರಾರ್ಥನಾಲಯವೀ ನನ್ನ ಆಲಯ!’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ; ನೀವಾದರೋ ಇದನ್ನು ಕಳ್ಳಕಾಕರ ಗುಹೆಯನ್ನಾಗಿ ಮಾರ್ಪಡಿಸಿದ್ದೀರಿ,” ಎಂದರು.


“ ‘ಸರ್ವಜನಾಂಗಗಳಿಗೂ ಪ್ರಾರ್ಥನಾಲಯ ನನ್ನೀ ಆಲಯ’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ ಅಲ್ಲವೇ? ನೀವು ಅದನ್ನು ಕಳ್ಳಕಾಕರ ಗುಹೆಯನ್ನಾಗಿ ಮಾಡಿದ್ದೀರಿ,” ಎಂದು ಯೇಸು ಅವರಿಗೆ ಬುದ್ಧಿಹೇಳಿದರು.


ನಿನ್ನ ಆಜ್ಞೆಗಳು ಪ್ರಭು, ಸುಸ್ಥಿರ I ನಿನ್ನ ಆಲಯಕೆ ಪವಿತ್ರತೆ ಅರ್ಹ I ಯುಗಯುಗಾಂತರಕೂ ಅದು ಅರ್ಹ II


“ನಿಷ್ಕಾರಣವಾಗಿ ಅವರು ನನ್ನನ್ನು ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲೇ ಬರೆದಿರುವುದು ಹೀಗೆ ನೆರವೇರಿದೆ.


ಅದಕ್ಕೆ ಅವರು, “ಜುದೇಯದಲ್ಲಿರುವ ಬೆತ್ಲೆಹೇಮಿನಲ್ಲೇ ಹುಟ್ಟುವನು; ಏಕೆಂದರೆ :


ಅನಂತರ ಯೇಸುಸ್ವಾಮಿ ಮಹಾದೇವಾಲಯವನ್ನು ಪ್ರವೇಶಿಸಿದರು. ಅಲ್ಲಿ ಮಾರಾಟ ಮಾಡುತ್ತಿದ್ದವರನ್ನು ಹೊರಗಟ್ಟುತ್ತಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು