Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:17 - ಕನ್ನಡ ಸತ್ಯವೇದವು C.L. Bible (BSI)

17 ಅನಂತರ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟರು. ಬೆಥಾನಿಯಕ್ಕೆ ಬಂದು ರಾತ್ರಿಯನ್ನು ಅಲ್ಲೇ ಕಳೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಮಲಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಇಳುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಳಿಕ ಆತನು ಆ ಸ್ಥಳವನ್ನು ಬಿಟ್ಟು ಬೆಥಾನಿ ಪಟ್ಟಣಕ್ಕೆ ಹೊರಟುಹೋದನು. ಯೇಸು ಆ ರಾತ್ರಿ ಅಲ್ಲಿಯೇ ತಂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ, ಅಲ್ಲಿ ರಾತ್ರಿ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾನಾ ಜೆಜು ತೆಂಕಾ ಥೈಚ್ ಸೊಡುನ್ ಭೆಥನಿ ಮನ್ತಲ್ಯಾ ಗಾವಾಕ್ ಗೆಲೊ ಅನಿ ಪುರಾ ರಾತ್ ಥೈಚ್ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:17
16 ತಿಳಿವುಗಳ ಹೋಲಿಕೆ  

ಬೆಥಾನಿಯ ಜೆರುಸಲೇಮಿನಿಂದ ಸುಮಾರು ಮೂರು ಕಿಲೊಮೀಟರು ದೂರದಲ್ಲಿದೆ.


ಬೆಥಾನಿಯ ಎಂಬ ಊರಿನಲ್ಲಿ ಲಾಸರ್ ಎಂಬವನು ಅಸ್ವಸ್ಥನಾಗಿದ್ದನು. ಮರಿಯ ಮತ್ತು ಅವಳ ಸಹೋದರಿ ಮಾರ್ತ ಎಂಬವರ ಊರು ಅದೇ ಆಗಿತ್ತು. (


ಕಟ್ಟಕಡೆಗೆ ಯೇಸುಸ್ವಾಮಿ ಶಿಷ್ಯರನ್ನು ಬೆಥಾನಿಯ ಎಂಬ ಊರಿನವರೆಗೆ ಕರೆದುಕೊಂಡು ಹೋದರು. ಅಲ್ಲಿ ತಮ್ಮ ಕರಗಳನ್ನೆತ್ತಿ ಆಶೀರ್ವದಿಸಿದರು.


ಯೇಸು ಜೆರುಸಲೇಮನ್ನು ಸೇರಿ ಮಹಾದೇವಾಲಯವನ್ನು ಪ್ರವೇಶಿಸಿದರು. ಅಲ್ಲಿ ನಡೆಯುತ್ತಿದ್ದ ಎಲ್ಲವನ್ನೂ ನೋಡುವಷ್ಟರಲ್ಲಿ ಕತ್ತಲಾಗುತ್ತಾ ಬಂದಿತು; ಆದುದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು, ಅವರು ಬೆಥಾನಿಯಕ್ಕೆ ಹೊರಟುಹೋದರು.


ಸೂರ್ಯಾಸ್ತಮದ ಬಳಿಕ ಯೇಸು ಮತ್ತು ಶಿಷ್ಯರು ಪಟ್ಟಣದಿಂದ ಹೊರಗೆಹೋದರು.


ಈ ದುಷ್ಟ ಹಾಗೂ ಅಧರ್ಮ ಪೀಳಿಗೆ ಅದ್ಭುತಗಳನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವಲ್ಲದೆ ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು,” ಎಂದು ಹೇಳಿ ಅವರನ್ನು ಬಿಟ್ಟು ಹೋದರು.


ಓಲಿವ್ ತೋಪಿನ ಗುಡ್ಡದ ಬಳಿಯಿರುವ ಬೆತ್ಫಗೆ ಮತ್ತು ಬೆಥಾನಿಯ ಎಂಬ ಊರುಗಳನ್ನು ಸಮೀಪಿಸಿದಾಗ ತಮ್ಮ ಇಬ್ಬರು ಶಿಷ್ಯರನ್ನು ಕರೆದು,


ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಪ್ರಯಾಣ ಮುಂದುವರಿಸಿ ಒಂದು ಹಳ್ಳಿಗೆ ಬಂದರು. ಅಲ್ಲಿ ಮಾರ್ತಳೆಂಬ ಮಹಿಳೆ ಅವರನ್ನು ತಮ್ಮ ಮನೆಗೆ ಆಮಂತ್ರಿಸಿದಳು.


ಯೇಸುಸ್ವಾಮಿ ಮತ್ತು ಅವರ ಜೊತೆಯಲ್ಲಿದ್ದವರು ಜೆರುಸಲೇಮನ್ನು ಸಮೀಪಿಸಿದರು. ಓಲಿವ್ ಗುಡ್ಡದ ಬಳಿಯಿರುವ ಬೆತ್ಫಗೆ ಮತ್ತು ಬೆಥಾನಿಯ ಕಡೆಗೆ ಬಂದಾಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕರೆದು, ಹೀಗೆಂದು ಹೇಳಿಕಳುಹಿಸಿದರು:


ಯೇಸುಸ್ವಾಮಿ ತಮ್ಮ ಶಿಷ್ಯರ ಜೊತೆಯಲ್ಲಿ ಗಲಿಲೇಯ ಸರೋವರದ ತೀರಕ್ಕೆ ಹೊರಟುಹೋದರು. ಸಾವಿರಾರು ಜನರು ಅವರನ್ನು ಹಿಂಬಾಲಿಸಿದರು.


ಅಂದು ಯೇಸು ಬೆಥಾನಿಯದಲ್ಲಿ ಕುಷ್ಠರೋಗಿ ಸಿಮೋನನ ಮನೆಯಲ್ಲಿದ್ದರು.


ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಅವರಾರೂ ಉಳಿಯದಂತೆ ಅವರಿಗೆ ನಿರಂತರವಾಗಿ ಪುತ್ರಶೋಕವನ್ನುಂಟುಮಾಡುವೆನು. ನಾನು ಅವರಿಗೆ ವಿಮುಖನಾಗುವೆನು. ಅವರ ಗತಿ ಹೇಳತೀರದಂತಾಗುವುದು.


ಜೆರುಸಲೇಮ್, ಎಚ್ಚರಿಕೆಯಿಂದ ನಡೆದುಕೊ. ಇಲ್ಲವಾದರೆ ನಾನು ನಿನ್ನನ್ನು ಅಗಲಿಬಿಡುವೆನು. ನಿನ್ನನ್ನು ಪಾಳುಬಿದ್ದ ನಿರ್ಜನ ಪ್ರದೇಶವಾಗಿಸುವೆನು.”


ಯೇಸುಸ್ವಾಮಿ ಬೆಥಾನಿಯದಲ್ಲಿ, ಕುಷ್ಠರೋಗಿ ಸಿಮೋನನ ಮನೆಯಲ್ಲಿ ಇದ್ದರು. ಅಲ್ಲಿ ಊಟಕ್ಕೆ ಕುಳಿತಿದ್ದಾಗ, ಮಹಿಳೆಯೊಬ್ಬಳು ಅಮೃತಶಿಲೆಯ ಭರಣಿಯ ತುಂಬ ಅತ್ಯಮೂಲ್ಯವಾದ ಜಟಮಾಂಸಿ ಸುಗಂಧತೈಲವನ್ನು ತೆಗೆದುಕೊಂಡು ಬಂದು, ಭರಣಿಯನ್ನು ಒಡೆದು, ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು