Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:24 - ಕನ್ನಡ ಸತ್ಯವೇದವು C.L. Bible (BSI)

24 ಅದಕ್ಕೆ ಯೇಸು, “ನಾನು ನಿಮಗೆ ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ಉತ್ತರಕೊಟ್ಟರೆ ನಾನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿದ್ದೇನೆಂದು ನಿಮಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೇಸು ಅವರಿಗೆ ಹೇಳಿದ್ದೇನೆಂದರೆ, “ನಾನೂ ಸಹ ನಿಮ್ಮನ್ನು ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರಿಸಿದರೆ ಆಗ ನಾನು ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೇಸು ಅವರಿಗೆ ಹೇಳಿದ್ದೇನಂದರೆ - ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನೂ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬದನ್ನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನಗೆ ಉತ್ತರ ಕೊಟ್ಟರೆ, ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆಂದು ನಿಮಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅದಕ್ಕೆ ಯೇಸು, “ನಾನು ಸಹ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ. ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜೆಜುನ್ ತೆಂಕಾ,“ ಮಿಯಾ ತುಮ್ಕಾ ಎಕ್ ಸವಾಲ್ ಇಚಾರ್ತಾ ತೆಕಾ ತುಮಿ ಜಬಾಬ್ ದಿಲ್ಯಾರ್, ಹೆ ಸಗ್ಳೆ ಕರುಕ್ ಮಾಕಾ ಕೊನ್ ಹಕ್ಕ್ ದಿಲೊ, ಮನುನ್ ಮಿಯಾ ಸಾಂಗ್ತಾ.” ಮಟ್ಲ್ಯಾನ್, ಅನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:24
6 ತಿಳಿವುಗಳ ಹೋಲಿಕೆ  

ಆಗ ಯೇಸು ಅವರಿಗೆ, “ನಾನು ನಿಮಗೊಂದು ಪ್ರಶ್ನೆ ಹಾಕುತ್ತೇನೆ: ಸಬ್ಬತ್‍ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ?” ಎಂದರು.


ನಿಮ್ಮ ಸಂಭಾಷಣೆ ಯಾವಾಗಲೂ ಹಿತಕರವಾಗಿದ್ದು ಇತರರನ್ನು ಆಕರ್ಷಿಸುವಂತಿರಲಿ. ನೀವು ಯಾರು ಯಾರಿಗೆ, ಹೇಗೆ ಉತ್ತರಿಸಬೇಕು ಎಂಬುದನ್ನು ಕಲಿತುಕೊಳ್ಳಿರಿ.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ತರುವಾಯ ಯೇಸುಸ್ವಾಮಿ ಮಹಾದೇವಾಲಯದ ಒಳಕ್ಕೆ ಹೋಗಿ ಅಲ್ಲಿ ಬೋಧನೆಮಾಡತೊಡಗಿದರು. ಮುಖ್ಯಯಾಜಕರೂ ಪ್ರಜಾಪ್ರಮುಖರೂ ಅವರ ಬಳಿಗೆ ಬಂದು, “ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರಾರು?” ಎಂದು ಪ್ರಶ್ನಿಸಿದರು.


'ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ, ಮನುಷ್ಯರಿಂದಲೋ?’ “ ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು