Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:29 - ಕನ್ನಡ ಸತ್ಯವೇದವು C.L. Bible (BSI)

29 ಅದಕ್ಕೆ ಅವನು, ‘ನಾನು ಹೋಗುವುದಿಲ್ಲ’ ಎಂದು ಉತ್ತರವಿತ್ತ. ಆದರೂ ಅನಂತರ ಪಶ್ಚಾತ್ತಾಪಪಟ್ಟು ಅವನು ತೋಟಕ್ಕೆ ಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವನು ಪ್ರತ್ಯುತ್ತರವಾಗಿ, ‘ನಾನು ಹೋಗುವುದಿಲ್ಲವೆಂದು’ ಹೇಳಿದ್ದಾಗ್ಯೂ ತರುವಾಯ ತನ್ನ ಮನಸ್ಸನ್ನು ಬದಲಿಸಿ, ತೋಟಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವನು - ನಾನು ಹೋಗುವದಿಲ್ಲವೆಂದು ಹೇಳಿದಾಗ್ಯೂ ತರುವಾಯ ಪಶ್ಚಾತ್ತಾಪಪಟ್ಟು ತೋಟಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಅದಕ್ಕೆ ಮಗನು, ‘ನಾನು ಹೋಗುವುದಿಲ್ಲ’ ಎಂದನು. ಆದರೆ ಆ ಬಳಿಕ ತನ್ನ ಮನಸ್ಸನ್ನು ಬದಲಾಯಿಸಿಕೊಂಡು ಕೆಲಸಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಮಗನು ಉತ್ತರವಾಗಿ, ‘ನಾನು ಹೋಗುವುದಿಲ್ಲ’ ಎಂದು ಹೇಳಿ, ಅನಂತರ ಪಶ್ಚಾತ್ತಾಪಪಟ್ಟು ತೋಟಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತನ್ನಾ ತೊ ಲೆಕ್ ಮಿಯಾ ಜಾಯ್ನಾ ಮನ್ತಾ. ಖರೆ ಮಾನಾ ತೊ ಅಪ್ನಾಚೊ ಮನ್ ಬದಲ್ತಾ ಅನಿ ಬಾಬಾನ್ ಸಾಂಗಲ್ಲ್ಯಾ ಸರ್ಕೆ ಕಾಮಾಕ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:29
19 ತಿಳಿವುಗಳ ಹೋಲಿಕೆ  

ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ದಮಸ್ಕಸ್ ಮೊದಲ್ಗೊಂಡು ಜೆರುಸಲೇಮಿಗೂ ಮತ್ತು ಎಲ್ಲ ಜುದೇಯ ನಾಡಿಗೂ ಹಾಗೂ ಅನ್ಯಧರ್ಮೀಯರಲ್ಲಿಗೂ ಹೋಗಿ, ಜನರು ತಮ್ಮತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೈವಾಭಿಮುಖಿಗಳಾಗಬೇಕೆಂದು ಬೋಧಿಸಿದೆ; ಪಶ್ಚಾತ್ತಾಪ ಸೂಚಕಕಾರ್ಯಗಳನ್ನು ಕೈಗೊಳ್ಳುವಂತೆ ಘೋಷಿಸಿದೆ.


ಇವರಿಬ್ಬರಲ್ಲಿ ತಂದೆಯ ಇಷ್ಟದಂತೆ ನಡೆದವನು ಯಾರು?” ಎಂದು ಯೇಸು ಕೇಳಿದರು. “ಮೊದಲನೆಯ ಮಗನೇ,” ಎಂದು ಉತ್ತರಿಸಿದರು ಅವರು. ಆಗ ಯೇಸುಸ್ವಾಮಿ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲೇ ದೇವರಸಾಮ್ರಾಜ್ಯವನ್ನು ಪ್ರವೇಶಿಸುವರು ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.


“ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿಗಳಿಗೆ ಸಾರು,” ಎಂದಿತು.


“ಸರ್ವೇಶ್ವರನ ಹೆಸರಿನಲ್ಲಿ ನೀನು ನಮಗೆ ನುಡಿದ ಮಾತನ್ನು ನಾವು ಕೇಳಲೊಲ್ಲೆವು.


ಅದಕ್ಕೆ ಅವನು, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ,” ಎಂದು ಉತ್ತರಿಸಿದ.


“ಈ ಬಗ್ಗೆ ನಿಮಗೇನು ಅನಿಸುತ್ತದೆ? ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. ಒಮ್ಮೆ ಆತ ಮೊದಲನೆಯ ಮಗನ ಹತ್ತಿರ ಬಂದು, ‘ಮಗನೇ, ಈ ಹೊತ್ತು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡು’ ಎಂದ.


ತಂದೆ ಎರಡನೆಯ ಮಗನ ಹತ್ತಿರ ಹೋಗಿ ಅಂತೆಯೇ ತೋಟಕ್ಕೆ ಹೋಗಲು ಹೇಳಿದ. ಅವನು, ‘ಇಗೋ, ಹೋಗುತ್ತೇನಪ್ಪಾ’, ಎಂದು ಹೇಳಿದ. ಆದರೆ ಹೋಗಲೇ ಇಲ್ಲ.


ಆಗ ಮೋಶೆ, ಸರ್ವೇಶ್ವರ ಸ್ವಾಮಿ ತನ್ನನ್ನು ಕಳಿಸುವಾಗ ಯಾವ ಮಾತುಗಳನ್ನು ಹೇಳಿದರೋ ಏನೇನು ಸೂಚಕಕಾರ್ಯಗಳು ಮಾಡಬೇಕೆಂದು ಆಜ್ಞಾಪಿಸಿದರೋ ಅವುಗಳನ್ನೆಲ್ಲ ಆರೋನನಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು