Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:32 - ಕನ್ನಡ ಸತ್ಯವೇದವು C.L. Bible (BSI)

32 ಸ್ನಾನಿಕ ಯೊವಾನ್ನನು ಧರ್ಮಮಾರ್ಗವನ್ನು ತೋರಿಸಲು ಬಂದನು. ನೀವು ಆತನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಆತನನ್ನು ನಂಬಿದರು. ಇದನ್ನು ಕಂಡ ಮೇಲೂ ನೀವು ಪಶ್ಚಾತ್ತಾಪಪಡಲಿಲ್ಲ, ಯೊವಾನ್ನನನ್ನು ನಂಬಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯಾಕೆಂದರೆ, ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ; ಸುಂಕದವರು, ವೇಶ್ಯೆಯರು ಅವನನ್ನು ನಂಬಿದರು; ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡಲಿಲ್ಲ, ಅವನನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಯೋಹಾನನು ಧರ್ಮಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು, ನೀವು ಅವನನ್ನು ನಂಬಲಿಲ್ಲ; ಭ್ರಷ್ಟರೂ ಸೂಳೆಯರೂ ಅವನನ್ನು ನಂಬಿದರು; ನೀವು ಇದನ್ನು ನೋಡಿದಾಗ್ಯೂ ಪಶ್ಚಾತ್ತಾಪಪಡಲಿಲ್ಲ, ಅವನನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನೀವು ಜೀವಿಸತಕ್ಕ ಸರಿಯಾದ ಮಾರ್ಗವನ್ನು ತೋರಿಸಲು ಯೋಹಾನನು ಬಂದನು. ನೀವು ಯೋಹಾನನನ್ನು ನಂಬಲಿಲ್ಲ, ಆದರೆ ಸುಂಕವಸೂಲಿಗಾರರು ಮತ್ತು ವೇಶ್ಯೆಯರು ನಂಬಿದ್ದನ್ನು ನೀವು ನೋಡಿದ್ದೀರಿ. ಆದರೆ ನೀವಿನ್ನೂ ಬದಲಾವಣೆ ಹೊಂದಲು ಮತ್ತು ಅವನನ್ನು ನಂಬಲು ಇಷ್ಟಪಡುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಏಕೆಂದರೆ ಯೋಹಾನನು ನೀತಿ ಮಾರ್ಗದೊಡನೆ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಅವನನ್ನು ನಂಬಿದರು. ನೀವು ಇದನ್ನು ಕಂಡ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಜುವಾಂವ್ ಬಾವ್ತಿಸ್ ತುಮ್ಕಾ ಬರಿ ವಾಟ್ ದಾಕ್ವುಕ್ ಮನುನ್ ಯೆಲೊ, ಖರೆ ತುಮಿ ತೆಚೆ ವರ್‍ತಿ ವಿಶ್ವಾಸ್ ಕರುಕ್ನ್ಯಾಶಿ, ಖರೆ ತೆರ್‍ಗಿ ವಸುಲ್ ಕರ್‍ತಲ್ಯಾನಿ ಅನಿ ವೆಭಿಚಾರ್ ಕರ್‍ತಲ್ಯಾ ಲೊಕಾನಿ ತೆಚೆ ವರ್‍ತಿ ವಿಶ್ವಾಸ್ ಕರ್‍ಲ್ಯಾನಿ. ಹೆ ಸಗ್ಳೆ ಬಗುನ್ಬಿ ತುಮಿ ತುಮ್ಚಿ ಮನಾ ಬದ್ಲುನ್‍ ತೆಚೆ ವರ್‍ತಿ ವಿಶ್ವಾಸ್ ಕರುಕ್‍ನ್ಯಾಶಿ.” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:32
19 ತಿಳಿವುಗಳ ಹೋಲಿಕೆ  

'ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ, ಮನುಷ್ಯರಿಂದಲೋ?’ “ ಎಂದು ಕೇಳಿದರು.


ಅವರು ನೀತಿಯ ಮಾರ್ಗವನ್ನು ಅರಿತುಕೊಂಡು ತಾವು ಸ್ವೀಕರಿಸಿದ ಪವಿತ್ರ ಆಜ್ಞೆಯನ್ನು ತಿರಸ್ಕರಿಸುವುದಕ್ಕಿಂತ ಅದನ್ನು ಅರಿಯದವರಾಗಿದ್ದರೆ ಒಳ್ಳೆಯದಾಗುತ್ತಿತ್ತು.


ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖಳಾಗುವಂತೆ ನಾನು ಅವಳಿಗೆ ಕಾಲಾವಕಾಶ ಕೊಟ್ಟೆ. ಆದರೆ ಅವಳು ತನ್ನ ಜಾರತ್ವವನ್ನು ತ್ಯಜಿಸಿ ದೇವರಿಗೆ ಅಭಿಮುಖಳಾಗಲು ನಿರಾಕರಿಸುತ್ತಾಳೆ.


ಸಹೋದರರೇ, ಜೀವಸ್ವರೂಪರಾದ ದೇವರನ್ನು ಬಿಟ್ಟಗಲುವ ಕೆಟ್ಟಬುದ್ಧಿಯೂ ಅವಿಶ್ವಾಸವೂ ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಾಗಿರಿ.


ಬೋಧನೆಯಲ್ಲಿ ಪ್ರವೀಣನೂ ಕೇಡನ್ನು ಸಹಿಸದವನೂ ವಿರೋಧಿಗಳನ್ನು ತಾಳ್ಮೆಯಿಂದ ತಿದ್ದುವವನೂ ಆಗಿರಬೇಕು. ಆ ವಿರೋಧಿಗಳು ಪಶ್ಚಾತ್ತಾಪಪಟ್ಟು ಸನ್ಮಾರ್ಗವನ್ನು ಹಿಡಿಯುವಂತೆ ದೇವರು ಅವರಿಗೆ ಅನುಗ್ರಹಿಸಬಹುದು.


ಏಕೆಂದರೆ, ಯೊವಾನ್ನನು ಬಂದನು; ಅವನು ಅನ್ನಪಾನೀಯವನ್ನು ಸೇವಿಸಲಿಲ್ಲ. ಅದಕ್ಕೆ, ‘ಇವನಿಗೆ ದೆವ್ವ ಹಿಡಿದಿದೆ’ ಎಂದರು.


ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.


ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿಮಾಡುವವರೂ ಹಾಗೆ ಮಾಡುವುದಿಲ್ಲವೇ?


ಇವರಿಬ್ಬರಲ್ಲಿ ತಂದೆಯ ಇಷ್ಟದಂತೆ ನಡೆದವನು ಯಾರು?” ಎಂದು ಯೇಸು ಕೇಳಿದರು. “ಮೊದಲನೆಯ ಮಗನೇ,” ಎಂದು ಉತ್ತರಿಸಿದರು ಅವರು. ಆಗ ಯೇಸುಸ್ವಾಮಿ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲೇ ದೇವರಸಾಮ್ರಾಜ್ಯವನ್ನು ಪ್ರವೇಶಿಸುವರು ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು