Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:33 - ಕನ್ನಡ ಸತ್ಯವೇದವು C.L. Bible (BSI)

33 “ಇನ್ನೊಂದು ಸಾಮತಿಗೆ ಕಿವಿಗೊಡಿ: ಒಬ್ಬ ಯಜಮಾನ ಒಂದು ದ್ರಾಕ್ಷಿತೋಟ ಮಾಡಿಸಿದ. ಅದರ ಸುತ್ತ ಬೇಲಿಯನ್ನು ಹಾಕಿಸಿದ. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಅನಂತರ ಅದನ್ನು ಗೇಣಿದಾರರಿಗೆ ವಹಿಸಿ ಹೊರನಾಡಿಗೆ ಹೊರಟುಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 “ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನು ಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಮತ್ತೊಂದು ಸಾಮ್ಯವನ್ನು ಕೇಳಿರಿ - ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷೇತೋಟವನ್ನು ಮಾಡಿ ಅದರ ಸುತ್ತಲೂ ಬೇಲಿಹಾಕಿಸಿ ಅದರಲ್ಲಿ ದ್ರಾಕ್ಷೆಯ ಆಲೆಯನ್ನು ಮಾಡಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ಈ ಸಾಮ್ಯವನ್ನು ಕೇಳಿರಿ: ಒಬ್ಬ ಮನುಷ್ಯನಿಗೆ ಒಂದು ಸ್ವಂತ ತೋಟವಿತ್ತು. ಅವನು ತೋಟದಲ್ಲಿ ದ್ರಾಕ್ಷಿಯನ್ನು ಬೆಳೆಸಿದನು; ತೋಟದ ಸುತ್ತಲೂ ಗೋಡೆ ಕಟ್ಟಿ ದ್ರಾಕ್ಷಾರಸ ತಯಾರಿಸಲು ಆಲೆಯನ್ನು ಹೂಡಿಸಿದನು. ಕಾವಲಿಗಾಗಿ ಅಟ್ಟಣೆಯನ್ನೂ ಕಟ್ಟಿಸಿದನು. ಅವನು ಆ ತೋಟವನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟು ವಿದೇಶಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಯಜಮಾನನು ದ್ರಾಕ್ಷಿಯ ತೋಟವನ್ನು ಮಾಡಿ ಅದರ ಸುತ್ತಲೂ ಬೇಲಿ ಹಾಕಿದನು. ಅದರೊಳಗೆ ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ಗೇಣಿಗೆ ಕೊಟ್ಟು ದೂರದೇಶಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಜೆಜುನ್ “ಅನಿಎಕ್ ಕಾನಿ ಆಯ್ಕಾ” ಮಟ್ಲ್ಯಾನ್. ಎಗ್ದಾ ಎಕ್ ಶೆತಾಚೊ ಮಾಲಿಕ್ ಹೊತ್ತೊ. ತೆನಿ ಅಪ್ನಾಚ್ಯಾ ಶೆತಾತ್ ದ್ರಾಕ್ಷಿಚಿ ಝಾಡಾ ಲಾವ್ಲ್ಯಾನ್ ಭೊತ್ಯಾನಿ ಖುಪ್ ಘಾಟ್ಲ್ಯಾನ್, ಅನಿ ದ್ರಾಕ್ಷಿ ಮಳುಕ್ ಘಾನ್ಯಾಚೊ ಖಡ್ಡೊ ಖಂಡ್ಲ್ಯಾನ್. ಅನಿ ಶೆತ್ ರಾಕುಕ್ ಎಕ್ ಘಟ್ಮುಟ್ ಮಾಳೊ ಭಾಂದ್ಲ್ಯಾನ್. ಮಾನಾ ತೆ ಶೆತ್ ಗುತ್ಕೆ ಧರ್‍ತಲ್ಯಾಕ್ನಿ ಗುತ್ಕ್ಯಾನಿ ದಿಲ್ಯಾನ್ ಅನಿ ತೊ ಧುರ್‍ಲ್ಯಾ ದೆಸಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:33
23 ತಿಳಿವುಗಳ ಹೋಲಿಕೆ  

ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷೀಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


“ನಾನೇ ನಿಜವಾದ ದ್ರಾಕ್ಷಾಬಳ್ಳಿ. ನನ್ನ ಪಿತನೇ ತೋಟಗಾರ.


ಈ ಕಾರಣ ಯೇಸು ಅವರಿಗೆ ಒಂದು ಸಾಮತಿಯನ್ನು ಹೇಳಿದರು: “ಕುಲೀನನೊಬ್ಬ ರಾಜಪದವಿಯನ್ನು ಗಳಿಸಿಬರಲು ದೂರದ ರಾಜಧಾನಿಗೆ ಹೊರಟ.


ಇಸ್ರಯೇಲಿನವರೇ, ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಆಲಿಸಿರಿ: “ಈ ದೇಶದಲ್ಲಿ ಸತ್ಯ, ಪ್ರೀತಿ, ಭಕ್ತಿ ಎಂಬುದೇ ಇಲ್ಲ. ಇಲ್ಲಿನ ನಿವಾಸಿಗಳ ಮೇಲೆ ಸರ್ವೇಶ್ವರ ಆಪಾದನೆ ಹೊರಿಸಿದ್ದಾರೆ.


ಪ್ರವಾಸಕ್ಕೆಂದು ಯಜಮಾನನೊಬ್ಬನು ಮನೆಬಿಟ್ಟು ಹೋಗುವಾಗ ತನ್ನ ಸೇವಕರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಜವಾಬ್ದಾರಿಕೆಯನ್ನು ವಹಿಸಿ, ದ್ವಾರಪಾಲಕನಿಗೆ ‘ನೀನು ಎಚ್ಚರವಾಗಿರಬೇಕು,’ ಎಂದು ಅಪ್ಪಣೆಕೊಡುವ ರೀತಿಯಲ್ಲಿ ನಾನು ನಿಮಗೆ ಹೇಳುತ್ತಿದ್ದೇನೆ. ಎಚ್ಚರವಾಗಿರಿ;


“ಧರ್ಮಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಇದ್ದಾರೆ.


“ಈ ಬಗ್ಗೆ ನಿಮಗೇನು ಅನಿಸುತ್ತದೆ? ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. ಒಮ್ಮೆ ಆತ ಮೊದಲನೆಯ ಮಗನ ಹತ್ತಿರ ಬಂದು, ‘ಮಗನೇ, ಈ ಹೊತ್ತು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡು’ ಎಂದ.


“ಈಗ ಬಿತ್ತುವವನ ಸಾಮತಿಯ ಅರ್ಥವನ್ನು ಕೇಳಿ:


‘ಜುದೇಯದ ಅರಸರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನ ಸಂದೇಶವನ್ನು ಕೇಳಿರಿ. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ: ಈ ಸ್ಥಳದ ಮೇಲೆ ನಾನು ಕೇಡನ್ನು ಬರಮಾಡುವೆನು. ಅದರ ಸುದ್ದಿಯನ್ನು ಕೇಳುವವರ ಕಿವಿಗಳೂ ನಿಮಿರುವುವು.


ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳು; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರತಿಯೊಂದು ಕುಲಕ್ಕೆ ಕೊಡುವ ಎಲ್ಲ ಊರುಗಳಲ್ಲಿ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅಂಥವರು ಜನರಿಗೆ ನ್ಯಾಯವನ್ನು ವಿಚಾರಿಸಿ, ಸರಿಯಾದ ತೀರ್ಪುಕೊಡಬೇಕು.


“ಸ್ವರ್ಗಸಾಮ್ರಾಜ್ಯವು ಹೀಗಿದೆ: ಒಬ್ಬ ಯಜಮಾನನಿಗೆ ಒಂದು ದ್ರಾಕ್ಷಿತೋಟವಿತ್ತು. ಅದರಲ್ಲಿ ಕೆಲಸ ಮಾಡುವುದಕ್ಕೆ ಕೂಲಿಗಾರರನ್ನು ಗೊತ್ತುಮಾಡಲು ಅವನು ಬೆಳಗಿನ ಜಾವದಲ್ಲೇ ಹೊರಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು