Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:34 - ಕನ್ನಡ ಸತ್ಯವೇದವು C.L. Bible (BSI)

34 ಫಲಕೊಡುವ ಕಾಲ ಹತ್ತಿರವಾದಾಗ, ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಆಳುಗಳನ್ನು ಗೇಣಿದಾರರ ಬಳಿಗೆ ಕಳುಹಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಫಲಕಾಲ ಹತ್ತರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವದಕ್ಕಾಗಿ ಆ ಒಕ್ಕಲಿಗರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂದಾಗ ತನ್ನ ಪಾಲನ್ನು ತೆಗೆದುಕೊಂಡು ಬರಲು ಸೇವಕರನ್ನು ರೈತರ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಫಲದ ಕಾಲ ಸಮೀಪಿಸಿದಾಗ, ತನ್ನ ಫಲಗಳನ್ನು ಪಡೆದುಕೊಳ್ಳುವುದಕ್ಕೆ ತನ್ನ ಸೇವಕರನ್ನು ಗೇಣಿಗೆದಾರರ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ದರಾಕ್ಷಿ ಗೊಳಾ ಕರ್‍ತಲೊ ಎಳ್ ಯೆಲ್ಲ್ಯಾ ತನ್ನಾ ತೆನಿ ಅಪ್ನಾಚೊ ಸುಗ್ಗಿಚೊ ವಾಟೊ ಘೆವ್ನ್ ಯೆವ್ಕ್ ಅಪ್ನಾಚ್ಯಾ ಆಳಾಕ್ನಿ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:34
20 ತಿಳಿವುಗಳ ಹೋಲಿಕೆ  

ನನ್ನ ತೋಟಕ್ಕಾಗಿ ನಾನು ಮಾಡಿದ್ದಕ್ಕಿಂತಲೂ ಇನ್ನೇನು ಮಾಡಬೇಕಾಗಿತ್ತು? ಅದು ಸಿಹಿದ್ರಾಕ್ಷಿಯನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತೇಕೆ? ನನ್ನ ಈ ತೋಟಕ್ಕೆ ಏನು ಮಾಡುವೆನೆಂದು ಹೇಳುತ್ತೇನೆ, ಕೇಳಿ:


ಅದಕ್ಕೆ ಆಹ್ವಾನಿತರಾಗಿದ್ದವರನ್ನು ಕರೆಯಲು ಸೇವಕರನ್ನು ಕಳುಹಿಸಿದ. ಆದರೆ ಅವರು ಬರಲು ಒಪ್ಪಲಿಲ್ಲ.


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಇವರು ಆ ಆಳುಗಳ ಮೇಲೆ ಬಿದ್ದು ಒಬ್ಬನನ್ನು ಬಡಿದರು, ಇನ್ನೊಬ್ಬನನ್ನು ಕಡಿದರು, ಮತ್ತೊಬ್ಬನ ಮೇಲೆ ಕಲ್ಲು ತೂರಿದರು.


ಆದರೆ ಗೇಣಿದಾರರು ಮಗನನ್ನು ಕಂಡೊಡನೇ, ‘ಈ ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ಮುಗಿಸಿಬಿಡೋಣ. ಇವನಿಗೆ ಬರುವ ಸೊತ್ತನ್ನು ನಮ್ಮದಾಗಿಸಿಕೊಳ್ಳೋಣ,’ ಎಂದು ತಮ್ಮ ತಮ್ಮಲ್ಲೇ ಒಳಸಂಚು ಮಾಡಿಕೊಂಡರು.


“ಈಗ ನೀವೇ ಹೇಳಿ: ತೋಟದ ಯಜಮಾನ ಬಂದಾಗ ಆ ಗೇಣಿದಾರರಿಗೆ ಏನುಮಾಡುವನು?” ಎಂದು ಯೇಸು ಕೇಳಿದರು.


“ಆ ಕೇಡಿಗರನ್ನು ಕ್ರೂರವಾಗಿ ಸಂಹರಿಸುವನು. ತರುವಾಯ ಕಾಲಕಾಲಕ್ಕೆ ಸರಿಯಾಗಿ ಪಾಲನ್ನು ಸಲ್ಲಿಸುವ ಬೇರೆಯವರಿಗೆ ತೋಟವನ್ನು ಗೇಣಿಗೆ ಕೊಡುವನು,” ಎಂದು ಅಲ್ಲಿದ್ದವರು ಉತ್ತರಕೊಟ್ಟರು.


ಅನಂತರ ಯೇಸುಸ್ವಾಮಿ ಅವರೊಡನೆ ಸಾಮತಿಗಳ ರೂಪದಲ್ಲಿ ಮಾತನಾಡತೊಡಗಿದರು: “ಒಬ್ಬನು ದ್ರಾಕ್ಷಿಯತೋಟ ಒಂದನ್ನು ಮಾಡಿ, ಅದರ ಸುತ್ತ ಬೇಲಿ ಹಾಕಿಸಿದ; ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಬಳಿಕ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರನಾಡಿಗೆ ಹೊರಟುಹೋದ.


ಆದರೆ ಆ ಗೇಣಿದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ, ಇವನನ್ನು ಮುಗಿಸಿಬಿಡೋಣ. ಆಗ ಈ ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಹೂಡಿ,


ಇಂತಹ ಪರಿಸ್ಥಿತಿಯಲ್ಲಿ ಆ ತೋಟದ ಯಜಮಾನ ಏನು ಮಾಡುವನು? ಅವನು ಬಂದು ಆ ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುವನು. ಪವಿತ್ರಗ್ರಂಥದಲ್ಲಿ :


ಬಳಿಕ ಯೇಸುಸ್ವಾಮಿ ಜನರಿಗೆ ಈ ಸಾಮತಿಯನ್ನು ಹೇಳತೊಡಗಿದರು: “ಒಬ್ಬಾತ ಒಂದು ದ್ರಾಕ್ಷಿತೋಟ ಮಾಡಿಸಿದ. ಕಾರಣಾಂತರ ಅದನ್ನು ಗೇಣಿದಾರರಿಗೆ ವಹಿಸಿ, ದೀರ್ಘಕಾಲ ಹೊರನಾಡಿಗೆ ಪ್ರವಾಸ ಹೋದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು