Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:35 - ಕನ್ನಡ ಸತ್ಯವೇದವು C.L. Bible (BSI)

35 ಇವರು ಆ ಆಳುಗಳ ಮೇಲೆ ಬಿದ್ದು ಒಬ್ಬನನ್ನು ಬಡಿದರು, ಇನ್ನೊಬ್ಬನನ್ನು ಕಡಿದರು, ಮತ್ತೊಬ್ಬನ ಮೇಲೆ ಕಲ್ಲು ತೂರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಒಕ್ಕಲಿಗರು ಅವನ ಆಳುಗಳನ್ನು ಹಿಡುಕೊಂಡು ಒಬ್ಬನನ್ನು ಹೊಡೆದರು, ಒಬ್ಬನನ್ನು ಕಡಿದು ಹಾಕಿದರು, ಒಬ್ಬನನ್ನು ಕಲ್ಲೆಸೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಆದರೆ ರೈತರು ಆ ಸೇವಕರನ್ನು ಹಿಡಿದುಕೊಂಡು ಒಬ್ಬನನ್ನು ಹೊಡೆದರು; ಬೇರೊಬ್ಬನನ್ನು ಕತ್ತರಿಸಿಹಾಕಿದರು; ಮೂರನೇ ಸೇವಕನನ್ನು ಕಲ್ಲೆಸೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ಆಗ ಗೇಣಿಗೆದಾರರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು, ಇನ್ನೊಬ್ಬನನ್ನು ಕೊಂದುಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಗುತ್ಕೆ ಧರಲ್ಲ್ಯಾನಿ ತ್ಯಾ ಆಳಾಕ್ನಿ ಧರ್‍ಲ್ಯಾನಿ, ಅನಿ ಎಕ್ಲ್ಯಾಕ್ ಮಾರ್ ಘಾಟ್ಲ್ಯಾನಿ, ದುಸ್ರ್ಯಾಕ್ ಜಿವಾನಿಚ್ ಮಾರ್‍ಲ್ಯಾನಿ, ಅನಿ ಅನಿಎಕ್ಲ್ಯಾಕ್ ಗುಂಡ್ಯಾನಿ ಮಾರ್‍ಲ್ಯಾನಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:35
23 ತಿಳಿವುಗಳ ಹೋಲಿಕೆ  

ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.


ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.


ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು, ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು.”


ಯಜ್ಞದ ಕುರಿಮರಿಯಾದಾತ ಐದನೆಯ ಮುದ್ರೆಯನ್ನು ಒಡೆದನು. ದೇವರ ಸಂದೇಶವನ್ನು ಸಾರಿದ ಪ್ರಯುಕ್ತ ಮತ್ತು ತಮ್ಮ ಪ್ರಾಮಾಣಿಕ ಸಾಕ್ಷ್ಯದ ಪ್ರಯುಕ್ತ ಹತರಾದವರ ಆತ್ಮಗಳು ಬಲಿಪೀಠದ ಕೆಳಗೆ ಇರುವುದನ್ನು ನಾನು ಕಂಡೆ.


ನಾನು ನಿಮ್ಮನ್ನು ದಂಡಿಸಿದ್ದು ವ್ಯರ್ಥವಾಯಿತು, ನೀವು ತಿದ್ದುಕೊಳ್ಳಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ಕತ್ತಿಗೆ ತುತ್ತಾಗಿಸಿದ್ದೀರಿ.


ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಿಯ ಮೇಲೆ ಕುಪಿತನಾಗಿ, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.


ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು.


ಅದಕ್ಕೆ ಅವನು, “ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿ ಇದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ,” ಎಂದು ಉತ್ತರಕೊಟ್ಟನು.


ಆಕೆ ಎಲೀಯನ ಬಳಿಗೆ ದೂತರನ್ನು ಕಳುಹಿಸಿ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟುಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆಹೋದರೆ, ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಹೇಳಿಕಳುಹಿಸಿದಳು.


ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ತಮಗೆ ತಿಳಿಸಲಾಗಿದೆ ಅಲ್ಲವೆ? ಅವರಲ್ಲಿ ನೂರು ಮಂದಿಯನ್ನು ತೆಗೆದುಕೊಂಡು ಹೋಗಿ ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ?


(ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿದ್ದಾಗ ಈ ಓಬದ್ಯನು ಸರ್ವೇಶ್ವರನಲ್ಲಿ ಬಹು ಭಯಭಕ್ತಿಯುಳ್ಳವನಾಗಿ ನೂರು ಮಂದಿ ಪ್ರವಾದಿಗಳನ್ನು ಕರೆದುಕೊಂಡುಹೋಗಿ ಅವರನ್ನು ಐವತ್ತೈವತ್ತು ಮಂದಿಯನ್ನಾಗಿ, ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ಜನರಿಗೆ ತಿಳಿಸಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ್ದನ್ನೆಲ್ಲ ಯೆರೆಮೀಯನು ನುಡಿದು ಮುಗಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಸುತ್ತುಗಟ್ಟಿದರು.


ಆ ಅಧಿಕಾರಿಗಳು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.


ಫಲಕೊಡುವ ಕಾಲ ಹತ್ತಿರವಾದಾಗ, ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಆಳುಗಳನ್ನು ಗೇಣಿದಾರರ ಬಳಿಗೆ ಕಳುಹಿಸಿದ.


ತೋಟದ ಯಜಮಾನ ಮೊದಲಿಗಿಂತಲೂ ಹೆಚ್ಚು ಆಳುಗಳನ್ನು ಕಳುಹಿಸಿದ. ಅವರಿಗೂ ಅದೇ ಗತಿ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು