Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:38 - ಕನ್ನಡ ಸತ್ಯವೇದವು C.L. Bible (BSI)

38 ಆದರೆ ಗೇಣಿದಾರರು ಮಗನನ್ನು ಕಂಡೊಡನೇ, ‘ಈ ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ಮುಗಿಸಿಬಿಡೋಣ. ಇವನಿಗೆ ಬರುವ ಸೊತ್ತನ್ನು ನಮ್ಮದಾಗಿಸಿಕೊಳ್ಳೋಣ,’ ಎಂದು ತಮ್ಮ ತಮ್ಮಲ್ಲೇ ಒಳಸಂಚು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆದರೆ ಆ ತೋಟಗಾರರು ಅವನ ಮಗನನ್ನು ಕಂಡು, ‘ಇವನೇ ಉತ್ತರಾಧಿಕಾರಿ, ಬನ್ನಿ ಇವನನ್ನು ಕೊಂದು ಹಾಕೋಣ, ಇವನ ಸ್ವತ್ತನ್ನು ನಾವೇ ತೆಗೆದುಕೊಳ್ಳೋಣ’ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆದರೆ ಆ ಒಕ್ಕಲಿಗರು ಅವನ ಮಗನನ್ನು ಕಂಡು - ಇವನೇ ಬಾಧ್ಯಸ್ಥನು, ಬನ್ನಿ ಇವನನ್ನು ಕೊಂದುಹಾಕೋಣ, ಇವನ ಸ್ವಾಸ್ತ್ಯವನ್ನು ನಾವೇ ತೆಗೆದುಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 “ಆದರೆ ರೈತರು ಮಗನನ್ನು ನೋಡಿದಾಗ, ‘ಇವನು ತೋಟದ ಒಡೆಯನ ಮಗನು. ಈ ತೋಟ ಇವನದಾಗುವುದು. ನಾವು ಇವನನ್ನು ಕೊಂದರೆ, ಈ ತೋಟ ನಮ್ಮದಾಗುವುದು’ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 “ಆದರೆ ಗೇಣಿಗೆದಾರರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ, ‘ಇವನೇ ಬಾಧ್ಯಸ್ಥನು. ಬನ್ನಿರಿ, ನಾವು ಇವನನ್ನು ಕೊಂದು ಇವನ ಆಸ್ತಿಯನ್ನು ಕಿತ್ತುಕೊಳ್ಳೋಣ,’ ಎಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಖರೆ ತ್ಯಾ ಗುತ್ಕೆ ಧರಲ್ಲ್ಯಾನಿ ತೆಚ್ಯಾ ಲೆಕಾಕ್ ಬಗುನ್, ಹ್ಯೊ ಹ್ಯಾ ಶೆತಾಚ್ಯಾ ಮಾಲ್ಕಾಚೊ ಲೆಕ್, ಹೆಕಾ ಅಮಿ ಜಿವಾನಿಚ್ ಮಾರುವ್ವಾ. ಮಾನಾ ಹಿ ಸಗ್ಳಿ ಅಸ್ತಿ ಅಮ್ಕಾಚ್ ಹೊತಾ. ಮಟ್ಲ್ಯಾನಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:38
16 ತಿಳಿವುಗಳ ಹೋಲಿಕೆ  

ಆದರೆ ಗೇಣಿದಾರರು ಯಜಮಾನನ ಮಗನನ್ನು ಕಂಡದ್ದೇ ತಡ, ‘ತೋಟಕ್ಕೆ ಇವನೇ ಉತ್ತರಾಧಿಕಾರಿ. ಇವನನ್ನು ಮುಗಿಸಿಬಿಡೋಣ; ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಮಾಡಿಕೊಂಡರು.


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


ಈಗ ನೋಡಿ, ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿದ್ದಾರೆ; ‘ತಮ್ಮನನ್ನು ಕೊಂದವನೆಲ್ಲಿ? ಅವನನ್ನು ನಮಗೆ ಒಪ್ಪಿಸು; ತಮ್ಮನ ಪ್ರಾಣಕ್ಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ,’ ಎನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದು ಇದ್ದಾರೆ,” ಎಂದು ಉತ್ತರಕೊಟ್ಟಳು.


ಫಲಕೊಡುವ ಕಾಲ ಹತ್ತಿರವಾದಾಗ, ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಆಳುಗಳನ್ನು ಗೇಣಿದಾರರ ಬಳಿಗೆ ಕಳುಹಿಸಿದ.


ಕಟ್ಟಕಡೆಗೆ ಯಜಮಾನ, ‘ನನ್ನ ಮಗನಿಗೆ ಇವರು ಮರ್ಯಾದೆ ಕೊಟ್ಟೇಕೊಡುವರು’ ಎಂದುಕೊಂಡು ತನ್ನ ಮಗನನ್ನೇ ಕಳುಹಿಸಿದ.


ಅಂತೆಯೇ ಅವನನ್ನು ಹಿಡಿದು, ತೋಟದಿಂದ ಹೊರಕ್ಕೆ ದಬ್ಬಿಕೊಂಡುಹೋಗಿ, ಕೊಂದುಹಾಕಿದರು.


ಈಗ ನಿನ್ನ ಮತ್ತು ನಿನ್ನ ಮಗ ಸೊಲೊಮೋನನ ಜೀವವನ್ನು ಉಳಿಸಿಕೊಳ್ಳಬೇಕಾದರೆ ನನ್ನ ಆಲೋಚನೆಯನ್ನು ಕೇಳು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು