ಮತ್ತಾಯ 22:10 - ಕನ್ನಡ ಸತ್ಯವೇದವು C.L. Bible (BSI)10 ಅಂತೆಯೇ ಅವರು ಹೋಗಿ ಯೋಗ್ಯರು, ಅಯೋಗ್ಯರೆನ್ನದೆ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುತಂದರು. ವಿವಾಹ ಮಂಟಪ ಅತಿಥಿಗಳಿಂದ ತುಂಬಿಹೋಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆ ಆಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರೆನ್ನದೇ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು. ಹೀಗೆ ಮದುವೆಯ ಮಂಟಪವು ಅತಿಥಿಗಳಿಂದ ತುಂಬಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆ ಆಳುಗಳು ಹಾದಿಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರು ಅನ್ನದೆ ಕಂಡವರನ್ನೆಲ್ಲಾ ಕೂಡಿಸಿ ಕರಕೊಂಡು ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅಂತೆಯೇ ಸೇವಕರು ಬೀದಿಬೀದಿಗಳಿಗೆ ಹೋಗಿ ತಾವು ಕಂಡ ಜನರನ್ನೆಲ್ಲಾ ಒಳ್ಳೆಯವರು, ಕೆಟ್ಟವರು ಎನ್ನದೆ ಒಟ್ಟುಗೂಡಿಸಿ ಊಟ ಸಿದ್ಧವಾಗಿದ್ದ ಸ್ಥಳಕ್ಕೆ ಕರೆತಂದರು. ಆ ಸ್ಥಳವು ಜನರಿಂದ ತುಂಬಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಆ ಸೇವಕರು ಮುಖ್ಯ ಬೀದಿಗಳಿಗೆ ಹೋಗಿ ತಾವು ಕಂಡ ಕೆಟ್ಟವರನ್ನೂ ಒಳ್ಳೆಯವರನ್ನೂ ಕರೆತಂದರು. ಹೀಗೆ ಮದುವೆ ಮಂಟಪವು ಅತಿಥಿಗಳಿಂದ ತುಂಬಿಹೋಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅಶೆ ಆಳಾ ವನಿಯಾತ್ನಿ ಗೆಲಿ, ಅನಿ ಬರ್‍ಯಾಕ್ನಿ, ಬುರ್ಶ್ಯಾಕ್ನಿ ಮನಿನಸ್ತಾನಾ ಗಾವ-ಗಾವಲ್ಲ್ಯಾ ಸಗ್ಳ್ಯಾ ಲೊಕಾಕ್ನಿ ಗೊಳಾ ಕರುನ್ ಬಲ್ವುನ್ ಹಾನ್ಲ್ಯಾನಿ. ಅಶೆ ಲಗ್ನಾಚೊ ಮಾಟವ್ ಲೊಕಾನಿ ಭರ್‍ಲೊ. ಅಧ್ಯಾಯವನ್ನು ನೋಡಿ |