Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:13 - ಕನ್ನಡ ಸತ್ಯವೇದವು C.L. Bible (BSI)

13 ಆಗ ರಾಜನು ಪರಿಚಾರಕರಿಗೆ, ‘ಇವನ ಕೈಕಾಲುಗಳನ್ನು ಕಟ್ಟಿ ಹೊರಗಿನ ಕತ್ತಲೆಗೆ ದಬ್ಬಿರಿ; ಅಲ್ಲಿರುವವರೊಡನೆ ಹಲ್ಲುಕಡಿದು ಗೋಳಾಡಲಿ,’ ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಮೇಲೆ ಅರಸನು ಸೇವಕರಿಗೆ - ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ರಾಜನು ಕೆಲವು ಸೇವಕರಿಗೆ, ‘ಇವನ ಕೈಕಾಲು ಕಟ್ಟಿ ಹೊರಗೆ ಕತ್ತಲೆಯೊಳಕ್ಕೆ ಎಸೆಯಿರಿ’ ಅಂದನು. ಆ ಸ್ಥಳದಲ್ಲಿ ಜನರು ಗೋಳಾಡುತ್ತಾ ಬಾಧೆಯಿಂದ ತಮ್ಮ ಹಲ್ಲುಗಳನ್ನು ಕಡಿಯುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಆಗ ಅರಸನು ಸೇವಕರಿಗೆ, ‘ಅವನ ಕೈಕಾಲುಗಳನ್ನು ಕಟ್ಟಿ ತೆಗೆದುಕೊಂಡು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಹಲ್ಲು ಕಡಿಯುತ್ತಾ ಗೋಳಾಡುತ್ತಿರಲಿ,’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ರಾಜಾನ್ ಅಪ್ನಾಚ್ಯಾ ಆಳಾಕ್ನಿ “ಹ್ಯಾ ಮಾನ್ಸಾಚೆ ಹಾತ್-ಪಾಯ್ ಭಾಂದಾ ಅನಿ ಭಾಯ್ರ್ ಕಾಳ್ಕಾತ್ ಟಾಕಾ. ಥೈ ತೊ ರಡ್ತಾ ಅನಿ ದಾತಾ ಚಾವ್ತಾ,” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:13
21 ತಿಳಿವುಗಳ ಹೋಲಿಕೆ  

ಆದರೆ ಯಾರು ಈ ಸಾಮ್ರಾಜ್ಯಕ್ಕೆ ಬಾಧ್ಯಸ್ಥರೋ ಅವರನ್ನೇ ಹೊರಗೆ ದಬ್ಬಲಾಗುವುದು; ಅಲ್ಲಿ, ಆ ಕಾರ್ಗತ್ತಲಲ್ಲಿ, ಅವರ ಗೋಳಾಟವೇನು! ಹಲ್ಲು ಕಡಿತವೇನು!”


ಅಪ್ರಯೋಜಕನಾದ ಈ ಸೇವಕನನ್ನು ಹೊರಗಿನ ಕಗ್ಗತ್ತಲೆಗೆ ದಬ್ಬಿರಿ. ಅಲ್ಲಿ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು,’ ಎಂದು ಹೇಳಿದ.


ಈ ಕಳ್ಳಬೋಧಕರು ನೀರಿಲ್ಲದ ಬಾವಿಗಳು, ಬಿರುಗಾಳಿಯಿಂದ ಚದರಿಹೊಗುವ ಮಂಜುಮೋಡಗಳು, ಕಾರ್ಗತ್ತಲಿನ ಕಂದಕವೇ ಅವರ ಪಾಲಿಗೆ ಕಟ್ಟಿಟ್ಟ ಬುತ್ತಿ.


ಪಾಪಮಾಡಿದ ದೇವದೂತರನ್ನೂ ದೇವರು ದಂಡಿಸದೆ ಬಿಡಲಿಲ್ಲ. ಅವರನ್ನು ನರಕಕ್ಕೆ ದಬ್ಬಿದರು. ಅಂತಿಮ ತೀರ್ಪಿನ ದಿನವನ್ನು ಎದುರುನೋಡುತ್ತಾ ಕಾದಿರುವಂತೆ, ಕಾರಿರುಳ ಕೂಪದಲ್ಲಿ ಕೂಡಿಹಾಕಿದರು.


ಇವರು ಪ್ರಭುವಿನ ಸನ್ನಿಧಿಯಿಂದಲೂ ಅವರ ಪ್ರಭಾವದ ಮಹಿಮೆಯಿಂದಲೂ ಬಹಿಷ್ಕೃತರಾಗಿ, ನಿತ್ಯದಂಡನೆಗೆ ಗುರಿಯಾಗುವರು.


ಅಬ್ರಹಾಮ, ಇಸಾಕ, ಯಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ಸಾಮ್ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ನೋಡುವಾಗ ನಿಮಗಾಗುವ ಗೋಳಾಟವೇನು! ಹಲ್ಲು ಕಡಿತವೇನು!!


ಅವನನ್ನು ಚಿತ್ರಹಿಂಸೆಗೂ ಕಪಟಿಗಳ ದುರ್ಗತಿಗೂ ಗುರಿಮಾಡುವನು. ಅಲ್ಲಿರುವವರೊಡನೆ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು.


ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.”


ಮತ್ತು ದುಷ್ಕರ್ಮಿಗಳೆಲ್ಲರನ್ನೂ ಒಟ್ಟುಗೂಡಿಸಿ ಅಗ್ನಿಕುಂಡದಲ್ಲಿ ಹಾಕುವರು; ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.


ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ತಮ್ಮ ನಾಚಿಕೆಗೇಡಿತನದ ನೊರೆಯನ್ನು ಕಾರುವ ಸಾಗರದ ಹುಚ್ಚು ತೆರೆಗಳು; ದಿಕ್ಕುಗೆಟ್ಟ ತಾರೆಗಳಿವರು. ಇವರಿಗಾಗಿ ಕಾದಿದೆ ನಿರಂತರ ಕಾರ್ಗತ್ತಲಿನ ಕಂದಕ.


ಅಂತೆಯೇ, ತಮ್ಮ ಆದ್ಯ ಅಂತಸ್ತನ್ನು ಉಳಿಸಿಕೊಳ್ಳದೆ, ತಮ್ಮ ಯೋಗ್ಯ ನಿವಾಸವನ್ನು ಕಳೆದುಕೊಂಡ ದೇವದೂತರನ್ನು ಶಾಶ್ವತ ಸಂಕಲೆಗಳಿಂದ ಬಂಧಿಸಲಾಯಿತು; ಮಹಾದಿನದಲ್ಲಿ ಸಂಭವಿಸುವ ದಂಡನೆಯ ತೀರ್ಪಿಗಾಗಿ ಅವರನ್ನು ಕಾರ್ಗತ್ತಲೆಯಲ್ಲಿ ಕೂಡಿಡಲಾಯಿತು.


ಸ್ತೇಫನನ ಮಾತುಗಳನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಅವನ ಮೇಲೆ ಕೋಪೋದ್ರಿಕ್ತರಾದರು. ಕಟಕಟನೆ ಹಲ್ಲುಕಡಿದರು.


ಸುಗ್ಗಿಯವರೆಗೆ ಎರಡೂ ಒಟ್ಟಿಗೆ ಬೆಳೆಯಲಿ; ಸುಗ್ಗಿಯ ಕಾಲದಲ್ಲಿ ಮೊದಲು ಕಳೆ ಕಿತ್ತು, ಸುಟ್ಟುಹಾಕಲು ಕಟ್ಟಿಡಿ; ಬಳಿಕ ಗೋದಿಯನ್ನು ಒಕ್ಕಣೆಮಾಡಿ ನನ್ನ ಕಣಜಕ್ಕೆ ತುಂಬಿರಿ, ಎಂದು ಕೊಯ್ಲುಗಾರರಿಗೆ ಹೇಳುತ್ತೇನೆ,’ ಎಂದ.”


“ಒಬ್ಬ ಬಲಿಷ್ಠನ ಮನೆಯನ್ನು ನುಗ್ಗಿ ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆಮಾಡಲಾದೀತೇ? ಮೊದಲು ಅವನನ್ನು ಕಟ್ಟಬೇಕು. ಬಳಿಕ ಅವನ ಮನೆಯನ್ನು ಕೊಳ್ಳೆಹೊಡೆಯಬೇಕು.


ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.


ಇದನು ಕಂಡು ಕೆರಳುವನಾ ದುರುಳನು I ಹೊಂದುವನು ಈ ಪರಿ ಆಶಾಭಂಗವನು I ಹಲ್ಲು ಕಡಿಯುತ ಅವನು ಹಾಳಾಗುವನು II


ದುರ್ಜನನು ಹೂಡಿಹನು ಒಳಸಂಚು ಸಜ್ಜನನ ವಿರುದ್ಧ I ಕಟಕಟನೆ ಹಲ್ಲು ಕಡಿಯುತಿಹನಿದೋ ಆತನ ವಿರೋಧ II


ಅವನು ಪೌಲನ ಸೊಂಟಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳನ್ನು ಬಿಗಿದುಕೊಂಡು, “ಪವಿತ್ರಾತ್ಮ ಹೀಗೆನ್ನುತ್ತಾರೆ: ‘ಈ ಸೊಂಟಪಟ್ಟಿಯು ಯಾರದೋ ಅವನನ್ನು ಜೆರುಸಲೇಮಿನಲ್ಲಿ ಯೆಹೂದ್ಯರು ಹೀಗೆಯೇ ಕಟ್ಟಿ, ಅನ್ಯಧರ್ಮೀಯರ ವಶಕ್ಕೆ ಒಪ್ಪಿಸುವರು,’ “ ಎಂದನು.


ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ, ಕೇಳು: ತಾರುಣ್ಯದಲ್ಲಿ ನೀನೇ ನಡುಕಟ್ಟಿಕೊಂಡು ಇಷ್ಟಬಂದ ಕಡೆ ನಡೆದೆ. ವೃದ್ಧಾಪ್ಯದಲ್ಲಾದರೋ ನೀನು ಕೈಚಾಚುವೆ. ಬೇರೊಬ್ಬನು ನಿನ್ನ ನಡುಕಟ್ಟಿ ನಿನಗಿಷ್ಟವಿಲ್ಲದ ಕಡೆ ನಿನ್ನನ್ನು ನಡೆಸಿಕೊಂಡು ಹೋಗುವನು,” ಎಂದು ನುಡಿದರು.


ಇದಲ್ಲದೆ ತನ್ನ ಸೈನ್ಯದ ಕೆಲವುಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್‍ನೆಗೋ ಅವರನ್ನು ಕಟ್ಟಿ ಧಗಧಗನೆ ಉರಿಯುವ ಆವಿಗೆಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು