Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:15 - ಕನ್ನಡ ಸತ್ಯವೇದವು C.L. Bible (BSI)

15 ಅನಂತರ ಫರಿಸಾಯರು ಒಟ್ಟುಗೂಡಿ ಯೇಸುವನ್ನು ಹೇಗೆ ಮಾತಿನಲ್ಲಿ ಸಿಕ್ಕಿಸುವುದೆಂದು ಸಮಾಲೋಚನೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಆಲೋಚಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ್ಗೆ ಫರಿಸಾಯರು ಹೊರಟು ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸುವ ಎಂದು ಕೂಡಿ ಆಲೋಚಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಫರಿಸಾಯರು, ಅಲ್ಲಿಂದ ಹೊರಟುಹೋಗಿ ಯೇಸುವಿನ ಮಾತಿನಲ್ಲಿ ತಪ್ಪು ಕಂಡುಹಿಡಿಯಲು ಉಪಾಯಗಳನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಫರಿಸಾಯರು ಹೊರಟುಹೋಗಿ ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಫಾರಿಜೆವಾನಿ ಜಾವ್ನ್ ಜೆಜುಕ್ ಸವಾಲಾತ್ನಿ ಸಿರ್ಕುನ್ ಘಾಲುಚೆ ಮನುನ್ ಬೊಲುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:15
14 ತಿಳಿವುಗಳ ಹೋಲಿಕೆ  

ದೇವನಿಗು, ಅವನಭಿಷಿಕ್ತನಿಗು ವಿರುದ್ಧವಾಗಿ I ನಿಂತಿಹರು ನೃಪರು ಸಮರ ಸನ್ನದ್ಧರಾಗಿ I ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II


ಇಗೋ ನನ್ನ ಪ್ರಾಣಕ್ಕವರು ಹೂಡಿರುವ ಹೊಂಚು I ನನ್ನ ಮೇಲೆರಗಲು ಹೂಡಿರುವ ಕ್ರೂರಿಗಳ ಸಂಚು II


ಪಾಪಿಗಳಿಂದ ತಮಗುಂಟಾದ ಕಠಿಣ ವಿರೋಧವನ್ನು ಯೇಸುಸ್ವಾಮಿ ಹೇಗೆ ಸಹಿಸಿಕೊಂಡರೆಂಬುದನ್ನು ಮನಸ್ಸಿನಲ್ಲಿಡಿ. ಆಗ ನೀವು ಬೇಸತ್ತು ಎದೆಗುಂದಲಾರಿರಿ.


ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು - ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.


ಕಂಟಕ ಬಂದಿದೆ ನನ್ನ ಪ್ರಾಣಕೆ I ಹಾಕಿಹರು ಕಾಲಿಗೆ ಜೀರುಗುಣಿಕೆ II ತೋಡಿಹರು ಗುಂಡಿಯನು ನಾ ನಡೆವ ದಾರಿಯಲೆ I ತಾವೆ ತಟಕ್ಕನೆ ಬಿದ್ದುಹೋದರು ಅದರಲೆ II


ನೋಡಬರುವರು, ನವಿರಾದ ಮಾತನಾಡುವರವರು I ಕೇಡನೆ ತುಂಬಿಸಿಕೊಂಡು ಹೊರಬಂದೊಡನೆ ಹರಡುವರು II


ಫರಿಸಾಯರಾದರೋ ಅಲ್ಲಿಂದ ಹೊರಗೆ ಹೋಗಿ ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.


ನಿಮ್ಮನ್ನು ಬಂಧಿಸಲು ಅಲ್ಲ, ಬೆಂಬಲಿಸಲು ಇದನ್ನು ಹೇಳುತ್ತಿದ್ದೇನೆ. ನೀವು ಸಜ್ಜನರಾಗಿ ನಡೆದುಕೊಂಡು, ಭಿನ್ನಭಾವವಿಲ್ಲದೆ ಪ್ರಭುವಿನ ಪಾದಸೇವೆ ಮಾಡಬೇಕೆಂಬುದೇ ನನ್ನ ಆಶೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು