Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:17 - ಕನ್ನಡ ಸತ್ಯವೇದವು C.L. Bible (BSI)

17 ಹೀಗಿರುವಲ್ಲಿ ರೋಮ್ ಚಕ್ರಾಧಿಪತಿಗೆ ತೆರಿಗೆಕೊಡುವುದು ಧರ್ಮಸಮ್ಮತವೋ ಅಲ್ಲವೋ, ನಿಮ್ಮ ಅಭಿಪ್ರಾಯವನ್ನು ನಮಗೆ ತಿಳಿಸುವಿರಾ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೀಗಿರಲಾಗಿ ಕೈಸರನಿಗೆ ತೆರಿಗೆ ಕೊಡುವದು ಸರಿಯೋ ಸರಿಯಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದ್ದರಿಂದ ನಿನ್ನ ಅಭಿಪ್ರಾಯವನ್ನು ತಿಳಿಸು. ಸೀಸರನಿಗೆ ತೆರಿಗೆ ಕೊಡುವುದು ಸರಿಯೋ ಅಥವಾ ತಪ್ಪೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದ್ದರಿಂದ ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಅಲ್ಲವೋ? ನಿಮ್ಮ ಅಭಿಪ್ರಾಯವೇನು? ನಮಗೆ ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತರ್ ಅಮ್ಕಾ“ಅಮಿ ರೊಮಾಚ್ಯಾ ಚಕ್ರವರ್ತಿಕ್ ತೆರ್‍ಗಿ ದಿತಲೆ ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್ ಸಮಾ ಕಾಯ್ ಚುಕ್ ಮನ್ತೆಯ್? ಸಾಂಗ್” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:17
18 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಚಕ್ರವರ್ತಿ ಔಗುಸ್ತನು ತನ್ನ ಸಾಮ್ರಾಜ್ಯದಲ್ಲೆಲ್ಲಾ ಜನಗಣತಿಯಾಗಬೇಕೆಂದು ಆಜ್ಞೆ ಹೊರಡಿಸಿದನು.


ಬಳಿಕ ಮನೆಗೆ ಬಂದಾಗ, ಅವನು ಮಾತೆತ್ತುವುದಕ್ಕೆ ಮೊದಲೇ ಯೇಸು, “ಸಿಮೋನಾ, ನಿನಗೆ ಏನನ್ನಿಸುತ್ತದೆ? ಇಹಲೋಕದ ರಾಜರು ಕಂದಾಯವನ್ನಾಗಲಿ, ತೆರಿಗೆಯನ್ನಾಗಲಿ ಯಾರಿಂದ ವಸೂಲಿಮಾಡುತ್ತಾರೆ? ತಮ್ಮ ಪುತ್ರರಿಂದಲೋ ಅಥವಾ ಪರರಿಂದಲೋ?" ಎಂದು ಕೇಳಿದರು. “ಪರರಿಂದಲೇ,” ಎಂದು ಪೇತ್ರನು ಉತ್ತರಕೊಟ್ಟನು.


ಆದರೆ ನೀನು ಅನುಸರಿಸುವ ಪಂಥದ ವಿರುದ್ಧ ಎಲ್ಲೆಲ್ಲೂ ಜನರು ಮಾತನಾಡುತ್ತಿದ್ದಾರೆಂದು ಬಲ್ಲೆವು. ಆದುದರಿಂದ ನಿನ್ನ ಅಭಿಪ್ರಾಯವನ್ನು ನಿನ್ನ ಬಾಯಿಂದಲೇ ಕೇಳಬಯಸುತ್ತೇವೆ,” ಎಂದರು.


ಪೌಲನು ತನ್ನ ಪರವಾಗಿ ತಾನೇ ವಾದಿಸುತ್ತಾ, “ನಾನು ಯೆಹೂದ್ಯರ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಲಿ, ಮಹಾದೇವಾಲಯಕ್ಕೆ ವಿರುದ್ಧವಾಗಲಿ, ಅಥವಾ ಚಕ್ರವರ್ತಿಗೆ ವಿರುದ್ಧವಾಗಲಿ, ಏನನ್ನೂ ಮಾಡಿಲ್ಲ,” ಎಂದನು.


ಈ ಯಾಸೋನನು ಅವರಿಗೆ ಆಶ್ರಯಕೊಟ್ಟಿದ್ದಾನೆ. ಅವರು ‘ಯೇಸು’ ಎಂಬ ಇನ್ನೊಬ್ಬ ಅರಸನಿದ್ದಾನೆಂದು ಹೇಳುತ್ತಾ ಚಕ್ರವರ್ತಿಯ ಆಜ್ಞೆಗಳನ್ನು ಉಲ್ಲಂಘಿಸುತ್ತಿದ್ದಾರೆ,” ಎಂದು ಗುಲ್ಲೆಬ್ಬಿಸಿದರು.


ಅನಂತರ ಜನಗಣತಿಯ ಕಾಲದಲ್ಲಿ ಗಲಿಲೇಯದ ಯೂದ ಎಂಬವನು ಪ್ರಸಿದ್ಧಿಗೆ ಬಂದ. ತನ್ನೆಡೆಗೆ ಹಲವರನ್ನು ಆಕರ್ಷಿಸಿಕೊಂಡ. ಅವನೂ ಹತನಾದ. ಹಿಂಬಾಲಕರೆಲ್ಲರೂ ಚದರಿಹೋದರು.


ಅದು ತಿಬೇರಿಯಸ್ ಚಕ್ರವರ್ತಿಯ ಆಡಳಿತದ ಹದಿನೈದನೆಯ ವರ್ಷ. ಆ ಕಾಲದಲ್ಲಿ ಜುದೇಯ ಪ್ರಾಂತ್ಯಕ್ಕೆ ಪೊನ್ಸಿಯುಸ್ ಪಿಲಾತನು ರಾಜ್ಯಪಾಲನಾಗಿದ್ದನು. ಗಲಿಲೇಯ ಪ್ರಾಂತ್ಯಕ್ಕೆ ಹೆರೋದನೂ ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೆ ಇವನ ತಮ್ಮನಾದ ಫಿಲಿಪ್ಪನೂ ಮತ್ತು ಅಬಿಲೇನೆ ಪ್ರಾಂತ್ಯಕ್ಕೆ ಲುಸಾನಿಯನೂ ಸಾಮಂತರಾಗಿದ್ದರು.


ನಿಮ್ಮನ್ನು ನೀವೇ ಮೋಸಮಾಡಿಕೊಳ್ಳುತ್ತಿದ್ದೀರಿ. ನೀವೇ ನನ್ನ ಬಳಿಗೆ ಬಂದು ‘ನಮ್ಮ ದೇವರಾದ ಸರ್ವೇಶ್ವರನನ್ನು ನಮಗಾಗಿ ಪ್ರಾರ್ಥಿಸು. ನಮ್ಮ ದೇವರಾದ ಸರ್ವೇಶ್ವರ ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು. ಅದರಂತೆ ನಾವು ನಡೆಯುತ್ತೇವೆ,’ ಎಂಬುದಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ನೀವೇ ಕಳುಹಿಸಿದಿರಿ.


ನಮ್ಮ ಪಾಪದ ನಿಮಿತ್ತ ಅಧೀನರಾಗಿಸಿದಿರಿ ಅನ್ಯರಾಜರಿಗೆ ಈ ನಾಡಿನ ಸಿರಿಸಂಪತ್ತು ಹರಿದುಹೋಗುತ್ತಿದೆ ಆ ಅರಸರಿಗೆ ನಮ್ಮೊಡಲು, ದನಕರುಗಳು, ಈಡಾಗಿವೆ ಅವರ ದಬ್ಬಾಳಿಕೆಗೆ ಅಕಟಕಟ, ನಾವು ಸಿಕ್ಕಿಕೊಂಡಿದ್ದೇವೆ, ಮಹಾಸಂಕಟಕೆ!”


ಮತ್ತೆ ಕೆಲವರು “ಸರಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಮ್ಮ ಹೊಲ, ತೋಟಗಳ ಮೇಲೆ ಸಾಲ ತೆಗೆದುಕೊಳ್ಳಬೇಕಾಯಿತು;


ಇದಲ್ಲದೆ, ಆ ದೇವಾಲಯದ ಪರಿಚರ್ಯೆಯಲ್ಲಿದ್ದ, ಯಾಜಕ, ಲೇವಿಯ, ಗಾಯಕ, ದ್ವಾರಪಾಲಕ, ಚಾಕರ ಮುಂತಾದ ಸೇವಕರಲ್ಲಿ ಯಾವನಿಂದಲೂ ಶುಲ್ಕ, ತೆರಿಗೆ, ಸುಂಕ ಇವುಗಳನ್ನು ವಸೂಲಿ ಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.


ಆ ಪಟ್ಟಣವನ್ನೂ ಅದರ ಪೌಳಿಗೋಡೆಗಳನ್ನೂ ಕಟ್ಟುವುದು ಮುಗಿಸಿದರೆ ಅವರು ಕಪ್ಪ, ತೆರಿಗೆ, ಸುಂಕಗಳನ್ನು ಕೊಡುವುದಿಲ್ಲ; ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.


ಯೇಸು ಅವರ ಕುತಂತ್ರವನ್ನು ಅರಿತುಕೊಂಡು, “ಕಪಟಿಗಳೇ, ನನ್ನನ್ನೇಕೆ ಪರೀಕ್ಷಿಸುತ್ತೀರಿ?


ಹೀಗಿರುವಲ್ಲಿ, ನಾವು ರೋಮ್‍ ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಅಲ್ಲವೋ ತಿಳಿಸಿ,” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು