Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:29 - ಕನ್ನಡ ಸತ್ಯವೇದವು C.L. Bible (BSI)

29 ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನಿಮ್ಮ ಅಭಿಪ್ರಾಯ ತಪ್ಪು. ಪವಿತ್ರಗ್ರಂಥವನ್ನಾಗಲಿ, ದೇವರ ಶಕ್ತಿಯನ್ನಾಗಲಿ ನೀವು ಅರ್ಥಮಾಡಿಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅದಕ್ಕೆ ಯೇಸು ಉತ್ತರವಾಗಿ ಅವರಿಗೆ - ನೀವು ಶಾಸ್ತ್ರವನ್ನಾದರೂ ದೇವರ ಶಕ್ತಿಯನ್ನಾದರೂ ತಿಳಿಯದೆ ತಪ್ಪುವವರಾಗಿದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೇಸು, “ನೀವು ತಪ್ಪಾಗಿ ತಿಳಿದುಕೊಂಡಿರಲು ಕಾರಣವೇನೆಂದರೆ, ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ತಿಳಿದಿಲ್ಲ ಮತ್ತು ದೇವರ ಶಕ್ತಿಯ ಬಗ್ಗೆಯೂ ನಿಮಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅದಕ್ಕೆ ಯೇಸು ಉತ್ತರವಾಗಿ, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಜೆಜುನ್ ತೆಂಕಾ,“ತುಮಿ ಕವ್ಡೆ ಚುಕ್ ಯವ್ಜುನ್ ಘೆವ್ನ್ ಹಾಸಿ! ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಪುಸ್ತಕಾಚಿ ನಾಹೊಲ್ಯಾರ್ ದೆವಾಚ್ಯಾ ತಾಕ್ತಿಚ್ಯಾ ವಿಶಯಾತ್ ತುಮ್ಕಾ ಕಾಯ್ಬಿ ಗೊತ್ತ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:29
21 ತಿಳಿವುಗಳ ಹೋಲಿಕೆ  

ಯೇಸು ಸತ್ತಮೇಲೆ ಮರಳಿ ಜೀವಂತರಾಗಿ ಎದ್ದುಬರಬೇಕು, ಎಂಬ ಪವಿತ್ರಗ್ರಂಥದ ವಾಕ್ಯ ಅವರಿಗೆ ಅದುವರೆಗೆ ಅರ್ಥವಾಗಿರಲಿಲ್ಲ.


ಪ್ರಾಚೀನ ಗ್ರಂಥಗಳಲ್ಲಿ ಬರೆದಿರುವುದೆಲ್ಲವೂ ನಮ್ಮ ಉಪದೇಶಕ್ಕಾಗಿಯೇ ಬರೆಯಲಾಗಿದೆ. ಪವಿತ್ರಗ್ರಂಥ ಪಠನದಿಂದ ದೊರಕುವ ಸ್ಥೈರಣೆ ಮತ್ತು ಉತ್ತೇಜನದಿಂದಾಗಿ ನಾವು ನಿರೀಕ್ಷೆಯುಳ್ಳವರಾಗಬೇಕೆಂದೇ ಇವೆಲ್ಲಾ ಬರೆಯಲಾಗಿದೆ.


“ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ದೇವರಿಗೆ ಅಸಾಧ್ಯವಾದುದು ಯಾವುದೂ ಇಲ್ಲ,” ಎಂದನು.


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II


ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು.


ಸತ್ತವರನ್ನು ದೇವರು ಪುನರುತ್ಥಾನಗೊಳಿಸುತ್ತಾರೆಂಬುದನ್ನು ನಂಬಲು ಅಸಾಧ್ಯವೆಂದು ಇಲ್ಲಿರುವ ನೀವು ತಾನೇ ಭಾವಿಸುವುದೇಕೆ?


ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ.


ಅದನ್ನು ಪಾತಾಳದ ಹಿಡಿತದಿಂದ ನಾನು ಬಿಡಿಸಲಾರೆ. ಮರಣದ ಬಾಧೆಯಿಂದ ಅವರನ್ನು ರಕ್ಷಿಸಲಾರೆ. ‘ಮರಣವೇ, ನಿನ್ನ ಮಾರಕ ವ್ಯಾಧಿಗಳಿಂದ ಅವರನ್ನು ಬಾಧಿಸು. ಪಾತಾಳವೇ, ಅವರನ್ನು ಕಬಳಿಸಿ ನಾಶಗೊಳಿಸು. ಕರುಣೆ ನನ್ನಿಂದ ದೂರವಾಗಿದೆ.


ಸರ್ವೇಶ್ವರನಿಗೆ ಅಸಾಧ್ಯವಾದುದು ಯಾವುದು? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುತ್ತಾನೆ” ಎಂದು ಹೇಳಿದರು.


ಹೀಗಿರುವಲ್ಲಿ, ಪುನರುತ್ಥಾನದ ದಿನ ಆಕೆ ಆ ಏಳುಮಂದಿ ಅಣ್ಣತಮ್ಮಂದಿರಲ್ಲಿ ಯಾರಿಗೆ ಮಡದಿಯಾಗುವಳು? ಅವರೆಲ್ಲರೂ ಆಕೆಯನ್ನು ಮದುವೆಯಾಗಿದ್ದರಲ್ಲವೇ?” ಎಂದರು.


ಅದಕ್ಕೆ ಯೇಸು, “ನಿಮ್ಮದು ಎಂಥಾ ತಪ್ಪು ಅಭಿಪ್ರಾಯ! ಪವಿತ್ರಗ್ರಂಥವನ್ನು ಆಗಲಿ, ದೇವರ ಶಕ್ತಿಯನ್ನಾಗಲೀ ನೀವು ಅರ್ಥಮಾಡಿಕೊಂಡಿಲ್ಲ.


ಜಾಗೃತರಾಗಿರಿ, ದುರ್ಮಾರ್ಗವನ್ನು ಬಿಟ್ಟುಬಿಡಿ, ಸನ್ಮತಿಯುಳ್ಳವರಾಗಿರಿ. ದೇವರನ್ನು ಅರಿಯದ ಮೂಢರು ನಿಮ್ಮಲ್ಲಿ ಕೆಲವರು ಇದ್ದಾರೆ. ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು