Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:31 - ಕನ್ನಡ ಸತ್ಯವೇದವು C.L. Bible (BSI)

31 ಇದಲ್ಲದೆ, ಸತ್ತವರು ಪುನರುತ್ಥಾನ ಹೊಂದುವ ವಿಷಯದಲ್ಲಿ ಹೇಳುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಸತ್ತವರ ಪುನರುತ್ಥಾನದ ಕುರಿತು ದೇವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಮರಲ್ಲೆ ಝಿತ್ತೆ ಹೊತಲ್ಯಾ ವಿಶಯಾತ್ ದೆವಾನ್ ಕಾಯ್ ಮಟ್ಲ್ಯಾನಾಯ್ ಮನುನ್ ತುಮಿ ವಾಚ್ವುಕ್‍ನ್ಯಾತ್ ಕಾಯ್? ದೆವ್ ಮನ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:31
7 ತಿಳಿವುಗಳ ಹೋಲಿಕೆ  

“ಮಕ್ಕಳು ಹೇಳುವುದು ನಿನಗೆ ಕೇಳಿಸುತ್ತಿದೆಯೋ?” ಎಂದು ಕೋಪಾವೇಶದಿಂದ ಯೇಸುವನ್ನು ಪ್ರಶ್ನಿಸಿದರು. “ಹೌದು, ಕೇಳಿಸುತ್ತದೆ; ‘ಬಾಲಬಾಲೆಯರ ಬಾಯಿಂದಲೂ ಮೊಲೆಗೂಸುಗಳ ನಾಲಿಗೆಯಿಂದಲೂ ನಿಮಗೆ ಸರ್ವಸ್ತುತಿ ಸಲ್ಲುವಂತೆ ಮಾಡಿದ್ದೀರಿ’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಎಂದೂ ಓದಿಲ್ಲವೆ?” ಎಂದು ಉತ್ತರಿಸಿದರು.


ಅದಕ್ಕೆ ಯೇಸು, “ಹಿಂದೆ ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಏನು ಮಾಡಿದರೆಂದು ನೀವು ಓದಿರಬೇಕಲ್ಲವೆ?


ಬಳಿಕ ಯೇಸು ಇಂತೆಂದರು: “ ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು! ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಓದಿಲ್ಲವೆ?


‘ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂಬ ವಾಕ್ಯದ ಅರ್ಥ ನಿಮಗೆ ತಿಳಿದಿದ್ದರೆ, ನಿರ್ದೋಷಿಗಳನ್ನು ನೀವು ಖಂಡಿಸುತ್ತಿರಲಿಲ್ಲ.


ನೀವು ಹೋಗಿ, ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.


ಪುನರುತ್ಥಾನ ಹೊಂದಿದ ಮೇಲೆ ಜನರು ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಸ್ವರ್ಗದ ದೇವದೂತರಂತೆ ಅವರು ಇರುತ್ತಾರೆ.


‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು ಆಗಿದ್ದೇನೆ,’ ಎಂದು ದೇವರೇ ನಿಮಗೆ ಹೇಳಿರುವುದನ್ನು ನೀವು ಓದಿಲ್ಲವೆ? ಹೀಗಿರುವಾಗ ಅವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು