Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:37 - ಕನ್ನಡ ಸತ್ಯವೇದವು C.L. Bible (BSI)

37 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಯೇಸು ಅವನಿಗೆ, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆತನು - ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಬುದ್ಧಿಯಿಂದಲೂ ಪ್ರೀತಿಸಬೇಕು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಯೇಸು, “‘ನಿನ್ನ ದೇವರಾಗಿರುವ ಪ್ರಭುವನ್ನು ಪ್ರೀತಿಸಬೇಕು. ನೀನು ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಯೇಸು ಅವನಿಗೆ, “ ‘ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತನ್ನಾ ಜೆಜುನ್ ತೆಕಾ, “ತುಜ್ಯಾ ಪುರಾ ಕಾಳ್ಜಾನ್, ತುಜ್ಯಾ ಪುರಾ ಜಿವಾನ್, ಅನಿ ತುಜ್ಯಾ ಪುರಾ ಮನಾನ್ ಸರ್ವೆಸ್ವರಾಚೊ, ತುಜ್ಯಾ ದೆವಾಚೊ ಪ್ರೆಮ್ ಕರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:37
13 ತಿಳಿವುಗಳ ಹೋಲಿಕೆ  

ಅವನು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಆತ್ಮದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು’ ಎಂದಿದೆ,” ಎಂದು ಉತ್ತರಕೊಟ್ಟನು.


ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು.


“ಆದುದರಿಂದ ಇಸ್ರಯೇಲರೇ, ನೀವು ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು; ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆಯಬೇಕು; ಅವರನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡಬೇಕು;


ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದುವು,” ಎಂದನು.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮತ್ತು ನಿಮ್ಮ ಸಂತತಿಯವರ ಅಂತರಂಗಕ್ಕೇ ಸುನ್ನತಿ ಮಾಡುವರು. ಆಗ ನೀವು ಅವರನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಬಾಳುವಿರಿ.


ಶರೀರ ಸ್ವಭಾವದಲ್ಲೇ ಮಗ್ನವಾಗಿರುವ ಮನಸ್ಸು ದೇವರಿಗೆ ಶತ್ರು. ಅಂಥ ಮನಸ್ಸು ದೇವರ ನಿಯಮಕ್ಕೆ ಮಣಿಯುವುದಿಲ್ಲ. ಮಣಿಯಲು ಸಾಧ್ಯವೂ ಇಲ್ಲ.


“ಇಸ್ರಯೇಲ್ ಜನಾಂಗವೇ ಕೇಳು; ನಿನ್ನ ದೇವರಾದ ಸರ್ವೇಶ್ವರ ಸ್ವಾಮಿ ಒಬ್ಬರೇ ದೇವರು.


“ಬೋಧಕರೇ, ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ಆಜ್ಞೆ ಯಾವುದು?”


ಇದೇ ಪ್ರಮುಖ ಹಾಗೂ ಪ್ರಥಮ ಆಜ್ಞೆ.


ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ಕ್ರಿಸ್ತಯೇಸು ನಮಗೆ ಮಾಡಿರುವ ಆಜ್ಞೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು