Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:44 - ಕನ್ನಡ ಸತ್ಯವೇದವು C.L. Bible (BSI)

44 ‘ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿ ಹಾಕುವ ತನಕ ನನ್ನ ಬಲಗಡೆ ಆಸೀನನಾಗಿರು ಎಂದು ನನ್ನ ‘ಪ್ರಭು’ವಿಗೆ ಸರ್ವೇಶ್ವರ ಹೇಳಿರುವರು.’ ಎಂದಿದ್ದಾನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ‘ಪ್ರಭು (ದೇವರು) ನನ್ನ ಪ್ರಭುವಿಗೆ (ಕ್ರಿಸ್ತನಿಗೆ), ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 “ ‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು,” ’ ಎಂದು ಹೇಳಿದನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಧನಿಯಾನ್ ಮಾಜ್ಯಾ ಧನಿಯಾಕ್ ಸಾಂಗ್ಲ್ಯಾನ್: ತುಜ್ಯಾ ದುಸ್ಮಾನಾಕ್ನಿ ತುಜ್ಯಾ ಪಾಯಾ ಖಾಲ್ತಿ ಘಾಲಿ ಪತರ್, ಹಿತ್ತೆ ಮಾಜ್ಯಾ ಉಜ್ವ್ಯಾ ಬಾಜುಕ್ ಬಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:44
20 ತಿಳಿವುಗಳ ಹೋಲಿಕೆ  

ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


ಯಾವ ದೇವದೂತನಿಗಾದರೂ ದೇವರು, “ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿ ಹಾಕುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು,” ಎಂದು ಎಂದಾದರೂ ಹೇಳಿದ್ದುಂಟೇ?


ಶತ್ರುಗಳೆಲ್ಲರನ್ನು ತಮ್ಮ ಪಾದಪೀಠವಾಗಿಸಿಕೊಳ್ಳುವ ತನಕ ಅವರು ರಾಜ್ಯವಾಳಬೇಕಾಗಿದೆ.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ಅನಂತರ ಆ ಮೃಗವನ್ನು ಕಂಡೆ. ಕುದುರೆಯ ಮೇಲೆ ಕುಳಿತಿದ್ದಾತನ ಮೇಲೂ ಅವನ ಸೈನ್ಯದ ಮೇಲೂ ಯುದ್ಧಮಾಡುವುದಕ್ಕಾಗಿ, ಆ ಮೃಗವೂ ಭೂಲೋಕದ ರಾಜರೂ ಅವರ ಸೈನ್ಯಗಳೊಡನೆ ಒಟ್ಟಾಗಿ ಸೇರಿಬಂದರು.


ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು.


“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


ಅಗ್ನಿಕುಂಡವಾಗುವರವರು ನೀ ಪ್ರತ್ಯಕ್ಷನಾದಾಗ I ಕಬಳಿಸುವುದು ಕೋಪಾಗ್ನಿ, ಭಸ್ಮವಾಗ್ವರು ಪ್ರಭು ಬಂದಾಗ II


“ಇಲ್ಲಿ ದಾವೀದನೇ ಆತನನ್ನು ‘ನನ್ನ ಪ್ರಭು’ ಎಂದು ಕರೆದಿರುವಾಗ ಆತ ದಾವೀದನಿಗೆ ಪುತ್ರನಾಗಿರುವುದು ಹೇಗೆ?” ಎಂದು ಕೇಳಿದರು.


ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ; ಮಾತ್ರವಲ್ಲ, ನಾನು ಹೇಳುವುದನ್ನು ಕೇಳಿ; ನರಪುತ್ರನು ಸರ್ವಶಕ್ತ ದೇವರ ಬಲಗಡೆ ಆಸೀನನಾಗಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ಇನ್ನು ಮುಂದಕ್ಕೆ ಕಾಣುವಿರಿ,” ಎಂದರು.


ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು