Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:7 - ಕನ್ನಡ ಸತ್ಯವೇದವು C.L. Bible (BSI)

7 ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅರಸನು ಸಿಟ್ಟುಗೊಂಡು ತನ್ನ ದಂಡುಗಳನ್ನು ಕಳುಹಿಸಿ ಆ ಕೊಲೆಗಾರರನ್ನು ನಾಶಮಾಡಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ರಾಜನು ಬಹು ಕೋಪಗೊಂಡು ತನ್ನ ಸೈನ್ಯವನ್ನು ಕಳುಹಿಸಿ ಆ ಕೊಲೆಗಾರರನ್ನು ಕೊಲ್ಲಿಸಿದನು ಮತ್ತು ಅವರ ಪಟ್ಟಣವನ್ನು ಸುಟ್ಟುಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಅರಸನು ಅದನ್ನು ಕೇಳಿ ಬಹುಕೋಪಗೊಂಡು ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ರಾಜಾಕ್ ಲೈ ರಾಗ್ ಯೆಲೊ; ತಸೆಮನುನ್ ರಾಜಾನ್ ಅಪ್ನಾಚ್ಯಾ ಸೈನಿಕಾಕ್ನಿ ಧಾಡುನ್ ತ್ಯಾ ಖುನಿಗಾರಾಕ್ನಿ ಜಿವಾನಿ ಮಾರುಕ್ ಲಾವುನ್ ತೆಂಚೆ ಶಾರುಚ್ ಜಾಳ್ವುನ್ ಟಾಕ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:7
18 ತಿಳಿವುಗಳ ಹೋಲಿಕೆ  

“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.


ಆಗ ಜುದೇಯದಲ್ಲಿರುವವರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ; ಪಟ್ಟಣದೊಳಗಿರುವವರು ಅಲ್ಲಿಂದ ಹೊರಟುಹೋಗಲಿ; ಹಳ್ಳಿಗಾಡಿನಲ್ಲಿರುವವರು ಪಟ್ಟಣಕ್ಕೆ ಬಾರದಿರಲಿ.


ಎಲ್ಲಾ ರಾಷ್ಟ್ರಗಳನ್ನು ನ್ಯಾಯತೀರ್ಪಿನ ಜೊಸೆಫಾತ್ ಕಣಿವೆಗೆ ಬರಮಾಡುವೆನು. ನನ್ನ ಪ್ರಜೆಯೂ ಸ್ವಜನರೂ ಆದ ಇಸ್ರಯೇಲರಿಗೆ ಅವರು ಮಾಡಿದ ಹಿಂಸೆಗಾಗಿ ನ್ಯಾಯಕೇಳುವೆನು. ಅವರು ನನ್ನ ಪ್ರಜೆಯನ್ನು ದೇಶವಿದೇಶಗಳಿಗೆ ಚದರಿಸಿದ್ದಾರೆ. ನನ್ನ ನಾಡನ್ನು ಹಂಚಿಕೊಂಡಿದ್ದಾರೆ.


ಗುಂಪುಮಿಡತೆ, ಕಂಬಳಿಮಿಡತೆ, ಚೂರಿಮಿಡತೆ, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಿಮಗೆ ಭರಿಸಿಕೊಡುವೆನು.


ಸರ್ವೇಶ್ವರ ಗರ್ಜಿಸಿ ತಮ್ಮ ಸೈನ್ಯಕ್ಕೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ದೊಡ್ಡದು. ಅವರ ಆಜ್ಞೆಯನ್ನು ಪಾಲಿಸುವವನು ಬಲಾಢ್ಯನು. ಸರ್ವೇಶ್ವರಸ್ವಾಮಿಯ ದಿನ ಮಹತ್ತರ; ಅತಿ ಭಯಂಕರ; ಅದರೆದುರಿಗೆ ನಿಲ್ಲಲು ಯಾರಿಗಿದೆ ಧೈರ್ಯ?


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ಉಳಿದವರು, ಕರೆಯಲು ಬಂದ ಆಳುಗಳನ್ನೇ ನಿಂದಿಸಿ, ಬಡಿದು, ಕೊಂದುಹಾಕಿದರು.


ಅನಂತರ ತನ್ನ ಸೇವಕರಿಗೆ, ‘ವಿವಾಹ ಮಹೋತ್ಸವವೇನೋ ಸಿದ್ಧವಾಗಿದೆ; ಆಹ್ವಾನಿತರೋ ಅಯೋಗ್ಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು