Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:8 - ಕನ್ನಡ ಸತ್ಯವೇದವು C.L. Bible (BSI)

8 ಅನಂತರ ತನ್ನ ಸೇವಕರಿಗೆ, ‘ವಿವಾಹ ಮಹೋತ್ಸವವೇನೋ ಸಿದ್ಧವಾಗಿದೆ; ಆಹ್ವಾನಿತರೋ ಅಯೋಗ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ತನ್ನ ಆಳುಗಳಿಗೆ, ‘ಮದುವೆಯ ಔತಣವು ಸಿದ್ಧವಾಗಿದೆ ಸರಿ, ಆದರೆ ಆಹ್ವಾನಿತರು ಯೋಗ್ಯರಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ತನ್ನ ಆಳುಗಳಿಗೆ - ಮದುವೆಗೆ ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಬಳಿಕ ರಾಜನು ತನ್ನ ಸೇವಕರಿಗೆ, ‘ಮದುವೆ ಊಟ ಸಿದ್ಧವಾಗಿದೆ. ನಾನು ಆಹ್ವಾನಿಸಿದ್ದ ಜನರು ಊಟಕ್ಕೆ ಬರುವಷ್ಟು ಒಳ್ಳೆಯವರಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ತರುವಾಯ ಅವನು ತನ್ನ ಸೇವಕರಿಗೆ, ‘ಮದುವೆಯ ಔತಣ ಸಿದ್ಧವಾಗಿದೆ, ಆದರೆ ಆಹ್ವಾನಿತರು ಸಿದ್ಧರಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಾನಾ ಅಪ್ನಾಚ್ಯಾ ಆಳಾಕ್ನಿ ಬಲ್ವುಲ್ಯಾನ್ ಅನಿ ತೆಂಕಾ, “ಮಾಜೆ ಲಗ್ನಾಚೆ ಜೆವಾನ್ ತಯಾರ್ ಹಾಯ್, ಖರೆ ಮಿಯಾ ಬಲ್ವಲ್ಲ್ಯಾ ಸೊಯ್ರ್ಯಾಕ್ನಿ ತೆ ನಕ್ಕೊ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:8
11 ತಿಳಿವುಗಳ ಹೋಲಿಕೆ  

ಆದರೂ ತಮ್ಮ ಉಡುಪನ್ನು ಮಲಿನಮಾಡಿಕೊಳ್ಳದ ಕೆಲವರು ಸಾರ್ದಿಸಿನಲ್ಲಿ ಇದ್ದಾರೆ. ಅಂಥವರು ಯೋಗ್ಯರಾಗಿರುವುದರಿಂದ ಶ್ವೇತಾಂಬರರಾಗಿ ನನ್ನೊಡನೆ ನಡೆದಾಡುವರು.


ನೀವು ಅನುಭವಿಸುತ್ತಿರುವುದೆಲ್ಲ ದೇವರ ಸಾಮ್ರಾಜ್ಯಕ್ಕಾಗಿ. ಈ ಕಷ್ಟಾನುಭವಗಳ ಮೂಲಕ ದೇವರು ನಿಮ್ಮನ್ನು ತಮ್ಮ ಸಾಮ್ರಾಜ್ಯಕ್ಕೆ ಅರ್ಹರನ್ನಾಗಿ ಮಾಡುತ್ತಾರೆ. ಇವುಗಳಲ್ಲಿ ನೀವು ತೋರಿಸುವ ಸಹನೆ ಹಾಗೂ ವಿಶ್ವಾಸ ಇವುಗಳೇ ದೇವರು ನ್ಯಾಯವಾದ ತೀರ್ಪು ಮಾಡುತ್ತಾರೆಂಬುದಕ್ಕೆ ಸ್ಪಷ್ಟ ನಿದರ್ಶನಗಳು.


ಪೌಲ ಮತ್ತು ಬಾರ್ನಬ ಮತ್ತಷ್ಟು ಧೈರ್ಯದಿಂದ ಮಾತನಾಡಿದರು: “ದೇವರ ವಾಕ್ಯವನ್ನು ಮೊಟ್ಟಮೊದಲು ನಿಮಗೆ ಬೋಧಿಸುವುದು ಅಗತ್ಯವಾಗಿತ್ತು. ಆದರೆ ನೀವು ಅದನ್ನು ನಿರಾಕರಿಸಿ ಅಮರಜೀವಕ್ಕೆ ಅಪಾತ್ರರೆಂದು ನಿಮ್ಮನ್ನು ನೀವೇ ತೀರ್ಮಾನಿಸಿಕೊಂಡಿರಿ. ಆದುದರಿಂದ ನಾವು ನಿಮ್ಮನ್ನು ಬಿಟ್ಟು ಅನ್ಯಧರ್ಮದವರ ಕಡೆ ಹೋಗುತ್ತೇವೆ.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ಆದರೆ ಸತ್ತವರು ಪುನರುತ್ಥಾನ ಹೊಂದಿ ಮರುಲೋಕ ಜೀವನಕ್ಕೆ ಯೋಗ್ಯರಾದಾಗ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ.


ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು.


ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ.


ನೀವು ಹೆದ್ದಾರಿಗಳಿಗೆ ಹೋಗಿ ಕಂಡಕಂಡವರನ್ನೆಲ್ಲಾ ಉತ್ಸವಕ್ಕೆ ಕರೆಯಿರಿ’ ಎಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು