Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:13 - ಕನ್ನಡ ಸತ್ಯವೇದವು C.L. Bible (BSI)

13 “ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಫಾರಿಜೆವಾನು ಅನಿ ಶಾಸ್ತರಾ ಶಿಕ್ವುತಲ್ಯಾನು ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಕುಸ್ಡೆ ತುಮಿ! ಲೊಕಾ ಸರ್‍ಗಾಚ್ಯಾ ರಾಜಾತ್ ಜಾತಾನಾ ತುಮಿ ತೆಂಕಾ ದಾರ್ ಬಂದ್ ಕರುನ್ ಥವ್ತ್ಯಾಶಿ, ತುಮಿಬಿ ತ್ಯಾತುರ್ ಭುತ್ತುರ್ ಗುಸಿನ್ಯಾಸಿ ಅನಿ ಗುಸುಕ್ ಮನುನ್ ಖಟ್ಪಟ್ತಲ್ಯಾಕ್ನಿಬಿ ತ್ಯಾತುರ್ ಭುತ್ತುರ್ ಗುಸುಕ್ ದಿನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:13
25 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರಜ್ಞರೇ, ನಿಮಗೆ ಧಿಕ್ಕಾರ! ಜ್ಞಾನವೆಂಬ ಮಂದಿರದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವು ಒಳಕ್ಕೆ ಪ್ರವೇಶಿಸುವುದಿಲ್ಲ; ಪ್ರವೇಶಿಸಲು ಯತ್ನಿಸುವವರನ್ನೂ ತಡೆಗಟ್ಟುತ್ತೀರಿ,” ಎಂದರು.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪ್ರವಾದಿಗಳಿಗೆ ಗೋರಿಗಳನ್ನು ಕಟ್ಟಿಸುತ್ತೀರಿ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಸುಣ್ಣ ಬಳಿದ ಸಮಾಧಿಗಳು. ಹೊರನೋಟಕ್ಕೇನೋ ಅವು ಥಳಕಾಗಿವೆ. ಒಳಗೋ ಸತ್ತವರ ಮೂಳೆಗಳಿಂದಲೂ ಕೊಳಕಿನಿಂದಲೂ ತುಂಬಿವೆ.


ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.


ಮಂದೆಕಾಯದ ಕುರುಬನಿಗೆ ಧಿಕ್ಕಾರ! ತಾಕುವುದು ಅವನ ತೋಳಿಗೂ ಬಲಗಣ್ಣಿಗೂ ಖಡ್ಗ ತೀರಾ ಬತ್ತಿಹೋಗಲಿ ಅವನ ತೋಳು ಪೂರಾ ಮಬ್ಬಾಗಲಿ ಅವನ ಬಲಗಣ್ಣು.


ಆ ದಿನವೇ ಜೆರುಸಲೇಮಿನ ಧರ್ಮಸಭೆಯ ವಿರುದ್ಧ ಕ್ರೂರ ಹಿಂಸೆ ಪ್ರಾರಂಭ ಆಯಿತು. ಪ್ರೇಷಿತರ ಹೊರತು ಇತರ ಭಕ್ತವಿಶ್ವಾಸಿಗಳು ಜುದೇಯ ಮತ್ತು ಸಮಾರಿಯ ಪ್ರಾಂತ್ಯಗಳಲ್ಲೆಲ್ಲಾ ಚದರಿಹೋದರು.


ನೀನು ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಮ್ಮ ಬೋಧನೆಗೆ ಅವನು ಕಟುವಾದ ವಿರೋಧಿ ಆಗಿದ್ದಾನೆ.


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ಯನ್ನ ಮತ್ತು ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆ, ಇವರು ಸತ್ಯವನ್ನು ಪ್ರತಿಭಟಿಸುತ್ತಾರೆ.


ಆದರೆ ಆ ಮಂತ್ರವಾದಿ (ಗ್ರೀಕ್ ಭಾಷೆಯಲ್ಲಿ ಅವನನ್ನು ‘ಎಲಿಮ’ ಎಂದು ಕರೆಯುತ್ತಿದ್ದರು) ಅವರನ್ನು ವಿರೋಧಿಸಿದನು. ರಾಜ್ಯಪಾಲನು ವಿಶ್ವಾಸಿಯಾಗದಂತೆ ತಡೆಯಲು ಯತ್ನಿಸಿದನು.


ಪ್ರೇಷಿತರನ್ನು ಒಳಗೆ ಕರೆದು, ಚಾವಟಿಯಿಂದ ಹೊಡೆದು, ಇನ್ನು ಮೇಲೆ ಯೇಸುವಿನ ಹೆಸರಿನಲ್ಲಿ ಬೋಧಿಸಬಾರದೆಂದು ಕಟ್ಟಪ್ಪಣೆಮಾಡಿ ಅವರನ್ನು ಬಿಟ್ಟುಬಿಟ್ಟರು.


“ಆ ವ್ಯಕ್ತಿಯ ಹೆಸರಿನಲ್ಲಿ ಉಪದೇಶ ಮಾಡಕೂಡದು ಎಂದು ನಿಮಗೆ ಕಟ್ಟಪ್ಪಣೆ ಮಾಡಿದೆವು. ಆದರೂ ನೀವು ಮಾಡಿರುವುದೇನು? ನಿಮ್ಮ ಬೋಧನೆ ಜೆರುಸಲೇಮ್ ಆದ್ಯಂತ ಹಬ್ಬಿಹರಡಿದೆ. ಅಷ್ಟುಮಾತ್ರವಲ್ಲ, ಆ ವ್ಯಕ್ತಿಯ ಕೊಲೆಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದಿರುವಿರಿ,” ಎಂದು ಆಪಾದಿಸಿದನು.


ಆಗ ಫರಿಸಾಯರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು, ನಮಗೇ ಬುದ್ಧಿಹೇಳಹೊರಟೆಯಾ?” ಎಂದು ಹೇಳಿ ಅವನನ್ನು ತಳ್ಳಿಬಿಟ್ಟರು.


ಅಧಿಕಾರಿಗಳು ಆ ಹುಟ್ಟು ಕುರುಡನನ್ನು ಮತ್ತೆ ಕರೆಯಿಸಿ, “ನೀನು ದೇವರ ಮುಂದೆ ಪ್ರಮಾಣಮಾಡಿ ಹೇಳು. ಆ ಮನುಷ್ಯ ಪಾಪಿಯೆಂದು ನಮಗೆ ಗೊತ್ತು,” ಎಂದು ಕೇಳಿದರು.


ಅವರು ಹೀಗೆ ಹೇಳಿದ್ದು ಯೆಹೂದ್ಯ ಅಧಿಕಾರಿಗಳ ಅಂಜಿಕೆಯಿಂದ. ಏಕೆಂದರೆ, ಯಾರಾದರೂ ಯೇಸುವನ್ನು ಲೋಕೋದ್ಧಾರಕ ಎಂದು ಒಪ್ಪಿಕೊಂಡರೆ ಅಂಥವರಿಗೆ ಪ್ರಾರ್ಥನಾಮಂದಿರದಿಂದ ಬಹಿಷ್ಕಾರ ಹಾಕಬೇಕೆಂದು ಅಧಿಕಾರಿಗಳು ಈ ಮೊದಲೇ ಗೊತ್ತುಮಾಡಿದ್ದರು.


ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ನಿಮ್ಮ ತಟ್ಟೆಲೋಟಗಳ ಹೊರಭಾಗಗಳನ್ನೇನೋ ಶುಚಿಮಾಡುತ್ತೀರಿ; ಆದರೆ ಅವುಗಳ ಒಳಭಾಗ ಕೊಳ್ಳೆ ಹಾಗೂ ಲೋಭದ ಗಳಿಕೆಗಳಿಂದ ತುಂಬಿಹೋಗಿದೆ.


ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?


“ಕುರುಡ ಮಾರ್ಗದರ್ಶಕರೇ, ನಿಮಗೆ ಧಿಕ್ಕಾರ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅವನು ಅದಕ್ಕೇನೂ ಬದ್ಧನಲ್ಲ. ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೋ, ಅವನು ಅದನ್ನು ನಡೆಸಿಯೇ ತೀರಬೇಕು ಎನ್ನುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು