Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:15 - ಕನ್ನಡ ಸತ್ಯವೇದವು C.L. Bible (BSI)

15 ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಕೇವಲ ಒಬ್ಬ ವ್ಯಕ್ತಿಯನ್ನು ಮತಾಂತರಿಸಿಕೊಳ್ಳುವುದಕ್ಕಾಗಿ ಜಲನೆಲಗಳನ್ನು ಸುತ್ತಿ ಬರುತ್ತೀರಿ. ಮತಾಂತರಗೊಂಡ ಬಳಿಕವಾದರೋ ಅವನು ನಿಮಗಿಂತಲೂ ಇಮ್ಮಡಿ ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬನನ್ನು ನಿಮ್ಮ ಮತದಲ್ಲಿ ಸೇರಿಸಿಕೊಳ್ಳುವದಕ್ಕಾಗಿ ಭೂವಿುಯನ್ನೂ ಸಮುದ್ರವನ್ನೂ ಸುತ್ತಿಕೊಂಡು ಬರುತ್ತೀರಿ; ಅವನು ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟಾಗಿ ನರಕ ಪಾತ್ರನಾಗಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮ ಮಾರ್ಗಗಳನ್ನು ಹಿಂಬಾಲಿಸುವ ಒಬ್ಬನನ್ನು ಕಂಡುಕೊಳ್ಳಲು ನೀವು ಸಮುದ್ರಗಳನ್ನು ದಾಟಿ ಬೇರೆಬೇರೆ ದೇಶಗಳಲ್ಲಿ ಪ್ರಯಾಣ ಮಾಡುತ್ತೀರಿ. ಅವನನ್ನು ಕಂಡುಕೊಂಡ ಮೇಲೆ ನಿಮಗಿಂತಲೂ ಹೆಚ್ಚು ಕೆಟ್ಟವನನ್ನಾಗಿ ಮಾಡುತ್ತೀರಿ. ನೀವು ನರಕಪಾತ್ರರಾಗುವಷ್ಟು ಕೆಟ್ಟವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ ನಿಮಗೆ ಕಷ್ಟ! ಏಕೆಂದರೆ ಒಬ್ಬನನ್ನು ಮತಾಂತರ ಮಾಡುವುದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ. ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 “ಫಾರಿಜೆವಾನು ಅನಿ ಶಾಸ್ತರಾ ಶಿಕ್ವುತಲ್ಯಾನು ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಕುಸ್ಡೆ ತುಮಿ! ಎಕ್ ಮಾನ್ಸಾಕ್ ತುಮ್ಚ್ಯಾ ಶಾಸ್ತರಾ ಸರ್ಕೆ ಚಲಿ ಸರ್ಕೆ ಕರುಕ್ ಮನುನ್ ಸಮುಂದರಾಂಚಿ ಸಮುಂದರಾ ದಾಟುನ್ ತುಮಿ ಜಾತ್ಯಾಶಿ, ಅನಿ ಕೊನ್ಬಿ ಎಕ್ಲೊ ಗಾವ್ಲೊ ತರ್ ತೆಕಾಬಿ ತುಮ್ಚ್ಯಾನ್ ದೊನ್‍ಪಟ್ ನರ್‍ಕಾತ್ ತೆಕಾ ಶಿಕ್ಷಾ ಗಾವುಚಿ ತವ್ಡೆ ಬುರ್ಶೆಪಾನ್ ಶಿಕ್ವುತ್ಯಾಶಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:15
17 ತಿಳಿವುಗಳ ಹೋಲಿಕೆ  

ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು.


ಪ್ರಾರ್ಥನಾಕೂಟ ಮುಗಿದಮೇಲೆ ಅನೇಕ ಯೆಹೂದ್ಯರೂ ಯೆಹೂದ್ಯ ಮತಾವಲಂಬಿಗಳಾದ ಅನ್ಯರೂ ಪೌಲ ಮತ್ತು ಬಾರ್ನಬರನ್ನು ಹಿಂಬಾಲಿಸಿದರು. ಈ ಪ್ರೇಷಿತರು ಅವರೊಡನೆ ಮಾತನಾಡಿ ದೈವಾನುಗ್ರಹದಲ್ಲಿ ದೃಢವಾಗಿ ಬಾಳುವಂತೆ ಪ್ರೋತ್ಸಾಹಿಸಿದರು.


“ಎಲವೋ ಪಿಶಾಚಿಕೋರನೇ, ಸರ್ವಸನ್ಮಾರ್ಗಕ್ಕೆ ಶತ್ರು ನೀನು; ಎಲ್ಲಾ ತಂತ್ರ ಕುತಂತ್ರಗಳು ನಿನ್ನಲ್ಲಿ ತುಂಬಿವೆ. ಪ್ರಭುವಿನ ಸನ್ಮಾರ್ಗಕ್ಕೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ? ಇಗೋ, ಈಗ ಪ್ರಭುವಿನ ಶಾಪ ನಿನ್ನ ಮೇಲಿದೆ!


ವಿಶ್ವಾಸಿಸಲೊಲ್ಲದ ಯೆಹೂದ್ಯರಾದರೋ ಅನ್ಯಧರ್ಮೀಯರನ್ನು ಪ್ರಚೋದಿಸಿ ಭಕ್ತರ ವಿರುದ್ಧ ಎತ್ತಿಕಟ್ಟಿದರು.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಬಾಹ್ಯಾಚಾರಗಳಿಂದ ತಾವು ಒಳ್ಳೆಯವರು ಎನಿಸಿಕೊಳ್ಳಬೇಕೆನ್ನುವವರು ನೀವು ಸುನ್ನತಿಮಾಡಿಸಿಕೊಳ್ಳಬೇಕೆಂದು ಬಲಾತ್ಕಾರ ಮಾಡುತ್ತಿದ್ದಾರೆ. ಕ್ರಿಸ್ತಯೇಸುವಿನ ಶಿಲುಬೆಯ ನಿಮಿತ್ತ ತಮಗೆ ಹಿಂಸೆಬಾಧೆಗಳು ಉಂಟಾಗಬಾರದು ಎಂಬುದೇ ಅವರ ಉದ್ದೇಶವಾಗಿದೆ.


ಆ ನನ್ನ ವಿರೋಧಿಗಳು ನಿಮ್ಮನ್ನು ಮೆಚ್ಚಿಸಲು ತುಂಬ ಆಸಕ್ತಿಯನ್ನು ತೋರಿಸುತ್ತಿದ್ದಾರೆ. ಆದರೆ ಅವರ ಉದ್ದೇಶ ಒಳ್ಳೆಯದಲ್ಲ. ನೀವು ಸಹ ಅವರನ್ನು ಅಷ್ಟೇ ಆಸಕ್ತಿಯಿಂದ ಮೆಚ್ಚಿಸಬೇಕೆಂಬುದೇ ಅವರ ಉದ್ದೇಶ. ಆದ್ದರಿಂದಲೇ ನಿಮ್ಮನ್ನು ನನ್ನಿಂದ ಬೇರ್ಪಡಿಸಲು ಯತ್ನಿಸುತ್ತಿದ್ದಾರೆ.


ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.


ಪೌಲನು ಬೆರೋಯದಲ್ಲೂ ದೇವರ ವಾಕ್ಯವನ್ನು ಸಾರುತ್ತಿದ್ದಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದುಬಂತು. ಅವರು ಅಲ್ಲಿಗೂ ಬಂದು ಜನಸಮೂಹವನ್ನು ಪ್ರಚೋದಿಸಿ ಗಲಭೆಯೆಬ್ಬಿಸಿದರು.


ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ಫ್ರಿಜಿಯ ಮತ್ತು ಪಾಂಫಿಲಿಯದವರೂ ಇದ್ದಾರೆ. ಈಜಿಪ್ಟ್ ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರೂ ಸೇರಿದ್ದಾರೆ. ಅದಲ್ಲದೆ ನಮ್ಮಲ್ಲಿ ಕೆಲವರು ರೋಮ್‍ನಿಂದ ಬಂದಿದ್ದಾರೆ.


ಪ್ರೇಷಿತರ ಈ ಸಲಹೆಯನ್ನು ಇಡೀ ಸಭೆ ಅನುಮೋದಿಸಿತು. ಅಂತೆಯೇ ಅಗಾಧ ವಿಶ್ವಾಸ ಉಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೇಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬ ಏಳುಮಂದಿಯನ್ನು ಆರಿಸಿಕೊಂಡರು.


ರಾಜನಿರ್ಣಯ ಶಾಸನಗಳು ಪ್ರಕಟವಾದ ಸಂಸ್ಥಾನಗಳಲ್ಲೂ ನಗರಗಳಲ್ಲೂ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೆ ಶುಭದಿನ ಉದಯವಾಯಿತು. ಅವರು ಅದನ್ನು ಸಂತೋಷದ ಹಾಗೂ ಸಂಭ್ರಮದ ದಿನವನ್ನಾಗಿ ಆಚರಿಸಿದರು. ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ನಿನ್ನ ಬಲಗಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತೆಸೆದುಬಿಡು; ನಿನ್ನ ಇಡೀ ದೇಹ ನರಕಕ್ಕೆ ತುತ್ತಾಗುವುದಕ್ಕಿಂತ ನಿನ್ನ ಒಂದು ಅಂಗ ನಾಶವಾಗುವುದೇ ಲೇಸು.


ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು