Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:16 - ಕನ್ನಡ ಸತ್ಯವೇದವು C.L. Bible (BSI)

16 “ಕುರುಡ ಮಾರ್ಗದರ್ಶಕರೇ, ನಿಮಗೆ ಧಿಕ್ಕಾರ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅವನು ಅದಕ್ಕೇನೂ ಬದ್ಧನಲ್ಲ. ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೋ, ಅವನು ಅದನ್ನು ನಡೆಸಿಯೇ ತೀರಬೇಕು ಎನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಯ್ಯೋ, ದಾರಿತೋರಿಸುವ ಕುರುಡರೇ, ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು ಎಂದು ನೀವು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಜನರಿಗೆ ಮಾರ್ಗದರ್ಶನ ಮಾಡುತ್ತೀರಿ. ಆದರೆ ನೀವೇ ಕುರುಡರು. ಒಬ್ಬನು ದೇವಾಲಯದ ಹೆಸರಿನ ಮೇಲೆ ವಾಗ್ದಾನ ಮಾಡಿದರೆ ಅದಕ್ಕೇನೂ ಬೆಲೆಯಿಲ್ಲ ಎನ್ನುತ್ತೀರಿ. ಆದರೆ ಒಬ್ಬನು ದೇವಾಲಯದಲ್ಲಿರುವ ಚಿನ್ನದ ಮೇಲೆ ವಾಗ್ದಾನ ಮಾಡಿದರೆ, ಅವನು ಅದನ್ನು ಈಡೇರಿಸಬೇಕು ಎಂದು ಹೇಳುತ್ತೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಕುರುಡರಾದ ಮಾರ್ಗದರ್ಶಕರೇ! ನಿಮಗೆ ಕಷ್ಟ, ‘ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಎನ್ನುತ್ತೀರಿ. ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಅದನ್ನು ಕೊಟ್ಟುಬಿಡಬೇಕು,’ ಎನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 “ಲೊಕಾಕ್ನಿ ವಾಟ್ ದಾಕ್ವುತಲ್ಯಾ ಕುಡ್ಡ್ಯಾನು ತುಮ್ಚಿ ಗತ್ ಕಾಯ್ ಸಾಂಗು! ಕೊನ್ ತರ್ ದೆವಾಚ್ಯಾ ಗುಡಿ ವರ್‍ತಿ ಆನ್ ಘಾಲುನ್ ಮಾಗುನ್ ಘೆಟ್ಲ್ಯಾರ್ ತೆನಿ ತಿ ಮಾಗ್ನಿ ಪುರಾ ಕರುಚಿ ಮನುನ್ ನಾ, ಖರೆ ದೆವಾಚ್ಯಾ ಗುಡಿತ್ಲ್ಯಾ ಸೊನ್ಯಾಚ್ಯಾ ವರ್‍ತಿ ಆನ್ ಘಾಲುನ್ ಮಾಗುನ್ ಘೆಟಲ್ಲೆ ರ್‍ಹಾಲ್ಯಾರ್ ತೆನಿ ತಿ ಮಾಗ್ನಿ ಪುರಾ ಕರುಚಿಚ್ ಮನುನ್ ತುಮಿ ಶಿಕ್ವುತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:16
14 ತಿಳಿವುಗಳ ಹೋಲಿಕೆ  

ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


ಅಂಧನಿರ್ದೇಶಕರೇ, ನೀವು ಸೊಳ್ಳೆಯನ್ನೇನೋ ಸೋಸುತ್ತೀರಿ, ಆದರೆ ಒಂಟೆಯನ್ನೇ ನುಂಗಿಬಿಡುತ್ತೀರಿ.


ದೃಷ್ಟಿಗೆಟ್ಟ ಮತಿಭ್ರಷ್ಟರೇ, ಯಾವುದು ಶ್ರೇಷ್ಠ? ಚಿನ್ನವೋ, ಚಿನ್ನವನ್ನು ಪಾವನಗೊಳಿಸುವ ದೇವಾಲಯವೋ? ಅಂತೆಯೇ,


ಮುಖ್ಯವಾಗಿ ಸಹೋದರರೇ, ಆಣೆಯಿಡಬೇಡಿ. ಪರಲೋಕದ ಮೇಲಾಗಲಿ, ಭೂಲೋಕದ ಮೇಲಾಗಲಿ, ಇನ್ನಾವುದರ ಮೇಲಾಗಲಿ ನೀವು ಆಣೆಯಿಡಬಾರದು. ಹೌದಾದರೆ ಹೌದು, ಇಲ್ಲವಾದರೆ ಇಲ್ಲ ಎನ್ನಿ. ಆಗ ನೀವು ದಂಡನಾತೀರ್ಪಿಗೆ ಗುರಿಯಾಗುವುದಿಲ್ಲ.


ಕುರುಡ ಫರಿಸಾಯನೇ, ಮೊತ್ತಮೊದಲು ತಟ್ಟೆಲೋಟಗಳ ಒಳಭಾಗವನ್ನು ತೊಳೆ, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು.


ದೃಷ್ಟಿಹೀನರೇ! ಯಾವುದು ಶ್ರೇಷ್ಠ? ಕಾಣಿಕೆಯೋ, ಕಾಣಿಕೆಯನ್ನು ಪಾವನಗೊಳಿಸುವ ಬಲಿಪೀಠವೋ?


ಸುನ್ನತಿಮಾಡಿಸಿಕೊಳ್ಳುವ ಪ್ರತಿಯೊಬ್ಬನೂ ಇಡೀ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಲು ಬದ್ಧನಾಗಿದ್ದಾನೆ ಎಂದು ಪುನಃ ನಿಮಗೆ ನಾನು ಒತ್ತಿ ಹೇಳುತ್ತೇನೆ.


ಈ ಜನರನ್ನು ನಡೆಸುವವರು ತಪ್ಪುದಾರಿಗೆ ಎಳೆಯುವಂಥವರು. ಅವರನ್ನು ಹಿಂಬಾಲಿಸುವವರೆಲ್ಲ ನಾಶವಾಗುವರು.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು