Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:31 - ಕನ್ನಡ ಸತ್ಯವೇದವು C.L. Bible (BSI)

31 ಹೀಗೆ ಪ್ರವಾದಿಗಳನ್ನು ಕೊಲೆಮಾಡಿದವರ ಪೀಳಿಗೆಗೆ ನೀವು ಸೇರಿದವರು ಎಂದು ನೀವೇ ಸಾಕ್ಷಿಕೊಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆ ಪ್ರವಾದಿಗಳನ್ನು ಕೊಂದವರ ಮಕ್ಕಳು (ಸಂತತಿಯವರು) ನೀವೇ ಎಂಬುದಕ್ಕೆ ಇದೇ ಆಧಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದ್ದರಿಂದ ನೀವು ಆ ಪ್ರವಾದಿಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಅಶೆ, ತನ್ನಾ ಪ್ರವಾದ್ಯಾಕ್ನಿ ಜಿವಾನಿ ಮಾರಲ್ಲ್ಯಾಂಚ್ಯಾಚ್ ಘರಾನ್ಯಾಚೆ ತುಮಿ ಮನುನ್ ದಾಕ್ವುನ್ ದಿತ್ಯಾಶಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:31
11 ತಿಳಿವುಗಳ ಹೋಲಿಕೆ  

ರಾಜ ಅವನನ್ನು ನೋಡಿ, ‘ಎಲಾ ದುಷ್ಟ ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದಿದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ?


ಯೆಹೋಶುವ ಅವರಿಗೆ, “ನೀವು ಸರ್ವೇಶ್ವರನಿಗೇ ಸೇವೆಸಲ್ಲಿಸುವುದನ್ನು ಆರಿಸಿಕೊಂಡಿರುವುದಕ್ಕೆ ನೀವೇ ಸಾಕ್ಷಿಗಳು,” ಎನ್ನಲು ಅವರು, “ಹೌದು, ನಾವೇ ಸಾಕ್ಷಿಗಳು,” ಎಂದು ಉತ್ತರಕೊಟ್ಟರು.


ನಾಲಿಗೆ ನಿಮಿತ್ತ ಅವರು ಅವನತಿಗೀಡಾಗುವರು I ನೋಡುವವರೆಲ್ಲರು ತಲೆಯಾಡಿಸಿ ಅಣಕಿಸುವರು II


ನಗರದ ನಡುವೆಯೇ ಆದ ನೀತಿವಂತರ ರಕ್ತಪಾತದಿಂದ ಯಾಜಕರು, ಪ್ರವಾದಿಗಳು ಎಸಗಿದ ಈ ಪಾಪದೋಷಗಳಿಂದ ಬಂದೊದಗಿತು ಈ ಪರಿತಾಪವೆಲ್ಲ.


ಸತ್ಪುರುಷರ ಸ್ಮಾರಕಗಳನ್ನು ಶೃಂಗರಿಸುತ್ತೀರಿ. ‘ನಮ್ಮ ಪೂರ್ವಜರ ಕಾಲದಲ್ಲಿ ನಾವು ಇದ್ದಿದ್ದರೆ ಪ್ರವಾದಿಗಳ ರಕ್ತಪಾತದಲ್ಲಿ ಭಾಗಿಗಳಾಗುತ್ತಿರಲಿಲ್ಲ’ ಎಂದುಕೊಳ್ಳುತ್ತೀರಿ.


ಒಳ್ಳೆಯದು, ನಿಮ್ಮ ಪೂರ್ವಜರು ಪ್ರಾರಂಭಿಸಿದ್ದನ್ನು ನೀವು ಹೋಗಿ ಪೂರ್ಣಗೊಳಿಸಿರಿ.


ಅವರಲ್ಲಿ ಕೆಲವರನ್ನು ಕೊಲೆಮಾಡುವಿರಿ, ಶಿಲುಬೆಗೆ ಏರಿಸುವಿರಿ, ಮತ್ತೆ ಕೆಲವರನ್ನು ನಿಮ್ಮ ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವಿರಿ. ಊರಿಂದೂರಿಗೆ ಅಟ್ಟಿ ಅವರನ್ನು ಪೀಡಿಸುವಿರಿ.


“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು