Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:4 - ಕನ್ನಡ ಸತ್ಯವೇದವು C.L. Bible (BSI)

4 ಭಾರವಾದ ಹಾಗೂ ಹೊರಲಾಗದ ಹೊರೆಗಳನ್ನು ಕಟ್ಟಿ ಮಾನವರ ಹೆಗಲ ಮೇಲೆ ಹೇರುತ್ತಾರೆ. ತಾವಾದರೋ ಅವನ್ನು ಕಿರುಬೆರಳಿನಿಂದಲೂ ಮುಟ್ಟಲೊಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ಮುಟ್ಟಲೊಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ಮುಟ್ಟಲೊಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ಬೇರೆಯವರಿಗೆ ಕಷ್ಟಕರವಾದ ನಿಯಮಗಳನ್ನು ಕೊಟ್ಟು ಅವುಗಳಿಗೆ ವಿಧೇಯರಾಗಬೇಕೆಂದು ಒತ್ತಾಯ ಮಾಡುತ್ತಾರೆ. ತಾವಾದರೋ ಆ ನಿಯಮಗಳಲ್ಲಿ ಯಾವದನ್ನಾದರೂ ಅನುಸರಿಸಲು ಪ್ರಯತ್ನಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹೊರುವುದಕ್ಕೆ ಭಾರವಾದ ಮತ್ತು ಹೊರಲಾಗದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಅವರು ಹೊರಿಸುತ್ತಾರೆ. ತಾವಾದರೋ ತಮ್ಮ ಬೆರಳಿನಿಂದಲೂ ಅವುಗಳನ್ನು ಮುಟ್ಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಲೊಕಾಕ್ನಿ ಡುಬ್ರಿರ್ ವಾವುನ್ ಘೆವ್ಕ್ ತರಾಸ್ ಹೊತಾ ತಸ್ಲಿ ವಜ್ಜಿ ತೆನಿ ಭಾಂದ್ತ್ಯಾತ್, ಖರೆ ತೆ ವಜ್ಜೆ ವಾವುಕ್ ಮಜತ್ ಕರುಕ್ ಮನುನ್ ಎಕ್ ಬೊಟ್ ಸೈತ್ ಲಾವುಕ್ ತೆನಿ ಮನ್ ಕರಿನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:4
10 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಶಾಸ್ತ್ರಜ್ಞರೇ, ನಿಮಗೂ ಧಿಕ್ಕಾರ! ಹೊರಲಾಗದ ಹೊರೆಗಳನ್ನು ನೀವು ಜನರ ಮೇಲೆ ಹೇರುತ್ತೀರಿ; ನೀವಾದರೋ ನಿಮ್ಮ ಕಿರುಬೆರಳಿನಿಂದ ಕೂಡ ಅವುಗಳನ್ನು ಮುಟ್ಟುವುದಿಲ್ಲ.


ಆದುದರಿಂದ ನಮ್ಮ ಪೂರ್ವಜರಿಂದಾಗಲೀ ನಮ್ಮಿಂದಾಗಲೀ ಹೊರಲಾಗದಂಥ ಹೊರೆಯನ್ನು ಈ ಅನುಯಾಯಿಗಳ ಮೇಲೆ ಏಕೆ ಹೊರಿಸುತ್ತೀರಿ? ಹೀಗೆ ದೇವರನ್ನೇಕೆ ಕೆಣಕುತ್ತೀರಿ?


ಸುನ್ನತಿಮಾಡಿಸಿಕೊಳ್ಳುವ ತಾವಾದರೂ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವುದಿಲ್ಲ. ಆದರೆ ನಿಮ್ಮ ದೈಹಿಕ ಸುನ್ನತಿಯಿಂದ, ಅವರು ಹೆಚ್ಚಳಿಕೆ ಗಳಿಸುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಬಯಸುತ್ತಾರೆ.


ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.


“ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ: ಈ ದುರ್ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ‘ಸೈತಾನನ ಗೂಢ ರಹಸ್ಯಗಳು’ ಎನ್ನಲಾಗುವ ಈ ವಿಷಯಗಳನ್ನು ನೀವು ಅರಿತುಕೊಳ್ಳಲಿಲ್ಲ. ನಿಮ್ಮ ಮೇಲೆ ಹೆಚ್ಚಿನ ಹೊರೆಯನ್ನು ಹೊರಿಸುವುದಿಲ್ಲ.


ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು. ಅದನ್ನು ಸೇವಿಸಬಾರದು; ರಕ್ತವನ್ನಾಗಲಿ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲಿ ತಿನ್ನಬಾರದು; ಅನೈತಿಕತೆಯಿಂದ ದೂರವಿರಬೇಕು. ಈ ಅಗತ್ಯ ನಿಯಮಗಳ ಹೊರತು ಬೇರೆ ಯಾವ ಹೊರೆಯನ್ನೂ ನಿಮ್ಮ ಮೇಲೆ ಹೇರುವುದು ವಿಹಿತವಲ್ಲವೆಂಬುದು ಪವಿತ್ರಾತ್ಮ ಅವರ ಹಾಗೂ ನಮ್ಮ ತೀರ್ಮಾನ. ಈ ನಿಯಮಗಳನ್ನು ಅನುಸರಿಸಿದರೆ, ನಿಮಗೆ ಒಳಿತಾಗುವುದು, ನಿಮಗೆ ಶುಭವಾಗಲಿ!”


ತಗ್ಗಿದೆ ಬೇಲ್ ದೇವತೆ ಕುಗ್ಗಿದೆ ನೆಬೋ ದೇವತೆ ಅವುಗಳ ಪ್ರತಿಮೆಗಳನು ಕತ್ತೆಗಳು ಹೊತ್ತಿವೆ. ನೀವು ಮೆರವಣಿಗೆಯಾಗಿ ಹೊರುತ್ತಿದ್ದ ಆ ಬೊಂಬೆಗಳೆ, ಭಾರವಾದ ಹೊರೆಯಾಗಿವೆ, ಬಳಲಿದಾ ಪಶುಗಳಿಗೆ


ಆದುದರಿಂದ ಅವರು ನಿಮಗೆ ಉಪದೇಶಿಸುವುದನ್ನೆಲ್ಲಾ ಆಲಿಸಿರಿ ಹಾಗೂ ಪಾಲಿಸಿರಿ. ಆದರೆ ಅವರ ನಡತೆಯನ್ನು ಅನುಸರಿಸಬೇಡಿ. ಏಕೆಂದರೆ ಅವರು ನುಡಿದಂತೆ ನಡೆಯುವುದಿಲ್ಲ.


ದೇವರನ್ನು ಪ್ರೀತಿಸುವುದು ಎಂದರೆ ಅವರು ಕೊಟ್ಟ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ. ಅವರ ಆಜ್ಞೆಗಳು ನಮಗೆ ಹೊರೆಯೇನೂ ಅಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು