Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:5 - ಕನ್ನಡ ಸತ್ಯವೇದವು C.L. Bible (BSI)

5 ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆಂದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲಂಗಿಯ ಗೊಂಡೆಗಳನ್ನು ಉದ್ದುದ್ದ ಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ತಮ್ಮ ಕೆಲಸಗಳನ್ನೆಲ್ಲಾ ಜನರಿಗೆ ಕಾಣಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕ ಪಟ್ಟಿಗಳನ್ನು ಅಗಲಮಾಡುತ್ತಾರೆ, ಗೊಂಡೆಗಳನ್ನು ಉದ್ದಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ತಮ್ಮನ್ನು ಬೇರೆ ಜನರು ನೋಡಲಿ ಎಂಬ ಒಂದೇ ಉದ್ದೇಶದಿಂದ ಅವರು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾರೆ. ಪವಿತ್ರ ಗ್ರಂಥಗಳು ತುಂಬಿರುವ ವಿಶೇಷವಾದ ಚರ್ಮದ ಚೀಲಗಳನ್ನು ಅವರು ಕಟ್ಟಿಕೊಂಡಿರುತ್ತಾರೆ. ಅವರು ಈ ಚೀಲಗಳನ್ನು ಇನ್ನೂ ಹೆಚ್ಚುಹೆಚ್ಚು ದೊಡ್ಡದನ್ನಾಗಿ ಮಾಡುತ್ತಾರೆ. ಜನರು ನೋಡಲಿ ಎಂದು ಅವರು ತಮ್ಮ ವಿಶೇಷ ಪ್ರಾರ್ಥನೆಯ ಉಡುಪುಗಳನ್ನು ಮತ್ತಷ್ಟು ಉದ್ದ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡುತ್ತಾರೆ. ಅವರು ತಮ್ಮ ಬಾಹುಗಳ ಮೇಲೆ ದೇವರ ವಾಕ್ಯವುಳ್ಳ ಡಬ್ಬಿಗಳನ್ನು ಮತ್ತು ಹಣೆಯ ಮೇಲೆ ಅಗಲ ಪಟ್ಟಿಗಳನ್ನು ಮಾಡಿ ಉಡುಪುಗಳ ಅಂಚುಗಳನ್ನು ಉದ್ದಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಲೊಕಾಕ್ನಿ ದಾಕ್ವುಸಾಟ್ನಿ ಮನುನ್ ತೆನಿ ಸಗ್ಳೆ ಕರುನ್ ದಾಕ್ವುತ್ಯಾತ್. ತೆಂಚ್ಯಾ ಕಪಾಳಾ ವೈನಿ ಅನಿ ರಟ್ಟ್ಯಾಕ್ನಿ ಭಾಂದಲ್ಲ್ಯಾ ಪವಿತ್ರ್ ಪುಸ್ತಕಾತ್ಲ್ಯಾ ಗೊಸ್ಟಿಯಾ ಲಿವಲ್ಲ್ಯಾ ಪಟ್‍ಯಾ ಬಗಾ, ತ್ಯಾ ಕವ್ಡ್ಯಾ ಮೊಟ್ಯಾ-ಮೊಟ್ಯಾ ಹಾತ್ ಮನುನ್ ಉಲ್ಲೆ ತರಕ್ ದಿವ್ನ್ ಬಗಾ! ತೆಂಚ್ಯಾ ಝಗ್ಯಾಕ್ನಿ ಹೊತ್ತೆ ಘೊಂಡೆ ಬಗಾ ಕವ್ಡೆ ಲಾಂಬ್-ಲಾಂಬ್ ಹಾತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:5
20 ತಿಳಿವುಗಳ ಹೋಲಿಕೆ  

ದೇವರಿಂದ ದೊರಕುವ ಮನ್ನಣೆಗಿಂತ ಮಾನವರಿಂದ ಸಿಗುವ ಮನ್ನಣೆಯೇ ಅವರಿಗೆ ಪ್ರಿಯವಾಗಿತ್ತು.


ಸ್ವಾರ್ಥಸಾಧನೆಗಾಗಲಿ, ಡಂಭಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ.


ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.


ಅದಕ್ಕೆ ಯೇಸು, “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರಾದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,” ಎಂದರು.


ಜ್ಞಾಪಕಾರ್ಥವಾಗಿ ಅವುಗಳನ್ನು ನಿನ್ನ ಕೈಗೆ ಕಟ್ಟಿಕೊ; ಜ್ಞಾಪಕ ಪಟ್ಟಿಯಂತೆ ಹಣೆಗೆ ತೊಟ್ಟುಕೊ.


ವಿಧವೆಯರ ಮನೆಮಾರುಗಳನ್ನು ದೋಚಿಕೊಳ್ಳುವ ಈ ಜನ ನಟನೆಗಾಗಿ ಜಪತಪಗಳನ್ನು ದೀರ್ಘವಾಗಿ ಮಾಡುತ್ತಾರೆ. ಇವರನ್ನು ದೇವರು ಬಹಳ ಕಠಿಣವಾದ ದಂಡನೆಗೆ ಗುರಿಪಡಿಸುವರು,” ಎಂದರು.


“ನೀವು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಬೇಕು.


ಇದಕ್ಕೆ ಈ ಆಚರಣೆಯು ನಮ್ಮ ಕೈಗೆ ಕಟ್ಟಿದ ಕಂಕಣದಂತೆ, ಹಣೆಗೆ ಕಟ್ಟಿದ ಜ್ಞಾಪಕ ಪಟ್ಟಿಯಂತೆ ಇರುತ್ತದೆ.


ಕೆಲವರೇನೋ ಅಸೂಯೆಯಿಂದಲೂ ವೈಮನಸ್ಸಿನಿಂದಲೂ ಕ್ರಿಸ್ತಯೇಸುವನ್ನು ಸಾರುತ್ತಿರುವುದು ನಿಜ; ಆದರೆ ಮಿಕ್ಕವರು ಸದುದ್ದೇಶದಿಂದ ಸಾರುತ್ತಿದ್ದಾರೆ;


ಸ್ವಂತ ಕಲ್ಪನೆಯಿಂದ ಮಾತನಾಡುವವನು ತನ್ನ ಸ್ವಪ್ರತಿಷ್ಠೆಯನ್ನು ಬಯಸುತ್ತಾನೆ. ತನ್ನನ್ನು ಕಳುಹಿಸಿದಾತನ ಪ್ರತಿಷ್ಠೆಯನ್ನು ಬಯಸುವವನು ಪ್ರಾಮಾಣಿಕನು. ಕಪಟವೆಂಬುದು ಅವನಲ್ಲಿ ಇರದು.


ಹೋಗುತ್ತಿದ್ದಾಗ, ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ಬಹಳವಾಗಿ ನರಳುತ್ತಿದ್ದ ಒಬ್ಬ ಮಹಿಳೆ ಹಿಂಬದಿಯಿಂದ ಬಂದು ಯೇಸುಸ್ವಾಮಿಯ ಉಡುಪಿನ ಅಂಚನ್ನು ಮುಟ್ಟಿದಳು.


ಪ್ರೀತಿ ಸತ್ಯತೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಪಟ್ಟಿಯಾಗಿರಲಿ, ಹೃದಯದಹಲಗೆಯಲ್ಲಿ ಲಿಖಿತವಾಗಿರಲಿ.


ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.


“ನನ್ನ ಜೊತೆಯಲ್ಲಿ ಬಂದು ಸರ್ವೇಶ್ವರನಲ್ಲಿ ನನಗಿರುವ ಶ್ರದ್ಧೆಯನ್ನು ನೋಡು,” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.


“ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲೂ ಮನಸ್ಸಿನಲ್ಲೂ ಇಟ್ಟುಕೊಳ್ಳಬೇಕು; ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು; ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.


ಏಳನೆಯ ದಿನದಲ್ಲಿ ಯಾಜಕನು ನೋಡುವಾಗ ಆ ಇಸುಬು ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಕಡೆ ಹಳದಿಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆಹೋದರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು