Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:14 - ಕನ್ನಡ ಸತ್ಯವೇದವು C.L. Bible (BSI)

14 ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸರ್ವಜನಾಂಗಗಳಿಗೂ ಸಾಕ್ಷಿಯಾಗಿ ಜಗತ್ತಿನಲ್ಲೆಲ್ಲಾ ಪ್ರಬೋಧಿಸಲಾಗುವುದು. ಅಂತ್ಯವು ಬರುವುದು ಅನಂತರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ ಪರಲೋಕರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲಾಗುವದು; ಆಗ ಅಂತ್ಯವು ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರ ರಾಜ್ಯದ ಶುಭವಾರ್ತೆಯನ್ನು ಲೋಕದಲ್ಲೆಲ್ಲಾ ಪ್ರತಿ ಜನಾಂಗಕ್ಕೂ ಸಾರಲಾಗುವುದು. ಆಗ ಅಂತ್ಯವು ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪರಲೋಕ ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಸರ್ವಜನಾಂಗಗಳಿಗೆ ಸಾಕ್ಷಿಯಾಗಿ ಸಾರಲಾಗುವದು, ತರುವಾಯ ಅಂತ್ಯ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅನಿ ಹಿ ದೆವಾಚ್ಯಾ ರಾಜಾಚಿ ಬರಿ ಖಬರ್ ಜಗಾತ್ ಸಗ್ಳ್ಯಾ ಬಾಶಾಂಚ್ಯಾ ಲೊಕಾಕ್ನಿ ಎಕ್ ಸಾಕ್ಷಿ ಸರ್ಕೆ ಸಾಂಗುನ್ ಹೊತಾ, ತನ್ನಾ ಅಂತ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:14
29 ತಿಳಿವುಗಳ ಹೋಲಿಕೆ  

ಮತ್ತೊಬ್ಬ ದೇವದೂತನು ಆಕಾಶ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆ. ಸಕಲ ದೇಶ, ಭಾಷೆ, ಕುಲ, ಗೋತ್ರದ ಜನರಿಗೂ ಸಾರಬೇಕಾದ ಅಮರ ಸಂದೇಶ ಆತನಲ್ಲಿತ್ತು.


ಈಗ ನನ್ನದೊಂದು ಪ್ರಶ್ನೆ: “ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೆ?” ನಿಶ್ಚಯವಾಗಿ ಇತ್ತು. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು. ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು.”


ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆಮಾಡಿರಿ.


ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾತರದ ರೋಗರುಜಿನಗಳನ್ನು ಗುಣಪಡಿಸಿದರು.


ದೇವಾನುಗ್ರಹದ ಸತ್ಯಾರ್ಥವನ್ನು ನೀವು ತಿಳಿದ ದಿನದಿಂದಲೂ ನಿಮ್ಮಲ್ಲಿ ಶುಭಸಂದೇಶವು ಹೇಗೆ ಫಲಭರಿತವಾಗುತ್ತಿದೆಯೋ ಹಾಗೆ ಈ ಶುಭಸಂದೇಶವು ಜಗತ್ತಿನ ಎಲ್ಲೆಡೆಯೂ ಹಬ್ಬಿಹರಡುತ್ತಲಿದೆ.


ಇದೂ ಅಲ್ಲದೆ, ನೀವು ರಣಕಹಳೆಗಳನ್ನೂ ಸಮರಗಳ ಸುದ್ದಿಯನ್ನೂ ಕೇಳುವಿರಿ. ಆಗ ಕಳವಳಪಡದಂತೆ ಎಚ್ಚರಿಕೆಯಿಂದಿರಿ. ಇವೆಲ್ಲವು ಸಂಭವಿಸಲೇಬೇಕು. ಆದರೆ ಇದಿನ್ನೂ ಕಾಲಾಂತ್ಯವಲ್ಲ.


ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.


ಅವರನ್ನು ಅಲ್ಲಿ ಕಾಣದಿರಲು ಯಾಸೋನನನ್ನೂ ಕೆಲವು ಭಕ್ತವಿಶ್ವಾಸಿಗಳನ್ನೂ ನಗರಾಧಿಕಾರಿಗಳ ಮುಂದೆ ಎಳೆದುತಂದು, “ಎಲ್ಲೆಲ್ಲೂ ಅಲ್ಲೋಲ ಕಲ್ಲೋಲ ಎಬ್ಬಿಸಿದ ಆ ವ್ಯಕ್ತಿಗಳು ಈಗ ನಮ್ಮ ನಗರಕ್ಕೂ ಬಂದಿದ್ದಾರೆ.


“ಇಗೋ, ದಂಡನೆಯ ದಿನ ಬಂದೆಬಿಟ್ಟಿತು; ನಿನಗೆ ದುರ್ಗತಿ ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆ ಚಿಗುರಿದೆ;


ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ಇಗೋ, ಇಷ್ಟು ದಿನ ದೇವರ ಸಾಮ್ರಾಜ್ಯವನ್ನು ಪ್ರಕಟಿಸುತ್ತಾ ನಿಮ್ಮ ಮಧ್ಯೆ ಸಂಚರಿಸಿದ ನನ್ನ ಮುಖವನ್ನು ಇನ್ನು ಮುಂದೆ ನೀವು ಯಾರೂ ಕಾಣಲಾರಿರಿ ಎಂದು ನಾನು ಬಲ್ಲೆ.


ಬಳಿಕ ಯೇಸುಸ್ವಾಮಿ ಓಲಿವ್ ಗುಡ್ಡದ ಮೇಲೆ ಕುಳಿತರು. ಶಿಷ್ಯರು ಅವರ ಬಳಿಗೆ ಬಂದು, “ಇದೆಲ್ಲಾ ಸಂಭವಿಸುವುದು ಯಾವಾಗ? ನಿಮ್ಮ ಪುನರಾಗಮನದ ಹಾಗೂ ಕಾಲಾಂತ್ಯದ ಪೂರ್ವಸೂಚನೆ ಏನು? ನಮಗೆ ತಿಳಿಸಿ,” ಎಂದು ಪ್ರತ್ಯೇಕವಾಗಿ ಕೇಳಿಕೊಂಡರು.


ಇವು ಪವಾಡ ಕಾರ್ಯಗಳನ್ನು ಎಸಗುವ ದೆವ್ವಾತ್ಮಗಳು. ಸರ್ವಶಕ್ತ ದೇವರ ಮಹಾದಿನದಲ್ಲಿ ನಡೆಯುವ ಯುದ್ಧಕ್ಕಾಗಿ ಭೂಲೋಕದ ರಾಜರುಗಳನ್ನೆಲ್ಲಾ ಒಟ್ಟುಗೂಡಿಸಲು ಅವು ಹೊರಟವು.


ಬಳಿಕ ಪಿಶಾಚಿ ಯೇಸುವನ್ನು ಎತ್ತರಕ್ಕೆ ಕರೆದೊಯ್ದು ಪ್ರಪಂಚದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ತೋರಿಸಿ,


ಅವರಲ್ಲಿ ಅಗಬ ಎಂಬವನು ಒಬ್ಬನು. ಇವನು ಪವಿತ್ರಾತ್ಮ ಪ್ರೇರಿತನಾಗಿ ಜಗತ್ತಿನಲ್ಲೆಲ್ಲಾ ಭೀಕರ ಕ್ಷಾಮ ಬರಲಿದೆಯೆಂದು ಮುಂತಿಳಿಸಿದನು. (ಇದು ಬಂದೊದಗಿದುದು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ)


“ಇನ್ನೂ ನಾನು ನಿಮಗೆ ಹೇಳುವುದು ಏನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದಾದರೊಂದು ವಿಷಯವಾಗಿ ಇಹಲೋಕದಲ್ಲಿ ಒಮ್ಮನಸ್ಸುಳ್ಳವರಾಗಿದ್ದರೆ, ಅದು ಸ್ವರ್ಗದಲ್ಲಿರುವ ನನ್ನ ತಂದೆಯಿಂದ ಅವರಿಗೆ ಕೈಗೂಡುತ್ತದೆ.


ಆ ಕಾಲದಲ್ಲಿ ಚಕ್ರವರ್ತಿ ಔಗುಸ್ತನು ತನ್ನ ಸಾಮ್ರಾಜ್ಯದಲ್ಲೆಲ್ಲಾ ಜನಗಣತಿಯಾಗಬೇಕೆಂದು ಆಜ್ಞೆ ಹೊರಡಿಸಿದನು.


ಈ ಮೊದಲು ಎಲ್ಲಾ ಜನಾಂಗಗಳಿಗೆ ಶುಭಸಂದೇಶವನ್ನು ಪ್ರಕಟಿಸಬೇಕಾಗಿದೆ.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಇದರಿಂದಾಗಿ ನಮ್ಮ ಕಸಬಿಗೇ ಕೆಟ್ಟ ಹೆಸರು ಬರುವ ಅಪಾಯವಿದೆ. ಅಷ್ಟೇ ಏಕೆ, ಅರ್ತೆಮೀ ಮಹಾದೇವಿಯ ಗುಡಿ ಹೇಳಹೆಸರಿಲ್ಲದಂತಾಗುವ ಸಂಭವವಿದೆ. ಇಡೀ ಏಷ್ಯದಲ್ಲೂ ಜಗತ್ತಿನ ಎಲ್ಲೆಲ್ಲೂ ಪೂಜಿಸಲಾಗುವ ಆ ದೇವತೆಯ ವೈಭವ ಅಳಿದುಹೋಗುವ ಅಪಾಯವಿದೆ,” ಎಂದನು.


ಇದಲ್ಲದೆ ದೇವರು ತಮ್ಮ ಚೊಚ್ಚಲ ಮಗನನ್ನು ಭೂಲೋಕಕ್ಕೆ ಕಳುಹಿಸುವಾಗ” “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ,” ಎಂದಿದ್ದಾರೆ.


ನಾವು ಪ್ರಸ್ತಾಪಿಸುತ್ತಿರುವ ನೂತನ ಸಾಮ್ರಾಜ್ಯವನ್ನು ದೇವರು ತಮ್ಮ ದೂತರಿಗೆ ಅಧೀನಪಡಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು