Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:22 - ಕನ್ನಡ ಸತ್ಯವೇದವು C.L. Bible (BSI)

22 ಆ ದಿನಗಳ ಅವಧಿಯನ್ನು ಕಡಿಮೆಮಾಡದೆ ಇದ್ದಲ್ಲಿ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ದೇವರು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳನ್ನು ಕಡಿಮೆಮಾಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 [ಕರ್ತನು] ಆ ದಿನಗಳನ್ನು ಕಡಿಮೆಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯದು; ಆದರೆ ತಾನು ಆದುಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ದೇವರು ಭಯಂಕರವಾದ ಆ ಸಮಯವನ್ನು ಕಡಿಮೆಗೊಳಿಸಲು ತೀರ್ಮಾನಿಸಿದ್ದಾನೆ. ಇಲ್ಲವಾದರೆ, ಜೀವದಿಂದ ಉಳಿಯಲು ಯಾರಿಗೂ ಸಾಧ್ಯವಿಲ್ಲ. ತಾನು ಆರಿಸಿಕೊಂಡ ಜನರ ನಿಮಿತ್ತ ದೇವರು ಆ ಸಮಯವನ್ನು ಕಡಿಮೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಆ ದಿನಗಳನ್ನು ಕಡಿಮೆ ಮಾಡದಿದ್ದರೆ, ಒಬ್ಬನೂ ಉಳಿಯುವಂತಿಲ್ಲ. ಆದರೆ ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅನಿ ಹೆ ಸಂಕಟಾಚೆ ದಿಸ್ ಕಮಿ ಕರಿನಸ್ಲ್ಯಾರ್ ಎಕ್ ಸೈತ್ ಮಾನುಸ್ ವಾಚುನ್ ಹುರಿನಸಿ ಹೊತ್ತೊ. ಖರೆ ಅಪ್ನಾಚ್ಯಾ ಎಚುನ್ ಕಾಡಲ್ಲ್ಯಾ ಲೊಕಾಂಚ್ಯಾ ಸಾಟ್ನಿ ದೆವ್ ತಿ ದಿಸಾ ಕಮಿ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:22
13 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಆ ದಿನಗಳ ಅವಧಿಯನ್ನು ಕಡಿಮೆಮಾಡದಿದ್ದರೆ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ತಾವು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳ ಅವಧಿಯನ್ನು ಅವರು ಕಡಿಮೆಮಾಡಿದ್ದಾರೆ.


ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ ಸಹಿಸುತ್ತಿದ್ದೇನೆ.


ತುತೂರಿಯ ಘೋಷಣೆಯೊಂದಿಗೆ ಆತನು ತನ್ನ ದೂತರನ್ನು ನಾಲ್ಕು ದಿಕ್ಕುಗಳಿಗೂ ಕಳುಹಿಸುವನು. ಅವರು ಹೋಗಿ ಆತನಿಂದ ಆಯ್ಕೆಯಾದ ಜನರನ್ನು ವಿಶ್ವದ ಅಷ್ಟದಿಕ್ಕುಗಳಿಂದ ಒಟ್ಟುಗೂಡಿಸುವರು.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ಅವರು ಹುಟ್ಟುವುದಕ್ಕೆ ಮುಂಚೆಯೇ, ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡುವುದಕ್ಕೆ ಮೊದಲೇ, “ಹಿರಿಯವನು ಕಿರಿಯವನಿಗೆ ಸೇವೆಮಾಡುವನು,” ಎಂದು ಆಕೆಗೆ ಹೇಳಲಾಗಿತ್ತು. ಇದರಿಂದ ದೇವರು ತಮಗಿಷ್ಟಬಂದವರನ್ನು ಆರಿಸಿಕೊಳ್ಳುತ್ತಾರೆಂಬ ಸಂಕಲ್ಪವು ಸ್ಥಿರಗೊಂಡಿತು. ಈ ಸಂಕಲ್ಪ ಮಾನವನು ಸಾಧಿಸುವ ಸತ್ಕಾರ್ಯಗಳ ಮೇಲೆ ಅಲ್ಲ, ಕರೆನೀಡುವ ದೇವರ ಚಿತ್ತದ ಮೇಲೆ ನೆಲೆಗೊಂಡಿದೆ.


“ಹೀಗೆ, ಆಹ್ವಾನಿತರು ಅನೇಕರಾದರೂ ಆರಿಸಲಾದವರು ಕೆಲವರು ಮಾತ್ರ,” ಎಂದರು ಸ್ವಾಮಿ.


ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ?


ಜೆರುಸಲೇಮಿಗೆ ಎದುರಾಗಿ ಹೋರಾಡಲು ಅನ್ಯರಾಷ್ಟ್ರಗಳನ್ನು ಒಂದುಗೂಡಿಸುವೆನು. ಅವು ಆ ನಗರವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಿ, ಹೆಂಗಸರ ಮೇಲೆ ಅತ್ಯಾಚಾರವೆಸಗುವರು. ಅರ್ಧಕ್ಕೆ ಅರ್ಧ ಜನ ಸೆರೆಹೋಗುವರು. ಮಿಕ್ಕವರು ಅಲ್ಲೇ ಸುರಕ್ಷಿತವಾಗಿರುವರು.


ಹತರಾಗುವರು ನಾಡಿನ ಮೂರರಲ್ಲೆರಡು ಭಾಗದವರು, ಮೂರನೆಯ ಭಾಗದವರು ಉಳಿಯುವರಲ್ಲಿ, ಸರ್ವೇಶ್ವರಸ್ವಾಮಿಯ ನುಡಿಯಿದು.


“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.


ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಪ್ರಾಂತ್ಯಗಳಲ್ಲಿ ಚದರಿಹೋಗಿ ನಿರಾಶ್ರಿತರಂತೆ ಜೀವಿಸುತ್ತಿರುವ ದೇವಜನರಿಗೆ - ಯೇಸುಕ್ರಿಸ್ತರ ಪ್ರೇಷಿತನಾದ ಪೇತ್ರನು ಬರೆಯುವ ಪತ್ರ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು