Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:24 - ಕನ್ನಡ ಸತ್ಯವೇದವು C.L. Bible (BSI)

24 ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಸುಳ್ಳುಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಸಹ ಮೋಸಗೊಳಿಸುವದಕ್ಕೋಸ್ಕರ ದೊಡ್ಡ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ದೇವರು ಆರಿಸಿಕೊಂಡಿರುವ ಜನರನ್ನು ಮೋಸಗೊಳಿಸುವುದಕ್ಕಾಗಿ ಮಹತ್ಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಕಶ್ಯಾಕ್ ಮಟ್ಲ್ಯಾರ್, ಝುಟಿ ಮಾನ್ಸಾ ಯೆವ್ನ್ ಅಪ್ನಿಚ್ ಕ್ರಿಸ್ತ್ ನಾಹೊಲ್ಯಾರ್ ಪ್ರವಾದಿ ಮನುನ್ ಸಾಂಗ್ತ್ಯಾತ್ ಅನಿ ಅಪ್ನಾಚ್ಯಾನ್ ಸಾದ್ಯ್ ಹೊಲ್ಯಾರ್ ದೆವಾನ್ ಎಚುನ್ ಕಾಡಲ್ಲ್ಯಾ ಲೊಕಾಕ್ನಿ ಸೈತ್ ಮೊಟಿ ವಿಚಿತ್ರ್ ಕಾಮಾ ಕರುನ್ ದಾಕ್ವುನ್ ಪಸ್ವುಕ್ ಬಗ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:24
31 ತಿಳಿವುಗಳ ಹೋಲಿಕೆ  

ಕಪಟ ಉದ್ಧಾರಕರೂ ವಂಚಕಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಅವರು ಪವಾಡಗಳನ್ನು ಮಾಡಿತೋರಿಸಿ, ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವರು.


ಅನೇಕ ಸುಳ್ಳುಪ್ರವಾದಿಗಳು ತಲೆಯೆತ್ತಿಕೊಂಡು ಎಷ್ಟೋಮಂದಿಯನ್ನು ವಂಚಿಸುವರು.


“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


ಅನೇಕರು ‘ನಾನೇ ಕ್ರಿಸ್ತ, ನಾನೇ ಕ್ರಿಸ್ತ,’ ಎನ್ನುತ್ತಾ ನನ್ನ ಹೆಸರನ್ನೇ ಹೇಳಿಕೊಂಡು ಬರುವರು. ಮಾತ್ರವಲ್ಲ, ಎಷ್ಟೋ ಜನರನ್ನು ತಪ್ಪುದಾರಿಗೆಳೆಯುವರು.


ಆದಕಾರಣ ಪ್ರಿಯರೇ, ಈ ವಿಷಯಗಳನ್ನು ಮುಂಚಿತವಾಗಿಯೇ ತಿಳಿದುಕೊಂಡಿರುವ ನೀವು ಎಚ್ಚರಿಕೆಯಿಂದಿರಿ. ದುರ್ಜನರ ದುರ್ಬೋಧನೆಗೆ ಮರುಳಾಗದಿರಿ. ನಿಮ್ಮ ಸ್ಥಿರವಿಶ್ವಾಸವನ್ನು ಬಿಟ್ಟು ಭ್ರಷ್ಟರಾಗದಿರಿ.


“ನಿಮ್ಮ ಮಧ್ಯೆ ಯಾವ ಪ್ರವಾದಿಯೆ ಆಗಲಿ, ಕನಸುಗಾರನೇ ಆಗಲಿ, ಎದ್ದು ಬಂದು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚನೆಮಾಡಿ


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು.


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ಅವರ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ಕಳೆದುಕೊಳ್ಳದೆ ಅಂತಿಮ ದಿನದಂದು ಅವರೆಲ್ಲರನ್ನೂ ನಾನು ಜೀವಕ್ಕೆ ಎಬ್ಬಿಸಬೇಕು.


ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಅದೊಂದು ಭಾಗ್ಯವೆಂದೇ ತಿಳಿದಿರಿ. ಆ ಭಾವನೆ ಈಗೆಲ್ಲಿದೆ? ಆಗ, ಬೇಕಾಗಿದ್ದಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಡುತ್ತಿದ್ದಿರಿ ಎಂದು ನಾನು ಹೇಳಬಲ್ಲೆ!


ಸಾಧ್ಯವಾದ ಮಟ್ಟಿಗೆ ಸರ್ವರೊಂದಿಗೂ ಸಮಾಧಾನದಿಂದ ಬಾಳಿರಿ.


ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂಬ ಆತುರ ಪೌಲನಿಗೆ ಇದ್ದುದರಿಂದ, ಏಷ್ಯದಲ್ಲಿ ಕಾಲ ವಿಳಂಬಮಾಡಲು ಮನಸ್ಸಿಲ್ಲದೆ, ಎಫೆಸವನ್ನು ದಾಟಿ ಹೋಗಬೇಕೆಂದು ಅವನು ತೀರ್ಮಾನಿಸಿದನು.


“ಹೀಗೆ, ಆಹ್ವಾನಿತರು ಅನೇಕರಾದರೂ ಆರಿಸಲಾದವರು ಕೆಲವರು ಮಾತ್ರ,” ಎಂದರು ಸ್ವಾಮಿ.


ಆ ದಿನಗಳ ಅವಧಿಯನ್ನು ಕಡಿಮೆಮಾಡದೆ ಇದ್ದಲ್ಲಿ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ದೇವರು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳನ್ನು ಕಡಿಮೆಮಾಡಲಾಗುವುದು.


ಎಚ್ಚರಿಕೆ! ನಾನು ನಿಮಗೆ ಮುಂಚಿತವಾಗಿಯೇ ಇದನ್ನು ತಿಳಿಸುತ್ತಾ ಇದ್ದೇನೆ.


ತುತೂರಿಯ ಘೋಷಣೆಯೊಂದಿಗೆ ಆತನು ತನ್ನ ದೂತರನ್ನು ನಾಲ್ಕು ದಿಕ್ಕುಗಳಿಗೂ ಕಳುಹಿಸುವನು. ಅವರು ಹೋಗಿ ಆತನಿಂದ ಆಯ್ಕೆಯಾದ ಜನರನ್ನು ವಿಶ್ವದ ಅಷ್ಟದಿಕ್ಕುಗಳಿಂದ ಒಟ್ಟುಗೂಡಿಸುವರು.


ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ?


ಯೇಸು ಅವನಿಗೆ, “ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಕಂಡ ಹೊರತು ನೀವು ನಂಬುವುದಿಲ್ಲವಲ್ಲಾ,” ಎಂದರು.


ನನ್ನ ಪ್ರಿಯ ಮಕ್ಕಳೇ, ಅಂತಿಮ ಕಾಲ ಸಮೀಪಿಸಿತು. ಕ್ರಿಸ್ತವಿರೋಧಿ ಬರುವನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳು ತಲೆದೋರಿದ್ದಾರೆ. ಇದರಿಂದ ಅಂತಿಮಕಾಲ ಸನ್ನಿಹಿತವಾಯಿತೆಂದು ನಮಗೆ ತಿಳಿದುಬರುತ್ತದೆ.


ಅಸತ್ಯವಾದಿ ಎಂದರೆ ಯಾರು? ಯೇಸುವೇ ಕ್ರಿಸ್ತ ಎಂಬುದನ್ನು ಯಾರು ಅಲ್ಲಗಳೆಯುತ್ತಾನೋ ಅವನೇ ಅಸತ್ಯವಾದಿ; ಅವನೇ ಕ್ರಿಸ್ತವಿರೋಧಿ. ಅವನು ಪಿತನನ್ನು ಮತ್ತು ಪುತ್ರನನ್ನು ತಿರಸ್ಕರಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು