Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:27 - ಕನ್ನಡ ಸತ್ಯವೇದವು C.L. Bible (BSI)

27 ಏಕೆಂದರೆ ಪೂರ್ವದಿಂದ ಮಿನುಗಿ ಪಶ್ಚಿಮದವರೆಗೂ ಹೊಳೆಯುವ ಮಿಂಚಿನಂತೆ ಇರುವುದು ನರಪುತ್ರನ ಆಗಮನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹೇಗೆ ವಿುಂಚು ಮೂಡಣದಲ್ಲಿ ಹುಟ್ಟಿ ಪಡುವಣದವರೆಗೂ ಕಾಣಿಸುತ್ತದೋ ಹಾಗೆಯೇ ಮನುಷ್ಯಕುಮಾರನ ಪ್ರತ್ಯಕ್ಷತೆಯು ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮನುಷ್ಯಕುಮಾರನು ಜನರಿಗೆಲ್ಲ ಕಾಣಿಸುವಂತೆ ಬರುತ್ತಾನೆ. ಮನುಷ್ಯಕುಮಾರನ ಪ್ರತ್ಯಕ್ಷತೆಯು ಆಕಾಶದಲ್ಲಿ ಮಿಂಚು ಹೊಳೆಯುವಂತೆ ಪ್ರಕಾಶಿಸುತ್ತಾ ಲೋಕದ ಎಲ್ಲಾ ಕಡೆಗಳಲ್ಲೂ ಕಾಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ಮಿಂಚು ಪೂರ್ವದಿಂದ ಮಿನುಗಿ ಪಶ್ಚಿಮದವರೆಗೆ ಹೊಳೆಯುವಂತೆಯೇ ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಾನ್ಸಾಚೊ ಲೆಕ್ ಎಗ್ದಮ್ ಎಕ್ ದಿಕ್ಕಾಕ್ನಾ ಅನಿ ಎಕ್ ದಿಕ್ಕಾ ಪತರ್ ಮಿಂಚ್ ಹೊಳ್‍ಹೊಳ್ತಾ ತಸೆ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:27
18 ತಿಳಿವುಗಳ ಹೋಲಿಕೆ  

ಇವರು ತಮ್ಮ ದುರಾಶೆಗಳಿಗೆ ಬಲಿಯಾಗಿ, “ಆತನು ಮರಳಿ ಬರುವನು ಎಂಬ ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ಮೃತರಾದರು; ಅಂದಿನಿಂದ ಸಮಸ್ತವೂ ಲೋಕಾದಿಯಿಂದಲೂ ಇದ್ದ ಹಾಗೆಯೇ ಇದೆಯಲ್ಲಾ,” ಎಂದು ಅಪಹಾಸ್ಯಮಾಡುವರು.


ಹಾಗೆಯೇ, ನೀವೂ ಸಹ ತಾಳ್ಮೆಯಿಂದಿರಿ, ದೃಢಚಿತ್ತರಾಗಿರಿ. ಪ್ರಭುವಿನ ಪುನರಾಗಮನ ಸನ್ನಿಹಿತವಾಗಿದೆ.


“ಆದರೆ ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು? ಆತನ ದರ್ಶನವನ್ನು ಪಡೆದು ಬದುಕಬಲ್ಲವನು ಯಾರು?


ಸ್ವಜನರಿಗೆ ಸರ್ವೇಶ್ವರ ಪ್ರತ್ಯಕ್ಷನಾಗುವನು ಮಿಂಚಿನಂತೆ ಬಿಡುವನು ತನ್ನ ಬಾಣಗಳನು ಮೊಳಗಿಸುವನು ಕಾಳಗದ ತುತೂರಿಯನು ದಕ್ಷಿಣದ ಬಿರುಗಾಳಿಯೊಂದಿಗೆ ಮುನ್ನುಗ್ಗುವನು.


ಜಲಪ್ರಳಯ ಬಂದು ಅವರನ್ನು ಕೊಚ್ಚಿಕೊಂಡು ಹೋಗುವ ತನಕ ಅದರ ಅರಿವೇ ಅವರಿಗಿರಲಿಲ್ಲ. ನರಪುತ್ರನು ಆಗಮಿಸುವಾಗಲೂ ಹಾಗೆಯೇ ನಡೆಯುವುದು.


ನೋವನ ಕಾಲದಲ್ಲಿ ಆದಂತೆಯೇ ನರಪುತ್ರನು ಬರುವಾಗಲೂ ಆಗುವುದು.


ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


“ಇಗೋ, ಸರ್ವೇಶ್ವರಸ್ವಾಮಿಯ ಆಗಮನದ ಭಯಂಕರ ಮಹಾದಿನ ಬರುವುದಕ್ಕೆ ಮುಂಚೆ ಪ್ರವಾದಿ ಎಲೀಯನನ್ನು ನಿಮ್ಮಲ್ಲಿಗೆ ಕಳುಹಿಸುವೆನು.


ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.


ಅದನ್ನು ಗಗನಮಂಡಲದೊಳು ಹರಡುತ್ತಾನೆ ಜಗದ ಅಂಚಿನ ತನಕ ಮಿಂಚು ಹೊಳೆಯುವಂತೆ ಮಾಡುತ್ತಾನೆ.


ಬಳಿಕ ಯೇಸುಸ್ವಾಮಿ ಓಲಿವ್ ಗುಡ್ಡದ ಮೇಲೆ ಕುಳಿತರು. ಶಿಷ್ಯರು ಅವರ ಬಳಿಗೆ ಬಂದು, “ಇದೆಲ್ಲಾ ಸಂಭವಿಸುವುದು ಯಾವಾಗ? ನಿಮ್ಮ ಪುನರಾಗಮನದ ಹಾಗೂ ಕಾಲಾಂತ್ಯದ ಪೂರ್ವಸೂಚನೆ ಏನು? ನಮಗೆ ತಿಳಿಸಿ,” ಎಂದು ಪ್ರತ್ಯೇಕವಾಗಿ ಕೇಳಿಕೊಂಡರು.


ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.


ನಿನ್ನ ಅಪ್ಪಣೆಯಂತೆ ಸಿಡಿಲುಗಳು ಹೋಗಿಬಂದು ‘ಇದೋ ಬಂದಿದ್ದೇವೆ’ ಎಂದು ನಿನಗೆ ಹೇಳುತ್ತವೆಯೊ?


ಆ ಜೀವಿಗಳು ಮಿಂಚಿನಂತೆ ಮುಂದಕ್ಕೂ ಹಿಂದಕ್ಕೂ ಸರಿದಾಡುತ್ತಿದ್ದವು.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಆದ್ದರಿಂದ ಯಾರಾದರು, ‘ಅಗೋ ಕ್ರಿಸ್ತ ಅಡವಿಯಲ್ಲಿದ್ದಾನೆ,’ ಎಂದರೆ ಅಲ್ಲಿಗೆ ಹೋಗಬೇಡಿ. ‘ಇಗೋ, ಇಲ್ಲೇ ಒಳಗೆ ಅವಿತುಕೊಂಡಿದ್ದಾನೆ,’ ಎಂದರೂ ಅದನ್ನು ನಂಬಬೇಡಿ.


ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು