ಮತ್ತಾಯ 24:30 - ಕನ್ನಡ ಸತ್ಯವೇದವು C.L. Bible (BSI)30 ಆಗ ನರಪುತ್ರನ ಚಿಹ್ನೆ ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಪೃಥ್ವಿಯ ಪ್ರಜೆಗಳೆಲ್ಲಾ ಅತ್ತು ಪ್ರಲಾಪಿಸುವರು. ನರಪುತ್ರನು ಶಕ್ತಿಸಾಮರ್ಥ್ಯದಿಂದಲೂ ಮಹಾಮಹಿಮೆಯಿಂದಲೂ ಮೇಘಾರೂಢನಾಗಿ ಆಗಮಿಸುವುದನ್ನು ಅವರು ಕಾಣುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವದು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವದನ್ನು ಕಾಣುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “ಆಗ ಮನುಷ್ಯಕುಮಾರನ ಆಗಮನದ ಸೂಚನೆಯು ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಲೋಕದ ಜನರೆಲ್ಲಾ ಗೋಳಾಡುವರು. ಆಕಾಶದಲ್ಲಿ ಮೇಘಗಳ ಮೇಲೆ ಆತನು ಬರುವುದನ್ನು ಜನರೆಲ್ಲರೂ ನೋಡುವರು. ಆತನು ಶಕ್ತಿಸಾಮರ್ಥ್ಯದಿಂದಲೂ ಮಹಿಮೆಯಿಂದಲೂ ಬರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ಆಗ ಮನುಷ್ಯಪುತ್ರನಾದ ನನ್ನ ಸೂಚನೆಯು ಆಕಾಶದಲ್ಲಿ ಕಾಣುವುದು. ಭೂಮಿಯ ಎಲ್ಲಾ ಜನಾಂಗದವರು ಗೋಳಾಡುವರು. ಮನುಷ್ಯಪುತ್ರನಾದ ನಾನು ಆಕಾಶದ ಮೇಘಗಳಲ್ಲಿ, ಶಕ್ತಿಯಿಂದಲೂ ಮಹಾಪ್ರಭಾವದಿಂದಲೂ ಬರುವುದನ್ನು ಅವರು ಕಾಣುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ತನ್ನಾ ಮಳ್ಬಾ ವರ್‍ತಿ ಮಾನ್ಸಾಚ್ಯಾ ಲೆಕಾಚಿ ಎಕ್ ವಳಕ್ ದಿಸುಕ್ ಲಾಗ್ತಾ, ತನ್ನಾ ಜಗಾತ್ಲಿ ಸಗ್ಳಿ ಲೊಕಾ ಭಿಂಯಾನ್ ರಡ್ತ್ಯಾತ್. ಅನಿ ಮಾನ್ಸಾಚೊ ಲೆಕ್ ಮೊಟ್ಯಾ ಪದ್ವಿನ್ ಅನಿ ಮಹಿಮೆನ್ ಮಳ್ಬಾ ವೈಲ್ಯಾ ಮೊಡಾಂಚ್ಯಾ ವರ್‍ತಿ ಯೆತಲೊ ಬಗ್ತ್ಯಾತ್. ಅಧ್ಯಾಯವನ್ನು ನೋಡಿ |