Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:34 - ಕನ್ನಡ ಸತ್ಯವೇದವು C.L. Bible (BSI)

34 ಇದೆಲ್ಲವೂ ಸಂಭವಿಸುವವರೆಗೆ ಈ ಪೀಳಿಗೆ ಗತಿಸಿಹೋಗದೆಂದು ನಿಮಗೆ ಒತ್ತಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಇಂದಿನ ಜನರು ಇನ್ನೂ ಜೀವಿಸಿರುವಾಗಲೇ ಈ ಎಲ್ಲಾ ಸಂಗತಿಗಳು ಸಂಭವಿಸುತ್ತವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಇವೆಲ್ಲವೂ ನೆರವೇರುವವರೆಗೆ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಮಿಯಾ ತುಮ್ಕಾ ಖರೆಚ್ ಸಾಂಗ್ತಾ,"ಹಿ ಸಗ್ಳಿ ಘಡಿತಾ ಹೊಯ್ ಪತರ್ ಹಿ ಅತ್ತಾಚಿ ಲೊಕಾ ಮರಿನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:34
7 ತಿಳಿವುಗಳ ಹೋಲಿಕೆ  

ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಹೌದು, ಇದೆಲ್ಲವೂ ಈ ಪೀಳಿಗೆಯ ಮೇಲೆ ಬರುವುದೆಂದು ನಿಮಗೆ ಒತ್ತಿ ಹೇಳುತ್ತೇನೆ.


ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲ್ಗೊಂಡು, ಬಲಿಪೀಠಕ್ಕೂ ದೇವಾಲಯಕ್ಕೂ ನಡುವೆ ಹತನಾದ ಜಕರೀಯನ ರಕ್ತದವರೆಗೂ ಈ ಪೀಳಿಗೆಯವರು ಲೆಕ್ಕಕೊಡಬೇಕಾಗುವುದು.’ ಹೌದು, ಈ ಪೀಳಿಗೆಯವರೇ ಲೆಕ್ಕಕೊಡಬೇಕಾಗುವುದೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.


ಪುನಃ ಹೊರಟುಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಡನೆ ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳಹೊಕ್ಕು ನೆಲಸುತ್ತವೆ. ಆಗ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗಿಳಿಯುತ್ತದೆ. ಈ ದುಷ್ಟ ಪೀಳಿಗೆಗೆ ಸಂಭವಿಸುವ ಗತಿಯೂ ಅದೇ,” ಎಂದರು.


ಒಂದು ಊರಿನಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ, ಮತ್ತೊಂದು ಊರಿನಲ್ಲಿ ಆಶ್ರಯ ಪಡೆಯಿರಿ. ನರಪುತ್ರನು ಬರುವಷ್ಟರಲ್ಲಿ ನೀವು ಇಸ್ರಯೇಲ್ ಜನರ ಊರುಗಳನ್ನೆಲ್ಲಾ ಸುತ್ತಿ ಮುಗಿಸಿರಲಾರಿರಿ; ಇದು ನಿಶ್ಚಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು