Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:43 - ಕನ್ನಡ ಸತ್ಯವೇದವು C.L. Bible (BSI)

43 ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಹಾಕಲು ಬಿಡನು, ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಕಳ್ಳನು ಬರುವ ಜಾವ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕಗೊಡಿಸುತ್ತಿರಲಿಲ್ಲವೆಂದು ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಇದನ್ನು ಜ್ಞಾಪಿಸಿಕೊಳ್ಳಿ. ಕಳ್ಳನು ಯಾವಾಗ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ಕಳ್ಳನನ್ನು ಮನೆಯೊಳಗೆ ಬರಗೊಡಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕದಂತೆ ಕಾಯುತ್ತಿದ್ದನೆಂದು ನೀವು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಯಾದ್ ಥವ್ನ್ ಘೆವಾ, ಹ್ಯಾಚ್ ಎಳಾರ್ ಚೊರ್ ಯೆತಾ ಮನುನ್ ಘರಾಚ್ಯಾ ಮಾಲ್ಕಾಕ್ ಗೊತ್ತ್ ರ್‍ಹಾಲ್ಯಾರ್ ತೊ ಜಾಗೊ ರ್‍ಹಾವ್ನ್ ರಾಕುನ್ಗೆತ್ ರ್‍ಹಾತಾ ಅನಿ ಕನ್ನಾಬಿ ಅಪ್ನಾಚೆ ಘರ್ ಫೊಡುನ್ ಚೊರುನ್ ಘೆವ್ನ್ ಜಾವ್ಕ್ ದಿ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:43
18 ತಿಳಿವುಗಳ ಹೋಲಿಕೆ  

ಕಳ್ಳನು ಬರುವ ಗಳಿಗೆಯು ಮನೆಯ ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ.


ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು.


ಅದನ್ನು ತೆಗೆದುಕೊಂಡಾಗ ಅವರು ದಣಿಯ ವಿರುದ್ಧ ಗೊಣಗಲಾರಂಭಿಸಿದರು.


ಯಜಮಾನ ಮನೆಯಲ್ಲಿ ಇಲ್ಲ; ಕೈಗೊಂಡು ಇದ್ದಾನೆ ದೂರ ಪ್ರಯಾಣ.


ಆಗ ರಾತ್ರಿಯ ಕಡೇ ಜಾವದ ಸಮಯ. ಯೇಸು ಸರೋವರದ ಮೇಲೆ ನಡೆದುಕೊಂಡೇ ಶಿಷ್ಯರ ಬಳಿಗೆ ಬಂದರು.


ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ.


ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು.


ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು.


ಎದುರುಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಹಾಕಿ ದಣಿದುಹೋಗಿದ್ದರು. ಇದನ್ನು ಕಂಡ ಯೇಸು ಸರೋವರದ ನೀರಿನ ಮೇಲೆ ನಡೆದುಕೊಂಡು ಅವರ ಕಡೆಗೆ ಬಂದು, ಅವರನ್ನು ದಾಟಿ ಮುಂದೆ ಹೋಗುವುದರಲ್ಲಿದ್ದರು.


ಯಜಮಾನನು ಸಂಜೆಯಲ್ಲೋ ಮಧ್ಯರಾತ್ರಿಯಲ್ಲೋ ಕೋಳಿ ಕೂಗುವಾಗಲೋ ಬೆಳಕು ಹರಿಯುವಾಗಲೋ, ಯಾವಾಗ ಬರುವನೆಂಬುದು ನಿಮಗೆ ತಿಳಿಯದು.


“ಯಜಮಾನನು ಬರುವಾಗ ನಡುರಾತ್ರಿ ಆಗಿರಲಿ, ಮುಂಜಾವವಾಗಿರಲಿ, ಎಚ್ಚರದಿಂದ ಇರುವ ಸೇವಕರನ್ನು ಆತನು ಕಂಡರೆ ಅವರು ಭಾಗ್ಯವಂತರು.


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ನಿನಗೆ ಕೊಡಲಾದ ಬೋಧನೆಯನ್ನೂ ಅದನ್ನು ನೀನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೋ. ಅದರಂತೆ ನಡೆದು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಎಚ್ಚೆತ್ತುಕೊಳ್ಳದಿದ್ದರೆ ನಾನು ಕಳ್ಳನು ಬರುವಂತೆ ಬರುತ್ತೇನೆ. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಧಾಳಿಮಾಡುತ್ತೇನೆಂದೇ ನಿನಗೆ ತಿಳಿಯದು.


“ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ಬೆತ್ತಲೆಯಾಗಿ ಎಲ್ಲರ ಮುಂದೆ ಕಾಣಿಸಿಕೊಂಡು ನಾಚಿಕೆಗೀಡಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಧರಿಸಿಕೊಂಡಿರುವವನು ಭಾಗ್ಯವಂತನು!”


ಕಳ್ಳರು ಕತ್ತಲಲ್ಲಿ ಮನೆಗೆ ನುಗ್ಗುತ್ತಾರೆ ಕನ್ನ ಕೊರೆದು ಬೆಳಕು ಕಾಣದೆ ಇರುತ್ತಾರೆ ಹಗಲಲ್ಲಿ ಅವಿತುಕೊಂಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು