Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:45 - ಕನ್ನಡ ಸತ್ಯವೇದವು C.L. Bible (BSI)

45 “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿ ಆಳುಗಳಿಗೆ ದವಸಧಾನ್ಯಗಳನ್ನು ಅಳೆದುಕೊಟ್ಟು ತನ್ನ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಕಗೊಂಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡಲಿಕ್ಕೆ ಅವರ ಮೇಲಿಟ್ಟ ನಂಬಿಗಸ್ತನೂ ವಿವೇಕಿಯೂ ಆದಂಥ ಆಳು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 “ವಿವೇಕಿಯೂ ನಂಬಿಗಸ್ತನೂ ಆದ ಸೇವಕನು ಯಾರು? ಇತರ ಸೇವಕರಿಗೆ ಆಹಾರವನ್ನು ತಕ್ಕ ಸಮಯದಲ್ಲಿ ಕೊಡುವುದಕ್ಕಾಗಿ ಯಜಮಾನನು ಯಾವ ಸೇವಕನ ಮೇಲೆ ಭರವಸೆಯಿಡುತ್ತಾನೋ ಅವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 “ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಸೇವಕನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ತಸೆ ಜಾಲ್ಯಾರ್ ಮಾಲ್ಕಾನ್ ಅಪ್ನಾಚ್ಯಾ ಹುರಲ್ಲ್ಯಾ ಆಳಾಂಚಿ ಜವಾಬ್ದಾರಿ ಘೆವ್ಕ್ ಅನಿ ತೆಂಕಾ ಎಳಾ-ಎಳಾರ್ ತೆಂಚೆ ಜೆವಾನ್ ವಾಟುನ್ ದಿವ್ಕ್ ಮನುನ್ ನೆಮಸಲ್ಲೊ ವಿಶ್ವಾಸಾಚೊ, ಅನಿ ಶಾನೊ ಸೆವಕ್ ಕೊನ್ ತೊ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:45
28 ತಿಳಿವುಗಳ ಹೋಲಿಕೆ  

ಅದಕ್ಕೆ ಆ ಧಣಿ, “ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ, ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,’ ಎಂದ.


ಧಣಿ ಅವನಿಗೂ, ‘ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೂ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ನೀನೂ ಭಾಗಿಯಾಗು,’ ಎಂದ.


ಮೋಶೆ ದೇವರ ಮನೆಗೆಲ್ಲಾ ಪ್ರಾಮಾಣಿಕ ದಾಸನಾಗಿದ್ದನು; ಮುಂದೆ ಪ್ರಕಟವಾಗಬೇಕಿದ್ದ ಸಂಗತಿಗಳಿಗೆ ಸಾಕ್ಷಿಯಾಗಿದ್ದನು.


ಹಲವರ ಮುಂದೆ ನಾನು ಮಾಡಿದ ಉಪದೇಶವನ್ನು ನೀನೇ ಕೇಳಿದ್ದೀ. ಅದೇ ಉಪದೇಶವನ್ನು ಇತರರಿಗೂ ಬೋಧಿಸಲು ಪ್ರಾಮಾಣಿಕ ವ್ಯಕ್ತಿಗಳನ್ನು ನೇಮಿಸು.


ಶುಭಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿಸಾಮರ್ಥ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ಅದಕ್ಕೆ ಅವನು, ‘ಭಲಾ, ನೀನು ಒಳ್ಳೆಯ ಸೇವಕ, ಸ್ವಲ್ಪದರಲ್ಲಿ ನೀನು ಪ್ರಾಮಾಣಿಕನಾಗಿದ್ದೆ. ಆದ್ದರಿಂದ ಹತ್ತು ಪಟ್ಟಣಗಳಿಗೆ ಅಧಿಕಾರಿಯಾಗಿರು,’ ಎಂದ.


ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಅವರಲ್ಲಿ ಐವರು ವಿವೇಕಿಗಳು, ಐವರು ಅವಿವೇಕಿಗಳು.


“ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ.


“ನರಪುತ್ರನೇ, ಇಸ್ರಯೇಲೆಂಬ ಮಂದೆಯ ಕುರುಬರಿಗೆ ವಿರುದ್ಧ ಈ ದೈವೋಕ್ತಿಯನ್ನು ಪ್ರವಚನ ರೂಪವಾಗಿ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಯ್ಯೋ ಸ್ವಂತ ಹೊಟ್ಟೆ ಹೊರೆದುಕೊಳ್ಳುವ ಇಸ್ರಯೇಲಿನ ಕುರುಬರಿಗೆ ಧಿಕ್ಕಾರ! ಕುರಿಗಳ ಹೊಟ್ಟೆ ಗಮನಿಸುವುದು ಕುರುಬರ ಧರ್ಮವಲ್ಲವೆ?


ಜಾಣನಾದ ಸೇವಕನ ಮೇಲೆ ರಾಜನ ಕೃಪೆಯಿರುತ್ತದೆ; ಲಜ್ಜಾಸ್ಪದ ಸೇವಕನ ಮೇಲೆ ಅವನ ಕೋಪ ಎರಗುತ್ತದೆ.


ಪ್ರಾಮಾಣಿಕನಿಗೆ ಪೂರ್ಣಾಶೀರ್ವಾದ; ಹಣವಂತನಾಗಲು ಹಾತೊರೆಯುವವನು ಶಿಕ್ಷಾರ್ಹ.


ಯಜಮಾನನು ಮನೆಗೆ ಹಿಂದಿರುಗಿಬಂದಾಗ ಆ ಮೇಸ್ತ್ರಿ ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು.


ದೇವಮಂದಿರದ ನಿರ್ಮಾಣದಲ್ಲಿ ಮಗ್ನರಾಗಿದ್ದ ಆ ಶಿಲ್ಪಿಗಳೆಲ್ಲರು ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು,


ಅದಕ್ಕೆ ಆ ಮೇಸ್ತ್ರಿ, “ಇವಳು ಮೋವಾಬ್ಯಳು, ನವೊಮಿಯ ಸಂಗಡ ಮೋವಾಬ್ ನಾಡಿನಿಂದ ಹಿಂದಿರುಗಿ ಬಂದವಳು.


ಆಗ ಅವನು ನನಗೆ, “ಇವು ದೇವಾಲಯದ ಸೇವಕರು ಬಲಿಪ್ರಾಣಿಗಳನ್ನು ತಂದ ಜನರಿಗಾಗಿ ಅವುಗಳ ಮಾಂಸವನ್ನು ಬೇಯಿಸುವ ಪಾಕಶಾಲೆಗಳು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು