Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:48 - ಕನ್ನಡ ಸತ್ಯವೇದವು C.L. Bible (BSI)

48 ಆದರೆ ಆ ಮೇಸ್ತ್ರಿ ದುಷ್ಟನಾಗಿದ್ದು ‘ನನ್ನ ಯಜಮಾನ ತಡಮಾಡುವನು’ ಎಂದು ನೆನಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಆದರೆ ಆ ಕೆಟ್ಟ ಆಳು - ನನ್ನ ಯಜಮಾನನು ತಡಮಾಡುತ್ತಾನೆ ಅಂತ ತನ್ನ ಮನಸ್ಸಿನಲ್ಲಿ ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 “ಆದರೆ ಸೇವಕನು ದುಷ್ಟನಾಗಿದ್ದರೆ ಮತ್ತು ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದು ನೆನಸಿಕೊಂಡಿದ್ದರೆ ಅವನಿಗೆ ಏನು ಸಂಭವಿಸುತ್ತದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಆದರೆ ದುಷ್ಟ ಸೇವಕನು ತನ್ನ ಹೃದಯದಲ್ಲಿ, ‘ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ,’ ಎಂದು ಹೇಳಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಖರೆ ತೊ ಎಕ್ ವಿಶ್ವಾಸ್‍ ನಸಲ್ಲೊ ಸೆವಕ್ ಹೊವ್ನ್ ತೊ ಅಪ್ನಾಕುಚ್ ಮಾಲಿಕ್ ಯೆವ್ಕ್ ಅಜುನ್ ಲೈ ಎಳ್ ಹಾಯ್ ಮನುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:48
18 ತಿಳಿವುಗಳ ಹೋಲಿಕೆ  

ರಾಜನು ಅವನನ್ನು ಕರೆಯಿಸಿ, ‘ಎಲೋ ನೀಚ, ನೀನು ಬೇಡಿಕೊಂಡಿದ್ದರಿಂದ ಪೂರ್ತಿ ಸಾಲವನ್ನು ನಾನು ಮನ್ನಾಮಾಡಿದೆ.


“ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ,’ ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ


ಮೂರ್ಖನು ಆಡುವುದು ಕೆಡುಕನ್ನೇ, ಅವನು ಮಾಡುವುದು ಅಧರ್ಮವನ್ನೇ, ನುಡಿಯುವುದು ಸರ್ವೇಶ್ವರ ಸ್ವಾಮಿಗೆ ವಿರುದ್ಧವಾದ ಅಸತ್ಯವನ್ನೇ. ಆತ ಹಸಿದವರಿಗೆ ಆಹಾರವನ್ನು ಕೊಡುವುದಿಲ್ಲ. ಬಾಯಾರಿದವರಿಗೆ ನೀರನ್ನು ಕೊಡಿಸುವುದಿಲ್ಲ.


ಆಗ ಪೇತ್ರನು, “ಅನನೀಯಾ, ನಿನ್ನ ಆಸ್ತಿಯ ವಿಕ್ರಯದಿಂದ ಬಂದ ಹಣದ ಒಂದು ಭಾಗವನ್ನು ಬಚ್ಚಿಟ್ಟುಕೊಂಡು, ನೀನು ಪವಿತ್ರಾತ್ಮ ಅವರಿಗೆ ಏಕೆ ವಂಚನೆಮಾಡಿದೆ? ನಿನ್ನ ಹೃದಯದಲ್ಲಿ ಪಿಶಾಚಿಗೇಕೆ ಎಡೆಮಾಡಿಕೊಟ್ಟೆ?


(ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು).


ಮಾನವನ ಹೃದಯಾಂತರಾಳದಿಂದ ದುರಾಲೋಚನೆ, ಅನೈತಿಕತೆ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ,


“ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲೇ, ‘ಸರ್ವೇಶ್ವರ ನಮ್ಮನ್ನು ಈ ನಾಡಿಗೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ’ ಎಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ಕಾರಣದಿಂದಲೇ ಸರ್ವೇಶ್ವರ ನಿಮ್ಮ ಬಳಿಯಿಂದ ಅವರನ್ನು ಹೊರದಬ್ಬುತ್ತಾರೆ.


ನಿನ್ನ ದುರಾಲೋಚನೆಗಾಗಿ ಪಶ್ಚಾತ್ತಾಪಪಡು; ನಿನ್ನ ದುರುದ್ದೇಶವನ್ನು ಕ್ಷಮಿಸಲೆಂದು ಪ್ರಭುವನ್ನು ಪ್ರಾರ್ಥಿಸು; ಅವರು ಕ್ಷಮಿಸಬಹುದು.


ರಾಜ ಅವನನ್ನು ನೋಡಿ, ‘ಎಲಾ ದುಷ್ಟ ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದಿದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ?


“ಆಗ ಧಣಿ ಅವನಿಗೆ, ‘ಎಲವೋ, ಮೈಗಳ್ಳನಾದ ದುಷ್ಟ ಸೇವಕ, ನಾನು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವನು; ನಾನು ತೂರದ ಎಡೆಯಲ್ಲಿ ರಾಶಿಮಾಡುವವನು ಎಂದು ನಿನಗೆ ಗೊತ್ತಿತ್ತಲ್ಲವೆ?


“ನರಪುತ್ರನೇ, ಇಗೋ, ಇಸ್ರಯೇಲ್ ವಂಶದವರು, ‘ಇವನಿಗಾದ ದಿವ್ಯದರ್ಶನ ಮುಂದೆ ಬಹುದೂರ ಕಾಲಕ್ಕೆ ಸಂಬಂಧಪಟ್ಟದ್ದು; ಬಹಳ ದಿನಗಳ ಮೇಲೆ ಆಗತಕ್ಕನ್ನು ಮುಂತಿಳಿಸುತ್ತಾನೆ’ ಎಂದು ಹೇಳುತ್ತಾರೆ.


“ನರಪುತ್ರನೇ, ‘ಕ್ಲುಪ್ತಕಾಲ ದೂರ ದೂರ ಹೋಗುತ್ತಲಿದೆ, ದಿವ್ಯದರ್ಶನಗಳೆಲ್ಲಾ ನಿರರ್ಥಕ’ ಎಂಬುದಾಗಿ ಇಸ್ರಯೇಲ್ ನಾಡಿನವರು ಆಡಿಕೊಳ್ಳುವ ಈ ಗಾದೆ ಏನು?


ಕೆಟ್ಟದ್ದನ್ನು ಮಾಡಲು ನರಮಾನವರು ತುಂಬ ಆಸಕ್ತಿ ಉಳ್ಳವರಾಗಿದ್ದಾರೆ. ಕೇಡಿಗೆ ತಕ್ಕ ದಂಡನೆಯನ್ನು ಕೂಡಲೆ ವಿಧಿಸದಿರುವುದೇ ಇದಕ್ಕೆ ಕಾರಣ.


ಆಗ ಎಲೀಷನು, “ಒಬ್ಬನು ರಥದಿಂದಿಳಿದು ಬಂದು ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಿಸಲಿಲ್ಲವೆಂದು ನೆನಸುತ್ತೀಯೋ? ದ್ರವ್ಯ, ಬಟ್ಟೆಗಳು, ಎಣ್ಣೇಮರದ ತೋಪುಗಳು, ದ್ರಾಕ್ಷೀತೋಟಗಳು, ಕುರಿದನಗಳು, ಗಂಡಾಳು, ಹೆಣ್ಣಾಳುಗಳು, ಇವನ್ನು ಸಂಪಾದಿಸುವುದಕ್ಕೆ ಇದು ಸಮಯವೇ?


ಬಿಡುಗಡೆಯಾಗುವ ಏಳನೆಯ ವರ್ಷ ಸಮೀಪಿಸಿಬಿಟ್ಟಿತು ಎಂದು ನೀಚವಾದ ಆಲೋಚನೆಮಾಡಿ, ಬಡ ಸಹೋದರನ ಬಗ್ಗೆ ಮೋರೆ ಕರ್ರಗೆಮಾಡಿಕೊಂಡು, ಅವನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಸಹಾಯವನ್ನು ನಿರಾಕರಿಸಿದರೆ, ಅವನು ನಿಮ್ಮ ಬಗ್ಗೆ ಸರ್ವೇಶ್ವರನಿಗೆ ಮೊರೆ ಇಡುವನು; ಆಗ ನೀವು ದೋಷಿಗಳಾಗುತ್ತೀರಿ.


ಅಂಥವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುತ್ತಾನೆಂಬುದು ನಿಶ್ಚಯ.


ತನ್ನ ಜೊತೆಯ ಸೇವಕರನ್ನು ಹೊಡೆಯತೊಡಗಿದರೆ, ಕುಡುಕರ ಸಂಗಡ ತಿಂದುಕುಡಿಯಲಾರಂಭಿಸಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು