Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:49 - ಕನ್ನಡ ಸತ್ಯವೇದವು C.L. Bible (BSI)

49 ತನ್ನ ಜೊತೆಯ ಸೇವಕರನ್ನು ಹೊಡೆಯತೊಡಗಿದರೆ, ಕುಡುಕರ ಸಂಗಡ ತಿಂದುಕುಡಿಯಲಾರಂಭಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸಿದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ತನ್ನ ಜೊತೆ ಆಳುಗಳನ್ನು ಹೊಡೆಯುವದಕ್ಕೆ ತೊಡಗಿ ಕುಡಿಕರ ಸಂಗಡ ತಿನ್ನುತ್ತಾ ಕುಡಿಯುತ್ತಾ ಇರುವದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಆ ಸೇವಕನು ಇತರ ಸೇವಕರನ್ನು ಹೊಡೆಯುತ್ತಾ ತನ್ನಂಥ ಜನರೊಂದಿಗೆ ಸೇರಿಕೊಂಡು ತಿನ್ನುತ್ತಾ ಕುಡಿಯುತ್ತಾ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ತನ್ನ ಜೊತೆಯ ಸೇವಕರನ್ನು ಹೊಡೆಯುತ್ತಾ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಅನಿ ತೊ ಅಪ್ನಾಚ್ಯಾ ವಾಂಗುಡ್ಚ್ಯಾ ಅಳಾಕ್ನಿ ಮಾರುಕ್ ಲಾಗ್ತಾ, ಅನಿ ಫಿದೊಡ್ಯಾಂಚ್ಯಾ ವಾಂಗ್ಡಾ ಖಾತಲೆ-ಫಿತಲೆ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:49
23 ತಿಳಿವುಗಳ ಹೋಲಿಕೆ  

ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.


ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


ಜನರನ್ನು ಸನ್ಮಾರ್ಗದಿಂದ ದುರ್ಮಾರ್ಗಕ್ಕೆ ಎಳೆಯುವ ಪ್ರವಾದಿಗಳಿಗೆ ತಿನ್ನಲು ಏನಾದರೂ ಕೊಟ್ಟರೆ “ಶಾಂತಿ” ಎನ್ನುತ್ತಾರೆ. ಆದರೆ ತಿನ್ನಲು ಯಾರಾದರೂ ಕೊಡದಿದ್ದರೆ ಯುದ್ಧದ ಬೆದರಿಕೆ ಹಾಕುತ್ತಾರೆ.


ಇದಲ್ಲದೆ, ದೇವಜನರ ವಿರುದ್ಧ ಯುದ್ಧಮಾಡಿ, ಜಯಗಳಿಸುವಂತೆ ಅದಕ್ಕೆ ಅವಕಾಶವನ್ನು ಕೊಡಲಾಯಿತು. ಸಕಲ ದೇಶ, ಭಾಷೆ, ಕುಲ, ಗೋತ್ರಗಳ ಮೇಲೆ ಅದಕ್ಕೆ ಅಧಿಕಾರವನ್ನು ನೀಡಲಾಯಿತು.


ತಮ್ಮ ಮಿತಿಮೀರಿದ ಮದ್ಯಪಾನಾಸಕ್ತಿಯಿಂದ ನಿಮ್ಮ ಪ್ರೇಮಭೋಜನ ಕೂಟಗಳಲ್ಲಿ ಇವರು ಕಳಂಕಪ್ರಾಯರಾಗಿದ್ದಾರೆ. ತಮ್ಮ ಕುರಿಗಳನ್ನು ತೊರೆದು ಹೊಟ್ಟೆಹೊರೆದುಕೊಳ್ಳುವ ಕುರುಬರಂತಿದ್ದಾರೆ. ಇವರು ಬಿರುಗಾಳಿಗೆ ಚದುರಿಹೋಗುವ ನೀರಿಲ್ಲದ ಮೋಡಗಳು; ಎಲೆಗಳು ಉದುರಿ, ಫಲಬಿಡದೆ, ಬಾಡಿಹೋಗಿ, ಬೇರುಸಹಿತ ಕಿತ್ತುಬೀಳುವ ಶರತ್ಕಾಲದ ಮರಗಳು;


ನಿಮ್ಮ ಪಾಲನೆಗೆ ಒಳಗಾಗಿರುವವರ ಮೇಲೆ ದರ್ಪದಿಂದ ದೊರೆತನಮಾಡದೆ ದೇವರ ಮಂದೆಗೆ ಆದರ್ಶ ಮಾದರಿಗಳಾಗಿರಿ.


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


ಯಾರಾದರೂ ನಿಮ್ಮನ್ನು ಅಧೀನಪಡಿಸಿಕೊಂಡರೂ ಕಬಳಿಸಿದರೂ ಮರುಳುಗೊಳಿಸಿದರೂ ತುಚ್ಛೀಕರಿಸಿದರೂ ಕೆನ್ನೆಗೆ ಬಿಗಿದರೂ ಎಲ್ಲವನ್ನೂ ಸಹಿಸಿಕೊಳ್ಳುತ್ತೀರಿ.


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ನೀವು ಅವುಗಳ ಹಾಲನ್ನು ಕುಡಿಯುತ್ತೀರಿ, ಉಣ್ಣೆಯ ಹೊದಿಕೆಯನ್ನು ಹೊದಿಯುತ್ತೀರಿ. ಕೊಬ್ಬಿದ ಕುರಿಗಳನ್ನು ಕಡಿಯುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ.


ಸರ್ವೇಶ್ವರ ಸ್ವಾಮಿಯ ಮಾತಿನಲ್ಲಿ ಭಯಭಕ್ತಿಯುಳ್ಳವರೇ, ಕೇಳಿ ಸ್ವಾಮಿಯ ಈ ಮಾತನ್ನು ! “ನನ್ನ ನಾಮದ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಹೋದರರು, ‘ಸರ್ವೇಶ್ವರ ತನ್ನ ಮಹಿಮೆಯನ್ನು ಬೆಳಗಿಸಲಿ, ಆಗ ನಿಮಗಾಗುವ ಆನಂದವನ್ನು ನೋಡೋಣ,’ ಎಂದು ಜರೆದಿದ್ದಾರಲ್ಲವೆ? ಅವರೇ ನಾಚಿಕೆಪಡಬೇಕಾಗುವುದು !


ಅಲ್ಲದೆ, ‘ಬನ್ನಿ, ಮಧುಪಾನವನ್ನು ತರಿಸುತ್ತೇನೆ. ಅಮಲೇರಿಸುವ ಮದ್ಯವನ್ನು ಬೇಕಾದಷ್ಟು ಕುಡಿಯೋಣ; ಆಗ ಇನ್ನೂ ಸಂಭ್ರಮವಾಗಿರುವುದು!’ ಎಂದು ಹರಟಿಕೊಳ್ಳುವರು.”


ಆದರೆ ನನ್ನ ಪ್ರಜೆ ಇಸ್ರಯೇಲರು ನನ್ನ ಆಜ್ಞಾನುಸಾರ ನನ್ನ ಮಂದಿರಕ್ಕೆ ತರುವ ಬಲಿದಾನಗಳ ಹಾಗು ನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿದ್ದೀರಿ. ಅವುಗಳ ಶ್ರೇಷ್ಠಭಾಗಗಳಿಂದ ನಿಮ್ಮನ್ನೇ ಕೊಬ್ಬಿಸಿಕೊಳ್ಳುತ್ತಿದ್ದೀರಿ; ಏಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೇ?


ಕುಡುಕರೊಡನೆ, ಹೊಟ್ಟೆಬಾಕರೊಡನೆ ಸೇರಬೇಡ; ಮಿತಿಮೀರಿ ಮಾಂಸ ತಿನ್ನುವ ಜನರ ಜೊತೆ ನಿನಗೆ ಬೇಡ.


“ಆದರೆ ಅದೇ ಸೇವಕ ಹೊರಗೆಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ.


ಆದರೆ ಆ ಮೇಸ್ತ್ರಿ ದುಷ್ಟನಾಗಿದ್ದು ‘ನನ್ನ ಯಜಮಾನ ತಡಮಾಡುವನು’ ಎಂದು ನೆನಸಿಕೊಂಡು,


ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ, ಯಜಮಾನನು ಬರುವನು.


ಆದುದರಿಂದ ಅವನು ಮದುಮಗನನ್ನು ಕರೆದು, “ಜನರೆಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಹಂಚುತ್ತಾರೆ; ಅತಿಥಿಗಳು ಯಥೇಚ್ಛವಾಗಿ ಕುಡಿದಾದ ಮೇಲೆ ಸಾಧಾರಣ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದುದನ್ನು ಈವರೆಗೂ ಇಟ್ಟಿದ್ದೀಯಲ್ಲಾ!” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು