Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:8 - ಕನ್ನಡ ಸತ್ಯವೇದವು C.L. Bible (BSI)

8 ಇವೆಲ್ಲವೂ ಪ್ರಸವ ವೇದನೆಯ ಪ್ರಾರಂಭ ಮಾತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇವೆಲ್ಲಾ (ನೂತನ ಕಾಲವು ಹುಟ್ಟುವ) ಪ್ರಸವವೇದನೆಯ ಪ್ರಾರಂಭ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇವೆಲ್ಲಾ [ನೂತನ ಕಾಲವು ಹುಟ್ಟುವ] ಪ್ರಸವವೇದನೆಯ ಪ್ರಾರಂಭ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇವೆಲ್ಲಾ ಪ್ರಸವವೇದನೆಯ ಆರಂಭವಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇವೆಲ್ಲವೂ ಪ್ರಸವವೇದನೆಯ ಪ್ರಾರಂಭ ಮಾತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹಿ ಸಗ್ಳಿ ಘಡಿತಾ ಖಾಲಿ ಎಕಾ ಪೊರಾಕ್ ಜಲಮ್ ದಿತಾನಾ ಯೆತಲ್ಯಾ ಪಯ್ಲೆಚ್ಯಾ ಯೆನಾಂಚ್ಯಾ ಸರ್ಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:8
12 ತಿಳಿವುಗಳ ಹೋಲಿಕೆ  

ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಅವರು ನಿಮಗೂ ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವರು. ದೀರ್ಘಕಾಲ ವಾಸಿಯಾಗದ ಘೋರವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವರು.


ಖೈದಿಗಳೊಂದಿಗೆ ಕಾರಾಗೃಹವನ್ನು ಸೇರುವಿರಿ; ಇಲ್ಲವೆ, ಇತರರ ಸಮೇತ ಹತರಾಗುವಿರಿ. ಇದೇ ನಿಮ್ಮ ಗತಿ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಮನಸ್ಸೆ ಎಫ್ರಯಿಮನ್ನು ಎಫ್ರಯಿಮ್ ಮನಸ್ಸೆಯನ್ನು ಕಬಳಿಸುತ್ತದೆ. ಇವೆರಡೂ ಸೇರಿ ಜುದೇಯಕ್ಕೆ ವಿರುದ್ಧವಾಗಿ ಎದ್ದು ನಿಂತಿವೆ. ಇಷ್ಟಾದರೂ ಸಹ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಇವರು ಇಸ್ರಯೇಲರನ್ನು ನುಂಗಿಬಿಡಲು ಬಾಯಿ ತೆರೆದಿದ್ದಾರೆ. ಇಷ್ಟಾದರೂ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಎಫ್ರಯಿಮಿಗೆ ಪ್ರಸವವೇದನೆ ಬಂದಿದೆ. ಅಷ್ಟೇ ಅಲ್ಲ. ಅದೊಂದು ಮಂಕು ಮಗುವಿನಂತಿದೆ. ಹುಟ್ಟಿ, ಹೊರಗೆ ಬರಬಹುದಾದರೂ, ಅದು ಬಾರದೆ ಇದೆ.


ಜನಾಂಗಕ್ಕೆ ವಿರುದ್ಧ ಜನಾಂಗ, ರಾಷ್ಟ್ರಕ್ಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಇಳಿಯುವುವು. ಅಲ್ಲಲ್ಲಿ ಭೂಕಂಪಗಳು ಆಗುವುವು. ಕ್ಷಾಮ-ಡಾಮರಗಳು ತಲೆದೋರುವುವು. ಇವೆಲ್ಲವೂ ಪ್ರಸವವೇದನೆಯ ಪ್ರಾರಂಭ ಮಾತ್ರ.


ಇದೆಲ್ಲಾ ಸಂಭವಿಸುವುದಕ್ಕೆ ಮುಂಚೆ ನಿಮ್ಮನ್ನು ಬಂಧಿಸಿ ಹಿಂಸೆಗೊಳಪಡಿಸುವರು. ಪ್ರಾರ್ಥನಾಮಂದಿರಗಳಿಗೂ ಕಾರಾಗೃಹಗಳಿಗೂ ಎಳೆದೊಪ್ಪಿಸುವರು; ನನ್ನ ನಾಮದ ನಿಮಿತ್ತ ಅರಸರ ಹಾಗೂ ಅಧಿಪತಿಗಳ ಮುಂದಕ್ಕೆ ಎಳೆಯುವರು.


ಐಶ್ವರ್ಯವಂತರೇ, ಕೇಳಿ: ನಿಮಗೆ ಬರಲಿರುವ ಮಹಾಕಷ್ಟಗಳಿಗಾಗಿ ಕಣ್ಣೀರಿಡಿ, ಗೋಳಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು