Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:1 - ಕನ್ನಡ ಸತ್ಯವೇದವು C.L. Bible (BSI)

1 “ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಹೇಗಿರುವುದು ಎನ್ನುವುದಕ್ಕೆ ಈ ಸಾಮತಿಯನ್ನು ಕೊಡಬಹುದು: ಹತ್ತುಮಂದಿ ಕನ್ಯೆಯರು ದೀಪಾರತಿ ಹಿಡಿದು ಮದುವಣಿಗನನ್ನು ಎದುರುಗೊಳ್ಳಲು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಪರಲೋಕರಾಜ್ಯವು ಆರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಎದುರುಗೊಳ್ಳುವದಕ್ಕೆ ಹೊರಟಂಥ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಆ ದಿನಗಳಲ್ಲಿ ಪರಲೋಕರಾಜ್ಯವು ಹೇಗಿರುತ್ತದೆ ಎನ್ನುವುದಕ್ಕೆ ಈ ಸಾಮ್ಯವು ಉದಾಹರಣೆಯಾಗಿದೆ. ಹತ್ತು ಮಂದಿ ಕನ್ನಿಕೆಯರು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳಲು ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋದ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತನ್ನಾ ಸರ್ಗಾಚೊ ರಾಜ್ ಮಟ್ಲ್ಯಾರ್ ಅಸೊ. ಎಕ್ದಾ ಧಾ ಧೆಡ್ನಿಯಾ ಅರ್‍ತಿಯಾ ಘೆವ್ನ್ ನ್ಹವ್ರ್ಯಾಕ್ ಭೆಟುಕ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:1
43 ತಿಳಿವುಗಳ ಹೋಲಿಕೆ  

ಬಂದಿದೆ ಯಜ್ಞದ ಕುರಿಮರಿಯ ಶುಭ ವಿವಾಹ ಸಿದ್ಧಳಿಹಳು ಮದುಮಗಳು ಶೃಂಗಾರ ಸಹಿತ ಸಂತೋಷಿಸೋಣ, ಸಂಭ್ರಮಿಸೋಣ ! ಆತನ ಮಹಿಮೆಯನು ಕೀರ್ತಿಸೋಣ;


ಏಳು ಅಂತಿಮ ವಿಪತ್ತುಗಳಿಂದ ತುಂಬಿದ್ದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ದೇವದೂತರುಗಳಲ್ಲಿ ಒಬ್ಬನು ಬಂದು, ನನ್ನೊಡನೆ ಮಾತನಾಡಿ ಇಂತೆಂದನು: “ಇಲ್ಲಿಗೆ ಬಾ, ಯಜ್ಞದ ಕುರಿಮರಿಗೆ ಸತಿಯಾಗಲಿರುವ ಮದುವಣಗಿತ್ತಿಯನ್ನು ನಿನಗೆ ತೋರಿಸುತ್ತೇನೆ,” ಎಂದನು.


ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು.


ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ.


ಯೇಸುಸ್ವಾಮಿ ಜನರಿಗೆ ಮತ್ತೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯವು ತನ್ನ ಹೊಲದಲ್ಲಿ ಒಳ್ಳೆಯ ಗೋದಿಯನ್ನು ಬಿತ್ತಿದ ರೈತನನ್ನು ಹೋಲುತ್ತದೆ.


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು.


ರಾಜನೊಬ್ಬ ತನ್ನ ಕುಮಾರನ ವಿವಾಹ ಮಹೋತ್ಸವವನ್ನು ಏರ್ಪಡಿಸಿದ.


ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


“ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯವು ಸಮೀಪಿಸಿತು,” ಎಂದು ಸಾರಿ ಹೇಳುತ್ತಾ ಬಂದನು.


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ನೀವು ಸದಾ ನನ್ನನ್ನು ಸ್ಮರಿಸಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಸಾಂಪ್ರದಾಯಿಕ ರೀತಿನೀತಿಗಳನ್ನು ಸರಿಯಾಗಿ ಪಾಲಿಸಿಕೊಂಡು ಬರುತ್ತಿದ್ದೀರಿ; ಇದಕ್ಕಾಗಿ ನಿಮ್ಮನ್ನು ಮೆಚ್ಚುತ್ತೇನೆ.


“ಸ್ವರ್ಗಸಾಮ್ರಾಜ್ಯವು ಹೀಗಿದೆ: ಒಬ್ಬ ಯಜಮಾನನಿಗೆ ಒಂದು ದ್ರಾಕ್ಷಿತೋಟವಿತ್ತು. ಅದರಲ್ಲಿ ಕೆಲಸ ಮಾಡುವುದಕ್ಕೆ ಕೂಲಿಗಾರರನ್ನು ಗೊತ್ತುಮಾಡಲು ಅವನು ಬೆಳಗಿನ ಜಾವದಲ್ಲೇ ಹೊರಟ.


“ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನು ಬಲೆಗೆ ಹೋಲಿಸಬಹುದು. ಬೆಸ್ತರು ಬಲೆಯನ್ನು ಸಮುದ್ರದಲ್ಲಿ ಬೀಸಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿಯುತ್ತಾರೆ.


ಭೂಷಿತಳಾಗಿಹಳಾಕೆ ಕಸೂತಿಕೆಲಸದ ವಸ್ತ್ರಗಳಿಂದ I ಬರುತಿಹಳು ರಾಜನ ಬಳಿಗೆ ಸಖಿಯರ ಪರಿವಾರ ಸಮೇತ II


ಹೊಲವೇ ಈ ಲೋಕ; ಒಳ್ಳೆಯ ಕಾಳುಗಳೇ ಶ್ರೀಸಾಮ್ರಾಜ್ಯದ ಮಕ್ಕಳು; ಕಳೆಗಳೇ ಕೇಡಿಗನ ಮಕ್ಕಳು.


ಜೆರುಸಲೇಮಿನ ಮಹಿಳೆಯರೇ, ಆಣೆಯಿಟ್ಟು ಹೇಳುತ್ತೇನೆ ನಿಮಗೆ : “ನೀವು ನನ್ನ ಕಾಂತನನ್ನು ಕಂಡರೆ ಅನುರಾಗದಿಂದ ನಾನು ಅಸ್ವಸ್ಥಳಾಗಿರುವೆ ಎಂದು ತಿಳಿಸಿರಿ ಅವನಿಗೆ” ಮಹಿಳೆಯರು :


ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರಹೊಮ್ಮುತ್ತಿದ್ದವು. ಆ ಸಿಂಹಾಸನದ ಮುಂದೆ ದೇವರ ಸಪ್ತ ಆತ್ಮಗಳನ್ನು ಸೂಚಿಸುವ ಸಪ್ತದೀಪಗಳು ಬೆಳಗುತ್ತಿದ್ದವು.


ನಿಮ್ಮ ಬಗ್ಗೆ ದೇವರಿಗಿರುವ ಪ್ರೇಮಾಸೂಯೆ ನನಗೂ ಇದೆ. ನಿಷ್ಕಳಂಕ ಕನ್ನಿಕೆಯೊಬ್ಬಳನ್ನು ಅವಳ ಏಕೈಕ ವರನಿಗೆ ನಿಶ್ಚಯಿಸುವ ರೀತಿಯಲ್ಲಿ ನಾನು ಕ್ರಿಸ್ತಯೇಸುವೆಂಬ ಏಕೈಕ ಪುರುಷನಿಗೆ ನಿಮ್ಮನ್ನು ನಿಶ್ಚಯಮಾಡಿದ್ದೇನೆ.


ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು.


ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”


ನಾವು ಸಭೆಸೇರಿದ್ದ ಮೇಲಂತಸ್ತಿನ ಕೊಠಡಿಯಲ್ಲಿ ಅನೇಕ ದೀಪಗಳು ಉರಿಯುತ್ತಿದ್ದವು.


ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ; ಈ ಕಾಳನ್ನು ತೆಗೆದುಕೊಂಡು ಹೋಗಿ ರೈತ ತನ್ನ ಹೊಲದಲ್ಲಿ ಬಿತ್ತಿದ.


ಅವನ ಮಾತು ಮಧುರ ಅವನು ಸರ್ವಾಂಗ ಸುಂದರ. ಜೆರುಸಲೇಮಿನ ಮಹಿಳೆಯರೇ, ಇವನೇ ನನ್ನ ಪ್ರಿಯನು ಇವನೇ ನನ್ನ ಇನಿಯನು.


ನೀನು ಹಚ್ಚಿಕೊಂಡಿರುವ ತೈಲ ಎನಿತು ಸುವಾಸನೀಯ ಸುರಿದ ಪರಿಮಳದಂತೆ ವ್ಯಾಪ್ತ ನಿನ್ನ ನಾಮಾಂಕಿತ ಕನ್ಯೆಯರೆಲ್ಲರು ನಿನ್ನನು ಪ್ರೀತಿಸದಿರಲು ಅಸಾಧ್ಯ.


ತಮ್ಮತಮ್ಮ ದೀಪದ ಬತ್ತಿಯನ್ನು ಸರಿಮಾಡಿದರು.


ಆದುದರಿಂದ ಯೂದನು ಸೈನಿಕರ ಒಂದು ತಂಡವನ್ನೂ ಮುಖ್ಯಯಾಜಕರು ಮತ್ತು ಫರಿಸಾಯರು ಕಳುಹಿಸಿದ ಕಾವಲಾಳುಗಳನ್ನೂ ಕರೆದುಕೊಂಡು ದೀವಟಿಗೆ, ಪಂಜು ಮತ್ತು ಆಯುಧಗಳ ಸಮೇತ ಅಲ್ಲಿಗೆ ಬಂದನು.


ಮೂರನೆಯ ದೇವದೂತನು ತುತೂರಿಯನ್ನು ಊದಿದನು. ಪಂಜಿನಂತೆ ಉರಿಯುತ್ತಿದ್ದ ದೊಡ್ಡ ನಕ್ಷತ್ರವೊಂದು ಆಕಾಶದಿಂದ ಕೆಳಕ್ಕೆ ಬಿತ್ತು. ಅದು ನದಿಗಳಲ್ಲಿ ಮೂರನೆಯ ಒಂದು ಭಾಗದ ಮೇಲೂ ನೀರಿನ ಒರತೆಗಳ ಮೇಲೂ ಬಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು