Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:10 - ಕನ್ನಡ ಸತ್ಯವೇದವು C.L. Bible (BSI)

10 ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ಕೊಂಡುಕೊಳ್ಳಲಿಕ್ಕೆ ಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಕ್ಕೆ ಹೋದರು. ಬಾಗಿಲು ಮುಚ್ಚಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಆದ್ದರಿಂದ ಐದು ಮಂದಿ ಬುದ್ಧಿಹೀನ ಕನ್ನಿಕೆಯರು ಎಣ್ಣೆ ಕೊಂಡುಕೊಳ್ಳುವುದಕ್ಕೆ ಹೋದರು. ಅವರು ಹೋಗುತ್ತಿರುವಾಗ, ಮದುಮಗನು ಬಂದನು. ಸಿದ್ಧವಾಗಿದ್ದ ಕನ್ನಿಕೆಯರು ಮದುಮಗನ ಜೊತೆಯಲ್ಲಿ ಔತಣಕ್ಕೆ ಹೋದರು. ನಂತರ ಬಾಗಿಲು ಮುಚ್ಚಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಅವರು ಕೊಂಡುಕೊಳ್ಳುವುದಕ್ಕೆ ಹೋದಾಗ, ಮದುಮಗನು ಬಂದನು. ಆಗ ಸಿದ್ಧವಾಗಿದ್ದವರು ಆತನೊಂದಿಗೆ ಮದುವೆಯ ಔತಣಕ್ಕೆ ಒಳಗೆ ಹೋದರು. ತರುವಾಯ ಬಾಗಿಲು ಮುಚ್ಚಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆಚೆಸಾಟ್ನಿ ಬುದ್ದ್ ನಸಲ್ಲ್ಯಾ ಪಾಂಚ್ ಧೆಡ್ನಿಯಾ ಇಕ್ತಲ್ಯಾಂಚ್ಯಾಕ್ನಾ ತೆಲ್ ಇಕಾತ್ ಮನುನ್ ಗೆಲ್ಯಾನಿ: ತವ್ಡ್ಯಾಕ್ ಮಟ್ಲ್ಯಾರ್ ನ್ಹವ್ರೊ ಯೆಲೊ, ಅನಿ ತಯಾರ್ ಹೊತ್ತೆ ಸಗ್ಳೆ ಜಾನಾ ತೆಚ್ಯಾ ವಾಂಗ್ಡಾ ಲಗ್ನಾಚ್ಯಾ ಘರಾತ್ ಭುತ್ತುರ್ ಗುಸ್ಲೆ ಮಾನಾ ದಾರ್ ಧಾಪ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:10
21 ತಿಳಿವುಗಳ ಹೋಲಿಕೆ  

ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, ‘ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ನೀವು ಕೇಳುವಿರಿ. ಅದಕ್ಕೆ ಅವನು, ‘ನೀವು ಎಲ್ಲಿಯವರೋ ನಾನು ಅರಿಯೆ’ ಎನ್ನುವನು.


ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷವಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ.


ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು.


ಇದಕ್ಕೆಲ್ಲಾ ಸಾಕ್ಷಿಯಾಗಿರುವಾತನು, “ಹೌದು, ನಾನು ಬೇಗನೆ ಬರುತ್ತೇನೆ,” ಎಂದು ಹೇಳುತ್ತಾನೆ. ಆಮೆನ್, ಪ್ರಭು ಯೇಸುವೇ, ಬನ್ನಿ.


“ನಡುರಾತ್ರಿಯ ವೇಳೆ. ‘ಇಗೋ, ಮದುವಣಿಗ ಬರುತ್ತಿದ್ದಾನೆ; ಬನ್ನಿ, ಆತನನ್ನು ಎದುರುಗೊಳ್ಳಿ,’ ಎಂಬ ಕೂಗು ಕೇಳಿಸಿತು. ಕನ್ಯೆಯರೆಲ್ಲರೂ ಎದ್ದರು.


ಎಂತಲೆ ಸೇರರಿವರು ನನ್ನ ವಿಶ್ರಾಂತಿ ನೆಲೆ I ಎಂದು ಸಿಟ್ಟಿನಿಂದ ಕೆರಳಿ ನಾ ಶಪಥಮಾಡಿದೆ II


ದೇವರು ನೋಹನಿಗೆ ಅಪ್ಪಣೆಕೊಟ್ಟ ಮೇರೆಗೆ, ಗಂಡು ಹೆಣ್ಣಂತೆ ಎಲ್ಲ ಪ್ರಾಣಿಗಳು ಬಂದು ಸೇರಿದವು. ಬಳಿಕ ಸರ್ವೇಶ್ವರ, ನೋಹನನ್ನು ಒಳಗೆ ಬಿಟ್ಟು ಬಾಗಿಲನ್ನು ಮುಚ್ಚಿದರು.


ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ಪಿತನಿಗೆ ಹರ್ಷದಿಂದ ಕೃತಜ್ಞತಾಸ್ತುತಿ ಸಲ್ಲಿಸುವಿರಿ. ಏಕೆಂದರೆ, ಬೆಳಕಿನಲ್ಲಿರುವ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯದಲ್ಲಿ ಪಾಲುಗಾರರಾಗಲು ನಿಮ್ಮನ್ನು ಯೋಗ್ಯರನ್ನಾಗಿ ಅವರು ಮಾಡಿದ್ದಾರೆ.


“ನನ್ನನ್ನು ‘ಸ್ವಾಮೀ, ಸ್ವಾಮೀ,’ ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು.


ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ.


ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಹಾಕಲು ಬಿಡನು, ಅಲ್ಲವೆ?


“ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ.


ಬಂದಿದೆ ಯಜ್ಞದ ಕುರಿಮರಿಯ ಶುಭ ವಿವಾಹ ಸಿದ್ಧಳಿಹಳು ಮದುಮಗಳು ಶೃಂಗಾರ ಸಹಿತ ಸಂತೋಷಿಸೋಣ, ಸಂಭ್ರಮಿಸೋಣ ! ಆತನ ಮಹಿಮೆಯನು ಕೀರ್ತಿಸೋಣ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು