Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:14 - ಕನ್ನಡ ಸತ್ಯವೇದವು C.L. Bible (BSI)

14 “ಅದೂ ಅಲ್ಲದೆ ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಇಂತಿರುವುದು: ಒಬ್ಬಾತ ಪ್ರವಾಸ ಹೊರಡಲಿದ್ದ. ತನ್ನ ಸೇವಕರನ್ನು ಕರೆದು ಅವರ ವಶಕ್ಕೆ ತನ್ನ ಆಸ್ತಿಯನ್ನು ಒಪ್ಪಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ದೇವರ ರಾಜ್ಯವು ಹೇಗೆಂದರೆ ದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದೇಶಾಂತರಕ್ಕೆ ಹೋಗುವ ಒಬ್ಬ ಮನುಷ್ಯನು ತನ್ನ ಆಳುಗಳನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಪರಲೋಕರಾಜ್ಯವು, ತನ್ನ ಮನೆಯನ್ನು ಬಿಟ್ಟು ಬೇರೆ ಸ್ಥಳವನ್ನು ಸಂದರ್ಶಿಸುವುದಕ್ಕೆ ಪ್ರಯಾಣ ಮಾಡಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. ಆ ಮನುಷ್ಯನು ತಾನು ಹೊರಡುವುದಕ್ಕೆ ಮುಂಚೆ ತನ್ನ ಸೇವಕರೊಂದಿಗೆ ಮಾತನಾಡಿ, ತನ್ನ ಆಸ್ತಿಯನ್ನು ನೋಡಿಕೊಳ್ಳಲು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಪರಲೋಕ ರಾಜ್ಯವು ದೂರದೇಶಕ್ಕೆ ಪ್ರಯಾಣ ಮಾಡುವ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 “ಸರ್‍ಗಾಚೊ ರಾಜ್ ಮಟ್ಲ್ಯಾರ್ ಅಶೆ ಮನುಕ್ ಹೊತಾ. ಎಗ್ದಾ ಎಕ್ ಮಾನುಸ್ ಹೊತ್ತೊ, ತೊ ಧುರ್‍ಲ್ಯಾ ದೆಸಾಕ್ ಜಾನಾರ್ ಹೊತ್ತೊ ತನ್ನಾ ತೆನಿ ಅಪ್ನಾಚ್ಯಾ ಆಳಾಕ್ನಿ ಬಲ್ವುಲ್ಯಾನ್ ಅನಿ ಅಪ್ನಾಚ್ಯಾ ಆಸ್ತಿಚಿ ಜವಾಬ್ದಾರಿ ತೆಂಕಾ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:14
13 ತಿಳಿವುಗಳ ಹೋಲಿಕೆ  

ಪ್ರವಾಸಕ್ಕೆಂದು ಯಜಮಾನನೊಬ್ಬನು ಮನೆಬಿಟ್ಟು ಹೋಗುವಾಗ ತನ್ನ ಸೇವಕರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಜವಾಬ್ದಾರಿಕೆಯನ್ನು ವಹಿಸಿ, ದ್ವಾರಪಾಲಕನಿಗೆ ‘ನೀನು ಎಚ್ಚರವಾಗಿರಬೇಕು,’ ಎಂದು ಅಪ್ಪಣೆಕೊಡುವ ರೀತಿಯಲ್ಲಿ ನಾನು ನಿಮಗೆ ಹೇಳುತ್ತಿದ್ದೇನೆ. ಎಚ್ಚರವಾಗಿರಿ;


ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.


ವರದಾನಗಳು ವಿಧವಿಧವಾಗಿವೆ; ಅವುಗಳನ್ನು ಕೊಡುವ ಪವಿತ್ರಾತ್ಮ ಒಬ್ಬರೇ.


“ಇನ್ನೊಂದು ಸಾಮತಿಗೆ ಕಿವಿಗೊಡಿ: ಒಬ್ಬ ಯಜಮಾನ ಒಂದು ದ್ರಾಕ್ಷಿತೋಟ ಮಾಡಿಸಿದ. ಅದರ ಸುತ್ತ ಬೇಲಿಯನ್ನು ಹಾಕಿಸಿದ. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಅನಂತರ ಅದನ್ನು ಗೇಣಿದಾರರಿಗೆ ವಹಿಸಿ ಹೊರನಾಡಿಗೆ ಹೊರಟುಹೋದ.


ಅಪೊಲೋಸನು ಯಾರು? ಪೌಲನು ಯಾರು? ನಿಮ್ಮನ್ನು ವಿಶ್ವಾಸಕ್ಕೆ ಕರೆತಂದ ದಾಸರು ನಾವಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನು ಪ್ರಭು ನಿಯಮಿಸುವ ಕಾರ್ಯವನ್ನು ನಿರ್ವಹಿಸುತ್ತೇವೆ.


ಬಳಿಕ ಯೇಸುಸ್ವಾಮಿ ಜನರಿಗೆ ಈ ಸಾಮತಿಯನ್ನು ಹೇಳತೊಡಗಿದರು: “ಒಬ್ಬಾತ ಒಂದು ದ್ರಾಕ್ಷಿತೋಟ ಮಾಡಿಸಿದ. ಕಾರಣಾಂತರ ಅದನ್ನು ಗೇಣಿದಾರರಿಗೆ ವಹಿಸಿ, ದೀರ್ಘಕಾಲ ಹೊರನಾಡಿಗೆ ಪ್ರವಾಸ ಹೋದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು