Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:20 - ಕನ್ನಡ ಸತ್ಯವೇದವು C.L. Bible (BSI)

20 ಸೇವಕರಿಂದ ಲೆಕ್ಕಾಚಾರ ಕೇಳಿದ. ಐದು ತಲೆಂತು ಪಡೆದವನು ಇನ್ನೂ ಐದು ತಲೆಂತುಗಳನ್ನು ಮುಂದೆ ತಂದು, ‘ಒಡೆಯಾ, ನೀವು ನನ್ನ ವಶಕ್ಕೆ ಐದು ತಲೆಂತು ಒಪ್ಪಿಸಿದಿರಿ. ಇಗೋ ನೋಡಿ, ಮತ್ತೆ ಐದು ತಲೆಂತು ಸಂಪಾದಿಸಿದ್ದೇನೆ,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಐದು ತಲಾಂತುಗಳು ಹೊಂದಿದವನು ಮುಂದೆ ಬಂದು ಇನ್ನೂ ಐದು ತಲಾಂತುಗಳನ್ನು ತಂದು, ‘ಯಜಮಾನನೇ, ನೀನು ಐದು ತಲಾಂತಗಳನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಐದು ತಲಾಂತು ಹೊಂದಿದವನು ಮುಂದೆಬಂದು ಇನ್ನೂ ಐದು ತಲಾಂತು ತಂದು - ಸ್ವಾಮೀ, ನೀನು ಐದು ತಲಾಂತನ್ನು ನನಗೆ ಕೊಟ್ಟಿದ್ದಿಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಐದು ತಲಾಂತು ಪಡೆದ ಸೇವಕನು ಇನ್ನೂ ಐದು ತಲಾಂತನ್ನು ತನ್ನ ಯಜಮಾನನ ಬಳಿಗೆ ತಂದು, ‘ಧಣಿಯೇ, ನೀನು ನನ್ನಲ್ಲಿ ಭರವಸೆಯಿಟ್ಟು ಐದು ತಲಾಂತನ್ನು ಕೊಟ್ಟೆ. ನಾನು ಅದನ್ನು ವಿನಿಯೋಗಿಸಿ ಇನ್ನೂ ಐದು ತಲಾಂತು ಸಂಪಾದಿಸಿದ್ದೇನೆ’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಐದು ಚಿನ್ನದ ನಾಣ್ಯಗಳನ್ನು ಹೊಂದಿದ್ದವನು ಬಂದು ಬೇರೆ ಐದು ಚಿನ್ನದ ನಾಣ್ಯಗಳನ್ನು ತಂದು, ‘ಒಡೆಯನೇ, ನೀನು ನನಗೆ ಐದು ಚಿನ್ನದ ನಾಣ್ಯಗಳನ್ನು ಒಪ್ಪಿಸಿದ್ದೆ. ನೋಡು, ಅವುಗಳಲ್ಲದೆ ಇನ್ನೂ ಬೇರೆ ಐದು ಚಿನ್ನದ ನಾಣ್ಯಗಳನ್ನು ನಾನು ಸಂಪಾದಿಸಿದ್ದೇನೆ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಪಾಂಚ್ ಹಜಾರ್ ಸೊನ್ಯಾಚ್ಯಾ ಗಾಲಿಯಾ ಘೆಟಲ್ಲೊ ಫಿಡೆ ಯೆಲೊ ಅನಿ ಅನಿ ಪಾಂಚ್ ಹಜಾರ್ ಗಾಲಿಯಾ ದಿವ್ನ್, ಮಾಲಿಕ್, ತುಮಿ ಮಾಕಾ ಪಾಂಚ್ ಹಜಾರ್ ಸೊನ್ಯಾಚ್ಯಾ ಗಾಲಿಯಾ ದಿಲ್ಲ್ಯಾಶಿ, ಖರೆ ಮಿಯಾ ಅನಿ ಪಾಂಚ್ ಹಜಾರ್ ಸೊನ್ಯಾಚ್ಯಾ ಗಾಲಿಯಾ ಕಮ್ವುಲಾ. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:20
8 ತಿಳಿವುಗಳ ಹೋಲಿಕೆ  

ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ಒಬ್ಬನು, “ನಿನ್ನಲ್ಲಿ ವಿಶ್ವಾಸವಿದೆ, ನನ್ನಲ್ಲಿ ಸತ್ಕ್ರಿಯೆಗಳಿವೆ,” ಎನ್ನಬಹುದು. ಅಂಥವನಿಗೆ, “ಸತ್ಕ್ರಿಯೆಗಳಿಲ್ಲದ ನಿನ್ನ ವಿಶ್ವಾಸವನ್ನು ನನಗೆ ತೋರಿಸು; ನನ್ನ ಸತ್ಕಾರ್ಯಗಳ ಮೂಲಕ ನನ್ನ ವಿಶ್ವಾಸವನ್ನು ನಿನಗೆ ವ್ಯಕ್ತಪಡಿಸುತ್ತೇನೆ,” ಎಂದು ಉತ್ತರಿಸಬಹುದು.


ನನ್ನನ್ನು ಚೇತನಗೊಳಿಸುತ್ತಿರುವ ಯೇಸುಕ್ರಿಸ್ತರ ಶಕ್ತಿಯಿಂದ ಈ ಗುರಿಯನ್ನು ಸಾಧಿಸಲು ಶ್ರಮವಹಿಸಿ ಹೋರಾಡುತ್ತಿದ್ದೇನೆ.


ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ಲೆಕ್ಕ ತೆಗೆದುಕೊಳ್ಳಲು ಆರಂಭಿಸಿದಾಗ ಹತ್ತು ಸಾವಿರ ‘ಚಿನ್ನದ ನಾಣ್ಯ’ಗಳನ್ನು ಸಾಲವಾಗಿ ತೆರಬೇಕಾಗಿದ್ದ ಒಬ್ಬನನ್ನು ಅವನ ಸಮ್ಮುಖಕ್ಕೆ ಕರೆತರಲಾಯಿತು.


ಹೊರಡುವಾಗ ತನ್ನ ಹತ್ತುಮಂದಿ ಸೇವಕರನ್ನು ಕರೆದು, ಒಬ್ಬೊಬ್ಬನಿಗೂ ಒಂದರಂತೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, “ನಾನು ಬರುವತನಕ ವ್ಯಾಪಾರ ಮಾಡಿಕೊಂಡಿರಿ,” ಎಂದು ಹೇಳಿ ಹೋದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು