Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:24 - ಕನ್ನಡ ಸತ್ಯವೇದವು C.L. Bible (BSI)

24 ತರುವಾಯ ಒಂದು ತಲೆಂತು ಪಡೆದವನೂ ಮುಂದೆ ಬಂದ; ‘ಒಡೆಯಾ, ನಿಮ್ಮ ಮನಸ್ಸು ಕಠಿಣ ಎಂಬುದನ್ನು ನಾನು ಬಲ್ಲೆ. ನೀವು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವರು; ನೀವು ತೂರದ ಎಡೆಯಲ್ಲಿ ರಾಶಿಮಾಡುವವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, ‘ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ತರುವಾಯ ಒಂದೇ ತಲಾಂತು ಹೊಂದಿದವನು ಸಹ ಮುಂದೆಬಂದು - ಸ್ವಾಮೀ, ನೀನು ಕಠಿಣ ಮನುಷ್ಯನು, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಬಳಿಕ ಒಂದು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ಬಹಳ ಕಠಿಣ ಮನುಷ್ಯನು ಎಂದು ನಾನು ಬಲ್ಲೆ. ನೀನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಆಗ ಒಂದು ಚಿನ್ನದ ನಾಣ್ಯ ಹೊಂದಿದ್ದವನು ಬಂದು, ‘ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಮಾನಾ ಎಕ್ ಹಜಾರ್ ಸೊನ್ಯಾಚ್ಯಾ ಗಾಲಿಯಾ ಘೆಟಲ್ಲೊ ಫಿಡೆ ಯೆಲೊ ಅನಿ, ಧನಿಯಾ, ತಿಯಾ ಲೈ ಕಟೊರ್ ಮಾನುಸ್ ಮನುನ್ ಮಾಕಾ ಗೊತ್ತ್ ಹಾಯ್. ಪೆರುನಸಲ್ಲ್ಯಾಕ್ಡೆ ತಿಯಾ ಕಾತರ್‍ತೆ ಅನಿ ಸಿಪ್ಡುನಸಲ್ಲ್ಯಾಕ್ಡೆ ರಾಸ್ ಘಾಲ್ತೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:24
18 ತಿಳಿವುಗಳ ಹೋಲಿಕೆ  

ಅವನು, ‘ನೋಡಿ, ನಾನು ಇಷ್ಟು ವರ್ಷಗಳಿಂದ ನಿಮಗೆ ಗುಲಾಮನಂತೆ ಸೇವೆಮಾಡುತ್ತಿದ್ದೇನೆ. ನಿಮ್ಮ ಮಾತನ್ನು ಎಂದೂ ಮೀರಿಲ್ಲ; ಆದರೂ ನಾನು ನನ್ನ ಸ್ನೇಹಿತರೊಡನೆ ಹಬ್ಬಮಾಡಲು ಒಂದು ಆಡುಮರಿಯನ್ನು ಕೂಡ ನೀವು ಕೊಟ್ಟಿಲ್ಲ.


ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ : ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?


ಹುಲುಮಾನವಾ, ದೇವರೊಡನೆ ವಾದಿಸಲು ನೀನಾರು? ಮಡಿಕೆಯು ತನ್ನನ್ನು ಮಾಡಿದವನನ್ನು ನೋಡಿ, “ನನ್ನನ್ನು ಹೀಗೇಕೆ ಮಾಡಿದೆ” ಎಂದು ಕೇಳುವುದುಂಟೇ?


ಶರೀರ ಸ್ವಭಾವದಲ್ಲೇ ಮಗ್ನವಾಗಿರುವ ಮನಸ್ಸು ದೇವರಿಗೆ ಶತ್ರು. ಅಂಥ ಮನಸ್ಸು ದೇವರ ನಿಯಮಕ್ಕೆ ಮಣಿಯುವುದಿಲ್ಲ. ಮಣಿಯಲು ಸಾಧ್ಯವೂ ಇಲ್ಲ.


“ನೀವು ನನ್ನನ್ನು ‘ಸ್ವಾಮೀ ಸ್ವಾಮೀ,’ ಎಂದು ಕರೆಯುತ್ತೀರಿ; ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ?


‘ಕಡೇಹೊತ್ತಿನಲ್ಲಿ ಬಂದ ಇವರು ಒಂದೇ ಒಂದು ಗಂಟೆ ಕೆಲಸಮಾಡಿದ್ದಾರೆ, ಬಿಸಿಲಲ್ಲಿ ಬೆಂದು, ದಿನವೆಲ್ಲಾ ದುಡಿದ ನಮ್ಮನ್ನು ಇವರಿಗೆ ಸರಿಸಮಮಾಡಿದ್ದೀರಲ್ಲಾ!’ ಎಂದರು.


“ನನ್ನನ್ನು ‘ಸ್ವಾಮೀ, ಸ್ವಾಮೀ,’ ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು.


“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ? ನಮ್ಮನ್ನು ನಾವೇ ತಗ್ಗಿಸಿಕೊಂಡಿದ್ದೇವೆ, ನೀನು ಗಮನಿಸದೆ ಇರುವುದೇಕೆ?” ಎಂದುಕೊಳ್ಳುತ್ತಾರೆ.


ಲೆಕ್ಕ ತೆಗೆದುಕೊಳ್ಳಲು ಆರಂಭಿಸಿದಾಗ ಹತ್ತು ಸಾವಿರ ‘ಚಿನ್ನದ ನಾಣ್ಯ’ಗಳನ್ನು ಸಾಲವಾಗಿ ತೆರಬೇಕಾಗಿದ್ದ ಒಬ್ಬನನ್ನು ಅವನ ಸಮ್ಮುಖಕ್ಕೆ ಕರೆತರಲಾಯಿತು.


ಆದ್ದರಿಂದ ನಾನು ಭಯಪಟ್ಟೆ; ಹೋಗಿ ನಿಮ್ಮ ತಲೆಂತನ್ನು ಭೂಮಿಯಲ್ಲಿ ಹೂತಿಟ್ಟೆ. ಇಗೋ, ಸ್ವೀಕರಿಸಿ, ನಿಮ್ಮದು ನಿಮಗೆ ಸಂದಿದೆ,’ ಎಂದ.


“ಆಗ ಧಣಿ ಅವನಿಗೆ, ‘ಎಲವೋ, ಮೈಗಳ್ಳನಾದ ದುಷ್ಟ ಸೇವಕ, ನಾನು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವನು; ನಾನು ತೂರದ ಎಡೆಯಲ್ಲಿ ರಾಶಿಮಾಡುವವನು ಎಂದು ನಿನಗೆ ಗೊತ್ತಿತ್ತಲ್ಲವೆ?


ಹೊರಡುವಾಗ ತನ್ನ ಹತ್ತುಮಂದಿ ಸೇವಕರನ್ನು ಕರೆದು, ಒಬ್ಬೊಬ್ಬನಿಗೂ ಒಂದರಂತೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, “ನಾನು ಬರುವತನಕ ವ್ಯಾಪಾರ ಮಾಡಿಕೊಂಡಿರಿ,” ಎಂದು ಹೇಳಿ ಹೋದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು