Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:36 - ಕನ್ನಡ ಸತ್ಯವೇದವು C.L. Bible (BSI)

36 ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಟ್ಟಿರಿ. ರೋಗದಿಂದಿದ್ದೆ, ನನ್ನನ್ನು ಆರೈಕೆಮಾಡಿದಿರಿ. ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಿದಿರಿ,’ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವದಕ್ಕೆ ಕೊಟ್ಟಿರಿ; ರೋಗದಲ್ಲಿ ಬಿದ್ದಿದ್ದೆನು, ನನ್ನನ್ನು ಆರೈಕೆ ಮಾಡುವದಕ್ಕೆ ಬಂದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವದಕ್ಕೆ ಬಂದಿರಿ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಟ್ಟಿರಿ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು, ನೀವು ನನಗೆ ಆರೈಕೆ ಮಾಡಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ನಾನು ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿದಿರಿ. ನಾನು ಅಸ್ವಸ್ಥನಾಗಿದ್ದೆನು, ನೀವು ನನ್ನನ್ನು ಉಪಚರಿಸಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ,’ ಎಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಮಿಯಾ ನಾಗ್ಡೊ ಹೊತ್ತೊ ತುಮಿ ಮಾಕಾ ನೆಸುಕ್ ದಿಲ್ಯಾಶಿ, ಮಿಯಾ ಶಿಕ್ ಪಡಲ್ಲೊ ತನ್ನಾ ಮಾಜಿ ಕಾಳ್ಜಿ ಕರ್‍ಲ್ಯಾಶಿ, ಮಿಯಾ ಬಂದಿಖಾನ್ಯಾತ್ ಹೊತ್ತೊ, ತನ್ನಾ ತುಮಿ ಮಾಕಾ ಭೆಟುಕ್ ಯೆಲ್ಲ್ಯಾಶಿ. ಮನುನ್ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:36
17 ತಿಳಿವುಗಳ ಹೋಲಿಕೆ  

ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ಸೆರೆಯಲ್ಲಿರುವವರನ್ನು ಸ್ಮರಿಸಿಕೊಳ್ಳಿ. ಅವರ ಸಂಗಡ ನೀವೂ ಸೆರೆಯಲ್ಲಿರುವಂತೆ ಭಾವಿಸಿಕೊಳ್ಳಿ. ಅನ್ಯಾಯಕ್ಕೆ ಒಳಗಾಗಿರುವವರನ್ನು ಜ್ಞಾಪಕದಲ್ಲಿಟ್ಟುಕೊಳ್ಳಿ. ಅನ್ಯಾಯಕ್ಕೆ ಒಳಗಾಗಬಲ್ಲ ದೇಹವೊಂದು ನಿಮಗೂ ಸಹ ಇದೆಯಲ್ಲವೇ?


ಸೆರೆಯಾಳುಗಳಿಗೆ ಸಂತಾಪ ತೋರಿಸಿದಿರಿ, ನಿಮ್ಮ ಸೊತ್ತನ್ನು ಸುಲಿಗೆಮಾಡಿದಾಗ ಸಂತೋಷದಿಂದ ಬಿಟ್ಟುಕೊಟ್ಟಿರಿ. ಏಕೆಂದರೆ, ಇದಕ್ಕೂ ಶ್ರೇಷ್ಠವಾದ ಹಾಗೂ ಶಾಶ್ವತವಾದ ಸೊತ್ತು ನಿಮಗಿದೆಯೆಂದು ಚೆನ್ನಾಗಿ ಅರಿತಿದ್ದಿರಿ.


ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”


“ನಿಮಗೆ ಎರಡು ಅಂಗಿಗಳಿದ್ದರೆ, ಒಂದನ್ನು ಏನೂ ಇಲ್ಲದವನಿಗೆ ಕೊಡಿ; ಅಂತೆಯೇ ಆಹಾರ ಉಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಉತ್ತರಕೊಟ್ಟನು.


ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ,’ ಎಂದು ಹೇಳುವನು.


ಹೌದು, ದುರ್ಬಲವಾದವುಗಳನ್ನು ನೀವು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ದಾರಿತಪ್ಪಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ, ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ.


ಮುಟ್ಟಿನ ಹೆಂಗಸನ್ನು ಕೂಡದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆ ಇರುವವನಿಗೆ ಹೊದಿಕೆಯನ್ನು ಹೊದಿಸಿ;


ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ?


ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,


ಅದಕ್ಕೆ ಆ ಸಜ್ಜನರು, ‘ಸ್ವಾಮೀ, ತಾವು ಯಾವಾಗ ಹಸಿದಿದ್ದನ್ನು ಕಂಡು ನಾವು ಆಹಾರ ಕೊಟ್ಟೆವು? ಬಾಯಾರಿದ್ದನ್ನು ಕಂಡು ಕುಡಿಯಲು ಕೊಟ್ಟೆವು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು