Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:40 - ಕನ್ನಡ ಸತ್ಯವೇದವು C.L. Bible (BSI)

40 ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 “ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 “ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತನ್ನಾ ರಾಜಾ ತೆಂಕಾ, ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗ್ತಾ, ಜೆ ಕಾಯ್ ತುಮಿ ಮಾಜ್ಯಾ ಹ್ಯಾ ಭಾವಾನಿತ್ಲ್ಯಾ ಎಕ್ ಬಾರಿಕ್ಲ್ಯಾ ಭಾವಾಕ್‍ ಸೈತ್ ಕರ್ಲ್ಯಾಶಿ ತೆ ಮಾಕಾಚ್ ಕರ್‍ಲ್ಯಾಶಿ! ಮನುನ್ ಜಬಾಬ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:40
42 ತಿಳಿವುಗಳ ಹೋಲಿಕೆ  

ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ನಿರ್ಗತಿಕನಿಗೆ ದಯೆತೋರಿಸುವವನು ಆತನನ್ನು ಘನಪಡಿಸುತ್ತಾನೆ.


ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”


ನೀವು ಕ್ರಿಸ್ತಭಕ್ತರು ಎಂದು ಯಾವನಾದರೂ ನಿಮಗೆ ಕುಡಿಯಲು ಒಂದು ಲೋಟ ನೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಅವನು ತಪ್ಪದೆ ಪಡೆಯುವನು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


“ನಿಮ್ಮನ್ನು ಸ್ವಾಗತಿಸುವವನು ನನ್ನನ್ನು ಸ್ವಾಗತಿಸುತ್ತಾನೆ; ನನ್ನನ್ನು ಸ್ವಾಗತಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವಾಗತಿಸುತ್ತಾನೆ.


“ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.


ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು?


ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ಸಹೋದರರೇ, ನೀವು ಮುಕ್ತ ಸ್ವತಂತ್ರ ಜೀವನವನ್ನು ನಡೆಸಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾರೆ. ಆದರೆ, ಆ ಸ್ವಾತಂತ್ರ್ಯವನ್ನು ದೈಹಿಕ ಬಯಕೆಗಳಿಗೆ ಸಾಧನವಾಗಿ ಮಾಡಿಕೊಳ್ಳಬೇಡಿ. ಬದಲಾಗಿ, ನೀವು ಒಬ್ಬರಿಗೊಬ್ಬರು ಪ್ರೀತಿಯಿಂದ ಸೇವೆಮಾಡಿರಿ.


ಆಗ ದಾವೀದನು, “ಹೆದರಬೇಡ; ನಿನ್ನ ತಂದೆ ಯೋನಾತಾನನ ನೆನಪಿನಲ್ಲಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ; ಇದಲ್ಲದೆ ನೀನು ಪ್ರತಿದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು,” ಎಂದು ಹೇಳಿದನು.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ಆಗ ಯೇಸು ಅವರಿಗೆ, “ಭಯಪಡಬೇಡಿ, ನನ್ನ ಸೋದರರ ಬಳಿಗೆ ಹೋಗಿ ಅವರು ಗಲಿಲೇಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವರೆಂದೂ ತಿಳಿಸಿರಿ,” ಎಂದು ಹೇಳಿದರು.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರು ಇನ್ನೂ ಉಳಿದಿದ್ದಾರೋ? ಯೋನಾತಾನನ ಸಲುವಾಗಿ ನಾನು ಅವರಿಗೆ ದಯೆತೋರಿಸಬೇಕೆಂದಿರುತ್ತೇನೆ,” ಎಂದು ವಿಚಾರಿಸಿದನು.


ನಾವು ನಮ್ಮನ್ನೇ ಕುರಿತು ಪ್ರಚಾರಮಾಡುತ್ತಿಲ್ಲ. ಆದರೆ ಕ್ರಿಸ್ತಯೇಸುವೇ ಪ್ರಭುವೆಂದೂ ಅವರಿಗೋಸ್ಕರ ನಾವು ನಿಮ್ಮ ದಾಸರೆಂದೂ ಪ್ರಚುರಪಡಿಸುತ್ತಿದ್ದೇವೆ.


ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.


ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸೋಣ. ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ; ಅವನು ಇಲ್ಲಿಗೆ ಬಂದಾಗೆಲ್ಲಾ ಅದರಲ್ಲಿ ವಾಸಮಾಡಲಿ,” ಎಂದು ಹೇಳಿದಳು.


ತಾವು ರೋಗಿಯಾಗಿರುವುದನ್ನು ಅಥವಾ ಬಂಧಿಯಾಗಿರುವುದನ್ನು ಕಂಡು ನಾವು ಸಂಧಿಸಲು ಬಂದೆವು?’ ಎಂದು ಕೇಳುವರು.


ಅದಕ್ಕೆ ಪ್ರತ್ಯುತ್ತರವಾಗಿ ಅರಸನು, ‘ಇವರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವರು.


“ಸರ್ವೇಶ್ವರನ ನಾಮದಲಿ ಬರುವ ಅರಸನಿಗೆ ಜಯಜಯವಾಗಲಿ! ಶಾಂತಿ ಸ್ವರ್ಗದಲಿ, ಮಹಿಮೆ ಮಹೋನ್ನತದಲಿ!” ಎಂದು ಜಯಘೋಷ ಮಾಡುತ್ತಿದ್ದರು.


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


ಆದರೆ ಆ ದಿನದಲ್ಲಿ ನಿನ್ನನ್ನು ನಾನು ಉದ್ಧರಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ. ನೀನು ಯಾರಿಗಾಗಿ ಭಯಪಡುತ್ತಿಯೋ ಅವರ ಕೈಗೆ ಸಿಕ್ಕುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು