Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:43 - ಕನ್ನಡ ಸತ್ಯವೇದವು C.L. Bible (BSI)

43 ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ,’ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಪರದೇಶಿಯಾಗಿದ್ದೆನು, ನೀವು ನನ್ನನ್ನು ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವದಕ್ಕೆ ಕೊಡಲಿಲ್ಲ; ರೋಗದಲ್ಲಿ ಬಿದ್ದಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವದಕ್ಕೆ ಬರಲಿಲ್ಲವೆಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ನಿಮ್ಮ ಮನೆಯೊಳಕ್ಕೆ ಸೇರಿಸಿಕೊಳ್ಳಲಿಲ್ಲ. ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು ಮತ್ತು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡಿಕೊಳ್ಳಲಿಲ್ಲ’ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಳ್ಳಲಿಲ್ಲ. ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ. ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂದರ್ಶಿಸಲಿಲ್ಲ,’ ಎಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಮಿಯಾ ಪರ್‌ದೆಶಿ ಹೊತ್ತೊ ತನ್ನಾ ತುಮಿ ಮಾಕಾ ತುಮ್ಚ್ಯಾ ಘರಾತ್ನಿ ಅಸ್ರೊ ದಿವ್ಕನ್ಯಾಶಿ, ಮಿಯಾ ನಾಗ್ಡೊ ಹೊತ್ತೊ ತನ್ನಾ ತುಮಿ ಮಾಕಾ ನೆಸುಕ್ ಕಪ್ಡೆ ದಿವ್ಕನ್ಯಾಶಿ. ಶಿಕ್ ಹೊತ್ತೊ ಅನಿ ಬಂದಿಖಾನ್ಯಾತ್ ಹೊತ್ತೊ ತನ್ನಾ ತುಮಿ ಮಾಜಿ ಕಾಳ್ಜಿ ಕರುಕ್‍ನ್ಯಾಶಿ. ಮನುನ್ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:43
10 ತಿಳಿವುಗಳ ಹೋಲಿಕೆ  

ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಟ್ಟಿರಿ. ರೋಗದಿಂದಿದ್ದೆ, ನನ್ನನ್ನು ಆರೈಕೆಮಾಡಿದಿರಿ. ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಿದಿರಿ,’ ಎಂದು ಹೇಳುವನು.


ಏಕೆಂದರೆ ನಾನು ಹಸಿದಿದ್ದೆ, ನೀವು ನನಗೆ ಆಹಾರಕೊಡಲಿಲ್ಲ; ಬಾಯಾರಿದ್ದೆ, ಕುಡಿಯಲು ಕೊಡಲಿಲ್ಲ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ನೀಡಲಿಲ್ಲ;


ಅದಕ್ಕೆ ಅವರು ಕೂಡ, ‘ಸ್ವಾಮೀ, ತಾವು ಯಾವಾಗ ಹಸಿದಿದ್ದಿರಿ, ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ, ಮತ್ತು ಬಂಧಿಯಾಗಿ ಇದ್ದಿರಿ ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರಮಾಡದೆಹೋದೆವು? ಎಂದು ಪ್ರಶ್ನಿಸುವರು.


ಆದುದರಿಂದ ಅವರು ತಂಗುವುದಕ್ಕಾಗಿ ಗಿಬೆಯಕ್ಕೆ ಹೋಗಿ, ಯಾರೂ ಮನೆಯಲ್ಲಿ ಸೇರಿಸಿಕೊಳ್ಳದೆ ಹೋದುದರಿಂದ ಸಂತೆ ಬೀದಿಯಲ್ಲೇ ಕುಳಿತುಕೊಂಡರು.


ಬಟ್ಟೆಯಿಲ್ಲದ ಬಡವನನು ನೋಡಿದಾಗಲೆಲ್ಲಾ ಹೊದಿಕೆಯಿಲ್ಲದೆ ನಡುಗುವುದನು ಕಂಡಾಗಲೆಲ್ಲಾ,


ಇಸ್ರಯೇಲರ ದೇವರಾದ ಸರ್ವೇಶ್ವರ, ತಮ್ಮ ಜನರೆಂಬ ಕುರಿಗಳನ್ನು ಮೇಯಿಸುವ ಕುರಿಗಾಹಿಗಳ ದ್ರೋಹವನ್ನು ಅರಿತಿದ್ದಾರೆ. ಅಂಥವರನ್ನು ಕುರಿತು ಹೀಗೆನ್ನುತ್ತಾರೆ : “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟಿದ್ದೀರಿ. ಅವುಗಳ ಬಗ್ಗೆ ಎಚ್ಚರ ವಹಿಸಲೇ ಇಲ್ಲ. ನಿಮ್ಮ ನೀಚಕಾರ್ಯಗಳ ನಿಮಿತ್ತ ನಿಮ್ಮನ್ನು ವಿಚಾರಣೆಗೆ ಗುರಿಪಡಿಸುವೆನು.


ಜನಸಾಮಾನ್ಯರೂ ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿದ್ದಾರೆ, ವಿದೇಶಿಗಳನ್ನು ಅನ್ಯಾಯವಾಗಿ ನಸುಕಿಬಿಟ್ಟಿದ್ದಾರೆ.


ಕೆಲವು ಕಾಲದ ನಂತರ ಪೌಲನು, “ನಾವು ಪ್ರಭುವಿನ ವಾಕ್ಯವನ್ನು ಈಗಾಗಲೇ ಬೋಧಿಸಿದ ಪ್ರತಿಯೊಂದು ಪಟ್ಟಣಗಳಿಗೆ ಪುನಃ ಹೋಗೋಣ. ಅಲ್ಲಿ ನಮ್ಮ ಸಹೋದರರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿ ಬರೋಣ ಬಾ,” ಎಂದು ಬಾರ್ನಬನನ್ನು ಕರೆದನು.


ಅತಿಥಿಸತ್ಕಾರ ಮಾಡುವುದನ್ನು ಮರೆಯದಿರಿ. ಅದನ್ನು ಮಾಡುವಾಗ ಅರಿಯದೆ ಕೆಲವರು ದೇವದೂತರನ್ನೇ ಉಪಚರಿಸಿದ್ದಾರೆ.


ಸೆರೆಯಲ್ಲಿರುವವರನ್ನು ಸ್ಮರಿಸಿಕೊಳ್ಳಿ. ಅವರ ಸಂಗಡ ನೀವೂ ಸೆರೆಯಲ್ಲಿರುವಂತೆ ಭಾವಿಸಿಕೊಳ್ಳಿ. ಅನ್ಯಾಯಕ್ಕೆ ಒಳಗಾಗಿರುವವರನ್ನು ಜ್ಞಾಪಕದಲ್ಲಿಟ್ಟುಕೊಳ್ಳಿ. ಅನ್ಯಾಯಕ್ಕೆ ಒಳಗಾಗಬಲ್ಲ ದೇಹವೊಂದು ನಿಮಗೂ ಸಹ ಇದೆಯಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು