Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:9 - ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ ಅವರು, ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆಹೋದೀತು, ನೀವು ಅಂಗಡಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಮ್ಮ ಆರತಿಗಳು ಆರಿಹೋಗುತ್ತವೆ ಎಂದು ಹೇಳಿದರು. ಅದಕ್ಕೆ ಆ ಬುದ್ಧಿವಂತೆಯರು - ನಿಮಗೆ ಕೊಟ್ಟರೆ ನಮಗೂ ನಿಮಗೂ ಕೂಡ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೇದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಬುದ್ಧಿವಂತೆಯರು, ‘ಇಲ್ಲ! ನಮ್ಮಲ್ಲಿರುವ ಎಣ್ಣೆ ನಮಗೇ ಸಾಕಾಗದಿರಬಹುದು. ಅಂಗಡಿಗೆ ಹೋಗಿ ಕೊಂಡುಕೊಳ್ಳಿರಿ’ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಆದರೆ ಬುದ್ಧಿವಂತೆಯರು ಉತ್ತರವಾಗಿ, ‘ಹಾಗಲ್ಲ, ಅದು ನಮಗೂ ಸಾಲದೆ ಹೋದೀತು. ಆದ್ದರಿಂದ ನೀವು ಮಾರುವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡುಕೊಳ್ಳಿರಿ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತನ್ನಾ ಬುದ್ದ್ ಅಸಲ್ಲ್ಯಾ ಧೆಡ್ನಿಯಾನಿ, ನಾ ನಾ, ಅಮ್ಚೆಕ್ಡೆ ಹೊತ್ತೆ ತೆಲ್ ತುಮ್ಕಾ ದಿಲ್ಯಾರ್ ಅಮ್ಕಾಬಿ ಪಾವಿನಾ ಹೊಯ್ಲ್. ತುಮಿ ಇಕ್ತಲ್ಯಾಂಚ್ಯಾಕ್ಡೆ ಜಾವ್ನ್ ಇಕಾತ್ ಘೆಟಲ್ಲೆ ಬರೆ. ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:9
12 ತಿಳಿವುಗಳ ಹೋಲಿಕೆ  

ನೋಹ, ದಾನಿಯೇಲ, ಯೋಬ, ಎಂಬವರು ಅದರಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಗನನ್ನಾಗಲಿ ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.”


ನಿನ್ನ ದುರಾಲೋಚನೆಗಾಗಿ ಪಶ್ಚಾತ್ತಾಪಪಡು; ನಿನ್ನ ದುರುದ್ದೇಶವನ್ನು ಕ್ಷಮಿಸಲೆಂದು ಪ್ರಭುವನ್ನು ಪ್ರಾರ್ಥಿಸು; ಅವರು ಕ್ಷಮಿಸಬಹುದು.


ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


“ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಅವರಲ್ಲಿ ಐವರು ವಿವೇಕಿಗಳು, ಐವರು ಅವಿವೇಕಿಗಳು.


ಅವಿವೇಕಿಗಳು, ‘ನಮ್ಮ ದೀಪಗಳು ಆರಿಹೋಗುತ್ತಾ ಇವೆ; ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿ,’ ಎಂದು ವಿವೇಕಿಗಳನ್ನು ಕೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು