Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:10 - ಕನ್ನಡ ಸತ್ಯವೇದವು C.L. Bible (BSI)

10 ಇದನ್ನು ಅರಿತುಕೊಂಡ ಯೇಸು ಶಿಷ್ಯರಿಗೆ, “ಈ ಮಹಿಳೆಗೇಕೆ ಕಿರುಕುಳ ಕೊಡುತ್ತೀರಿ? ಈಕೆ ನನಗೊಂದು ಸತ್ಕಾರ್ಯವನ್ನೇ ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೇಸು ಅದನ್ನು ತಿಳಿದು ಅವರಿಗೆ, “ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತಿದ್ದೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೇಸು ಅದನ್ನು ತಿಳಿದು ಅವರಿಗೆ - ಈ ಸ್ತ್ರೀಗೆ ಯಾಕೆ ತೊಂದರೆಕೊಡುತ್ತೀರಿ? ಈಕೆ ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಈ ಘಟನೆಗೆ ಕಾರಣವನ್ನು ತಿಳಿದಿದ್ದ ಯೇಸು ತನ್ನ ಶಿಷ್ಯರಿಗೆ, “ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತೀರಿ? ಆಕೆಯು ನನಗೆ ಬಹಳ ಒಳ್ಳೆಯ ಕಾರ್ಯವನ್ನು ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೇಸು ಅದನ್ನು ತಿಳಿದವರಾಗಿ ಅವರಿಗೆ, “ನೀವು ಏಕೆ ಈ ಸ್ತ್ರೀಗೆ ತೊಂದರೆಪಡಿಸುತ್ತೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆಜುಕ್ ತೆನಿ ಕಾಯ್ ಮನುಲ್ಯಾತ್ ಮನ್ತಲೆ ಕಳ್ಳೆ. ತಸೆಮನುನ್ ತೆನಿ ತೆಂಕಾ,“ಕಶ್ಯಾಕ್ ಮನುನ್ ತುಮಿ ಹ್ಯಾ ಬಾಯ್ಕೊಮನ್ಸಿಕ್ ತರಾಸ್ ದಿವ್ಕ್ ಲಾಗ್ಲ್ಯಾಶಿ? ತೆನಿ ಮಾಜೆಸಾಟ್ನಿ ಎಕ್ ಬರೆ ಕಾಮ್ ಕರ್‍ಲಿನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:10
24 ತಿಳಿವುಗಳ ಹೋಲಿಕೆ  

ದೇವರಲ್ಲಿ ವಿಶ್ವಾಸವಿಟ್ಟವರು ಸತ್ಕಾರ್ಯಗಳಲ್ಲಿ ನಿರತರಾಗುವಂತೆ ನೀನು ಇವೆಲ್ಲವನ್ನೂ ದೃಢವಾಗಿ ಬೋಧಿಸಬೇಕೆಂಬುದೇ ನನ್ನ ಅಪೇಕ್ಷೆ. ಇವು ಎಲ್ಲರಿಗೂ ಹಿತಕರವಾಗಿವೆ ಹಾಗೂ ಪ್ರಯೋಜನಕರವಾಗಿವೆ.


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ನಮ್ಮ ಜನರು ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಕುಂದುಕೊರತೆಯಲ್ಲಿರುವವರಿಗೆ ನೆರವಾಗಲಿ. ಪರೋಪಕಾರವನ್ನು ಕಲಿತುಕೊಳ್ಳಲಿ. ವ್ಯರ್ಥಜೀವನವನ್ನು ನಡೆಸದಿರಲಿ.


ಆಳುವವರಿಗೂ ಅಧಿಕಾರಿಗಳಿಗೂ ಕ್ರೈಸ್ತವಿಶ್ವಾಸಿಗಳು ವಿಧೇಯರಾಗಿ ನಡೆದುಕೊಳ್ಳಬೇಕೆಂದು ಜ್ಞಾಪಕಪಡಿಸು. ಎಲ್ಲಾ ಸತ್ಕಾರ್ಯಗಳನ್ನು ಕೈಗೊಳ್ಳಲು ಅವರು ಸಿದ್ಧರಿರಬೇಕು.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ತಾವು ದೇವರನ್ನು ಬಲ್ಲವರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಇಂಥವರು ಅವಿಧೇಯರೂ ಅಸಹ್ಯರೂ ಆಗಿರುವುದರಿಂದ ಯಾವುದೇ ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆ.


ಹೀಗಿರಲಾಗಿ, ಒಬ್ಬನು ಕೀಳುತನದಿಂದ ತನ್ನನ್ನು ತಾನೇ ಶುದ್ಧೀಕರಿಸಿಕೊಂಡರೆ, ಅವನು ಉತ್ತಮ ಬಳಕೆಗೆ ಯೋಗ್ಯನಾಗುತ್ತಾನೆ. ಅಂಥವನು ದೇವರ ಸೇವೆಗೆ ಮೀಸಲಾಗುತ್ತಾನೆ. ಸತ್ಕಾರ್ಯಗಳನ್ನು ಕೈಗೊಳ್ಳಲು ಸಿದ್ಧನಾಗಿರುತ್ತಾನೆ.


ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಯಾರಾದರೂ ಧರ್ಮಾಧ್ಯಕ್ಷನಾಗಲು ಅಪೇಕ್ಷಿಸಿದರೆ, ಅಂಥವನು ಉತ್ತಮ ಸೇವೆಯನ್ನೇ ಬಯಸುತ್ತಾನೆಂಬುದು ನಿಜ.


ಸಕಲ ಸತ್ಕಾರ್ಯಗಳಲ್ಲೂ ಸನ್ನುಡಿಯಲ್ಲೂ ನಿಮ್ಮನ್ನು ದೃಢಪಡಿಸಲಿ.


ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ಇನ್ನು ಮೇಲೆ ಯಾರೂ ನನಗೆ ತೊಂದರೆ ಕೊಡದಿರಲಿ. ಯೇಸುವಿನ ದಾಸನೆಂದು ಸೂಚಿಸುವ ಕೆಂಗುರುತುಗಳು ನನ್ನ ದೇಹದಲ್ಲಿ ಮುದ್ರಿತವಾಗಿವೆ.


ನಿಮಗೆ ಕಿರುಕುಳ ಕೊಡುತ್ತಿರುವವರು ತಮ್ಮ ಅಂಗಚ್ಛೇದವನ್ನಾದರೂ ಮಾಡಿಕೊಂಡರೆ ಲೇಸು.


ವಾಸ್ತವವಾಗಿ, ಬೇರೆ ಯಾವ ಶುಭಸಂದೇಶವೂ ಇಲ್ಲ. ಆದರೆ ಕೆಲವರು ನಿಮ್ಮಲ್ಲಿ ಗೊಂದಲವೆಬ್ಬಿಸಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಮಾರ್ಪಡಿಸಲು ಯತ್ನಿಸುತ್ತಾ ಇದ್ದಾರೆ.


ಸಕಲ ವಿಧವಾದ ವರದಾನಗಳನ್ನು ನಿಮಗೆ ಯಥೇಚ್ಛವಾಗಿ ನೀಡಬಲ್ಲ ಶಕ್ತಿ ದೇವರಿಗಿದೆ. ನೀವು ಸದಾ ಸಮೃದ್ಧಿಯಿಂದಿರುವಿರಿ. ಹೀಗೆ ಸಕಲ ಸತ್ಕಾರ್ಯಗಳಿಗೆ ಹೃತ್ಪೂರ್ವಕವಾಗಿ ನೆರವಾಗುವಿರಿ.


ಅದಕ್ಕೆ ಯೇಸು, “ಈಕೆಯನ್ನು ಸುಮ್ಮನೆ ಬಿಡಿ, ಕಿರುಕುಳ ಕೊಡಬೇಡಿ; ಈಕೆ ನನಗೊಂದು ಸತ್ಕಾರ್ಯವನ್ನೇ ಮಾಡಿದ್ದಾಳೆ;


ದೇವರ ಪಕ್ಷ ವಹಿಸಿ ನೀವು ಅನ್ಯಾಯ ನುಡಿಯುವಿರೋ? ಅವರಿಗೋಸ್ಕರ ಕಪಟ ಮಾತಾಡುವಿರೋ?


ಇದಲ್ಲದೆ, ನನ್ನ ದೇವರ ಕೃಪಾಹಸ್ತ ನನ್ನನ್ನು ಹೇಗೆ ನಡೆಸಿತೆಂಬುದನ್ನೂ ರಾಜನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆ. ಆಗ ಅವರು, “ಬನ್ನಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು.


ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ಈ ತೈಲವನ್ನು ಅಧಿಕ ಬೆಲೆಗೆ ಮಾರಿ, ಬಂದ ಹಣವನ್ನು ಬಡವರಿಗೆ ಕೊಡಬಹುದಿತ್ತಲ್ಲಾ,” ಎಂದರು.


ಬಡಬಗ್ಗರು ನಿಮ್ಮ ಸಂಗಡ ಯಾವಾಗಲೂ ಇರುತ್ತಾರೆ. ಆದರೆ ನಾನು ನಿಮ್ಮ ಸಂಗಡ ಯಾವಾಗಲೂ ಇರುವುದಿಲ್ಲ.


ಯೇಸುಸ್ವಾಮಿ ಇನ್ನೂ ಮಾತನಾಡುತ್ತಾ ಇರುವಾಗಲೇ ಒಬ್ಬನು ಯಾಯೀರನ ಮನೆಯಿಂದ ಬಂದು ಆ ಯಾಯಿರನಿಗೆ, “ನಿಮ್ಮ ಮಗಳು ತೀರಿಹೋದಳು. ಇನ್ನು ಗುರುವಿಗೆ ತೊಂದರೆಕೊಡಬೇಡಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು